ಪಶ್ಚಿಮ ಬಂಗಾಳದಲ್ಲಿ ತೈಲ ಟ್ಯಾಂಕರ್ ಹಾಗೂ ಬಸ್ ನಡುವೆ ಅಪಘಾತ ಉಂಟಾಗಿ 27 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ತೈಲ ಟ್ಯಾಂಕರ್ ಮತ್ತು ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ (ಎಸ್‌ಬಿಎಸ್‌ಟಿಸಿ) ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಟೊಮ್ಲುಕ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ, ಅಲ್ಲಿ 12 ಪ್ರಯಾಣಿಕರಿಗೆ ಚಿಕಿತ್ಸೆ ನೀಡಿ ತಕ್ಷಣವೇ ಬಿಡುಗಡೆ ಮಾಡಲಾಗಿದೆ.
ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು
ಆದರೆ, ಉಳಿದ 15 ಮಂದಿಯ ಗಾಯಗಳು ಗಂಭೀರವಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಕ್ರಾಸಿಂಗ್ ಬಳಿ ಅಪಘಾತ ಸಂಭವಿಸಿದ್ದು, ರಸ್ತೆ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಅಡೆತಡೆ ಸೃಷ್ಟಿಯಾಗಿದೆ. ಬಸ್ ದಿಘಾದಿಂದ ಕೋಲ್ಕತ್ತಾಗೆ ತೆರಳುತ್ತಿತ್ತು ಎನ್ನಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ