AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Election Exit Poll Results 2026: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಭಾರೀ ಹಿನ್ನಡೆ; ಬಿಜೆಪಿಗೆ 146-175 ಸ್ಥಾನಗಳ ನಿರೀಕ್ಷೆ

West Bengal Assembly Election Exit Poll Results 2026 in Kannada: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭದ್ರಕೋಟೆಯನ್ನು ಬಿಜೆಪಿ ಮುರಿದು ಅಧಿಕಾರಕ್ಕೆ ಬರುವುದು ಖಚಿತ ಎಂದು 3 ಎಕ್ಸಿಟ್ ಪೋಲ್ ಹೇಳಿವೆ. ಒಂದು ಚುನಾವಣೋತ್ತರ ಸಮೀಕ್ಷೆ ಮಾತ್ರ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರಕ್ಕೆ ಬರಲಿದೆ ಎಂದು ಮುನ್ಸೂಚನೆ ನೀಡಿದೆ. ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ವಿಧಾನಸಭಾ ಚುನಾವಣೆ ಇಂದು ಮುಗಿದಿದೆ. ಈ ಬಾರಿ ಬಂಗಾಳದಲ್ಲಿ ದಾಖಲೆಯ ಪ್ರಮಾಣದ ಮತದಾನವಾಗಿದೆ.

West Bengal Election Exit Poll Results 2026: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಭಾರೀ ಹಿನ್ನಡೆ; ಬಿಜೆಪಿಗೆ 146-175 ಸ್ಥಾನಗಳ ನಿರೀಕ್ಷೆ
Pm Modi And Mamata Banerjee
ಸುಷ್ಮಾ ಚಕ್ರೆ
|

Updated on:Apr 29, 2026 | 8:28 PM

Share

ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳದಲ್ಲಿ (West Bengal Elections) ಈ ಬಾರಿ ಬಿಜೆಪಿ ಮಮತಾ ಬ್ಯಾನರ್ಜಿಯವರ ಕೋಟೆಯನ್ನು ಛಿದ್ರಗೊಳಿಸುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಟಿಎಂಸಿ ಸತತ ನಾಲ್ಕನೇ ಅವಧಿಗೆ ಅಧಿಕಾರಕ್ಕೆ ಮರಳುತ್ತದೆ ಎಂದು ಒಂದು ಎಕ್ಸಿಟ್ ಪೋಲ್ ಮಾತ್ರ ಅಭಿಪ್ರಾಯಪಟ್ಟಿದೆ. ಉಳಿದ 3 ಎಕ್ಸಿಟ್ ಪೋಲ್ ಬಿಜೆಪಿಗೆ 146-175 ಸ್ಥಾನಗಳು ಸಿಗುವ ನಿರೀಕ್ಷೆಯಿಟ್ಟಿವೆ. ಪೀಪಲ್ಸ್ ಪಲ್ಸ್ ಎಂಬ ಒಂದು ಸಮೀಕ್ಷಕರು ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದಿದೆ.

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಎರಡನೇ ಹಂತವು ಇಂದು ಸಂಜೆ 6 ಗಂಟೆಗೆ ಮುಕ್ತಾಯಗೊಂಡಿತು. ಬಂಗಾಳದಲ್ಲಿ ಕಮಲವನ್ನು ಅರಳಿಸಲೇಬೇಕೆಂದು ಹಠ ತೊಟ್ಟಿದ್ದ ಬಿಜೆಪಿ ಪಶ್ಚಿಮ ಬಂಗಾಳದ ಉದ್ದಗಲಕ್ಕೂ ಭರ್ಜರಿ ಪ್ರಚಾರ ನಡೆಸಿತ್ತು. ಅದಕ್ಕೆ ಸೂಕ್ತ ಪ್ರತಿಫಲ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಏಕೆಂದರೆ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿದಿವೆ. ಇದಾದ ನಂತರ ಚುನಾವಣೋತ್ತರ ಸಮೀಕ್ಷೆಯನ್ನು ಬಿಡುಗಡೆ ಮಾಡಲಾಯಿತು. ಆ ಬಗ್ಗೆ ಪೂರ್ತಿ ವಿವರ ಇಲ್ಲಿದೆ.

ಇದನ್ನೂ ಓದಿ:  5 State Assembly Election Exit Poll Results 2026: ಅಸ್ಸಾಂ, ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಜಯ, ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಗೆ ಗೆಲುವು; ಎಕ್ಸಿಟ್ ಪೋಲ್ ಸಮೀಕ್ಷೆ ಇಲ್ಲಿದೆ

  1. ಮ್ಯಾಟ್ರಿಜ್ ನ್ಯೂಸ್ ಸಮೀಕ್ಷೆಯು ಬಿಜೆಪಿ ಮತ್ತು ಟಿಎಂಸಿ ನಡುವೆ ನಿಕಟ ಸ್ಪರ್ಧೆಯನ್ನು ಸೂಚಿಸುತ್ತದೆ. ಬಿಜೆಪಿ 146-161 ಸ್ಥಾನಗಳನ್ನು ಮತ್ತು ಟಿಎಂಸಿ 130-140 ಸ್ಥಾನಗಳನ್ನು ಗಳಿಸುತ್ತದೆ ಎಂದು ಹೇಳಿದೆ.
  2. ಪೋಲ್ ಡೈರಿಯ ಸಮೀಕ್ಷೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮುನ್ನಡೆಯನ್ನು ಸೂಚಿಸುತ್ತದೆ. ಬಿಜೆಪಿಗೆ 142-171 ಸ್ಥಾನಗಳನ್ನು ಅಂದಾಜಿಸಲಾಗಿದೆ. ಟಿಎಂಸಿ 99ರಿಂದ 127 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಹೇಳಿದೆ.
  3. ಎಬಿಪಿ ಸಮೀಕ್ಷೆ ಪಶ್ಚಿಮ ಬಂಗಾಳದಲ್ಲಿ ನಿಕಟ ಸ್ಪರ್ಧೆಯನ್ನು ಸೂಚಿಸುತ್ತವೆ. ಟಿಎಂಸಿ 125ರಿಂದ 140 ಸ್ಥಾನಗಳನ್ನು ಗೆಲ್ಲುವ ಅಂದಾಜಿದೆ. ಬಿಜೆಪಿ 146ರಿಂದ 161 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.
  4. ಪಿಎಂಎಆರ್‌ಕ್ಯೂ ಸಮೀಕ್ಷೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಲವಾದ ಮುನ್ನಡೆಯನ್ನು ಸೂಚಿಸುತ್ತದೆ. ಬಿಜೆಪಿ 150ರಿಂದ 175 ಸ್ಥಾನಗಳನ್ನು ಪಡೆಯಲಿದೆ. ಟಿಎಂಸಿ 118ರಿಂದ 138 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಕಾಂಗ್ರೆಸ್ 2ರಿಂದ 6 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಹೇಳಿದೆ.
  5. ಚಾಣಕ್ಯ ಸ್ಟ್ರಾಟಜೀಸ್ ಸಮೀಕ್ಷೆಯು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಸ್ಪಷ್ಟ ಮುನ್ನಡೆಯನ್ನು ಸೂಚಿಸುತ್ತದೆ. ಬಿಜೆಪಿ 150ರಿಂದ 160 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದೆ. ಟಿಎಂಸಿ ಮೈತ್ರಿಕೂಟವು 130ರಿಂದ 140 ಸ್ಥಾನಗಳನ್ನು ಗಳಿಸುವ ಅಂದಾಜಿದೆ.
  6. ಪೀಪಲ್ಸ್ ಪಲ್ಸ್ ನಿರ್ಗಮನ ಸಮೀಕ್ಷೆಯು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) 110ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಅಂದಾಜಿಸಿದೆ. ಬಂಗಾಳದಲ್ಲಿ ಟಿಎಂಸಿ 117ರಿಂದ 187 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಬಿಜೆಪಿ 95ರಿಂದ 110 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಕಾಂಗ್ರೆಸ್ 1ರಿಂದ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:22 pm, Wed, 29 April 26

Follow Us