West Bengal Election 2021 Phase 1 Voting Live: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ಆರಂಭ; ರಂಗೇರಲಿದೆ ಚುನಾವಣಾ ಕಣ
ಇಂದು ಚುನಾವಣೆ ನಡೆಯುವ 30 ಕ್ಷೇತ್ರಗಳಲ್ಲಿ ಬಿಜೆಪಿ 29 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಬಿಜೆಪಿ ಮಿತ್ರಪಕ್ಷ ಎಜೆಎಸ್‌ಯು ಒಂದು ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಿದೆ. ಟಿಎಂಸಿ ಕೂಡ 29 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಟಿಎಂಸಿ ಬೆಂಬಲ ಘೋಷಿಸಿದೆ.
ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ಆರಂಭವಾಗಲಿದೆ. ಪಶ್ಚಿಮಬಂಗಾಳದ 30 ವಿಧಾನಸಭಾ ಕ್ಷೇತ್ರಗಳ 191 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ಬರೆಯಲಿದ್ದಾರೆ. ಬಂಕುರಾ, ಪುರುಲಿಯಾ, ಜಾರ್ಗ್ರಾಮ್, ಪೂರ್ವ ಮಿಡ್ನಾಪುರ ಮತ್ತು ಪಶ್ಚಿಮ ಮಿಡ್ನಾಪುರ ಕ್ಷೇತ್ರಗಳು ಇಂದು ಮತದಾನ ನಡೆಯುವ ಮಹತ್ವದ ಕ್ಷೇತ್ರಗಳಾಗಿವೆ. ಇಂದು ನಡೆಯಲಿರುವ ಕ್ಷೇತ್ರಗಳಲ್ಲಿ 2016 ರಲ್ಲಿ ಟಿಎಂಸಿ 30 ಸ್ಥಾನಗಳಲ್ಲಿ 27 ಸ್ಥಾನಗಳನ್ನು ಗೆದ್ದಿತ್ತು ಕಾಂಗ್ರೆಸ್ ಕೇವಲ ಎರಡು ಸ್ಥಾನಗಳಲ್ಲಿ ಗೆದ್ದಿತ್ತು. ಇಂದು ಚುನಾವಣೆ ನಡೆಯುವ 30 ಕ್ಷೇತ್ರಗಳಲ್ಲಿ ಬಿಜೆಪಿ 29 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಬಿಜೆಪಿ ಮಿತ್ರಪಕ್ಷ ಎಜೆಎಸ್‌ಯು ಒಂದು ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಿದೆ. ಟಿಎಂಸಿ ಕೂಡ 29 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಟಿಎಂಸಿ ಬೆಂಬಲ ಘೋಷಿಸಿದೆ. ಬೆಳಗ್ಗೆ 8ರಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6ಕ್ಕೆ ಮುಕ್ತಾಯವಾಗಲಿದೆ.
Published On - 3:00 pm, Sat, 27 March 21