West Bengal Assembly Elections 2021: ಟಿಎಂಸಿ ಖೇಲ್ ಖತಮ್, ವಿಕಾಸ್ ಶುರು: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Narendra Modi in West Bengal: ನನ್ನ ಬಗ್ಗೆ ಏನೇನೋ ಹೇಳುತ್ತಾರೆ. ಕೆಲವೊಮ್ಮೆ ರಾವಣ, ಕೆಲವೊಮ್ಮೆ ಸೈತಾನ, ಗೂಂಡಾ ಎಂದೂ ಹೇಳುತ್ತಾರೆ ಎಂದ ಮೋದಿ, ದೀದಿ ಯಾಕೆ ಅಷ್ಟು ಸಿಟ್ಟಾಗಿದ್ದೀರಿ ಎಂದು ಮೋದಿ ಮಮತಾ ಬ್ಯಾನರ್ಜಿಯನ್ನು ಕೆಣಕಿದರು.

West Bengal Assembly Elections 2021: ಟಿಎಂಸಿ ಖೇಲ್ ಖತಮ್, ವಿಕಾಸ್ ಶುರು: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ಪಶ್ಚಿಮ ಬಂಗಾಳ ಬಿಜೆಪಿ ಪ್ರಚಾರ ಸಭೆಯಲ್ಲಿ ನರೇಂದ್ರ ಮೋದಿ
Follow us
TV9 Web
| Updated By: ganapathi bhat

Updated on:Apr 06, 2022 | 7:21 PM

ಕೋಲ್ಕತ್ತಾ: ಟಿಎಂಸಿ ಖೇಲ್ ಖತಮ್, ವಿಕಾಸ್ ಶುರು. ಯಾವುದೇ ಭಯವಿಲ್ಲದೆ ಧೈರ್ಯವಾಗಿ ಬಿಜೆಪಿಗೆ ಮತ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಇಂದು (ಮಾರ್ಚ್ 7) ಹೇಳಿದರು. ಕೆಟ್ಟ ಆಡಳಿತದ ವಿರುದ್ಧ ಮತ ಚಲಾಯಿಸಿ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮೋದಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ‘ನನ್ನ ವಿರೋಧಿಗಳು ನಾನು ಗೆಳೆಯರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತಾರೆ. ನಾವು ಯಾರೊಂದಿಗೆ ಬೆಳೆದೆವೋ ಅವರು ನಮ್ಮ ಗೆಳೆಯರಾಗಿರುತ್ತಾರೆ. ನಾನು ಬಡತನದೊಂದಿಗೆ ಬೆಳೆದವನು. ಹಾಗಾಗಿ, ಬಡವರ ಕಷ್ಟ ನನಗೆ ಅರ್ಥವಾಗುತ್ತದೆ. ನಾನು ನನ್ನ ಗೆಳೆಯರಿಗಾಗಿ ಕೆಲಸ ಮಾಡುತ್ತೇನೆ. ಮತ್ತು ಅದನ್ನು ಮುಂದುವರಿಸುತ್ತೇನೆ’ ಎಂದು ಮೋದಿ ತಿಳಿಸಿದರು.

ನನ್ನ ಬಗ್ಗೆ ಏನೇನೋ ಹೇಳುತ್ತಾರೆ. ಕೆಲವೊಮ್ಮೆ ರಾವಣ, ಕೆಲವೊಮ್ಮೆ ಸೈತಾನ, ಗೂಂಡಾ ಎಂದೂ ಹೇಳುತ್ತಾರೆ ಎಂದ ಮೋದಿ, ದೀದಿ ಯಾಕೆ ಅಷ್ಟು ಸಿಟ್ಟಾಗಿದ್ದೀರಿ ಎಂದು ಮಮತಾ ಬ್ಯಾನರ್ಜಿಯನ್ನು ಕೆಣಕಿದರು. ದೀದಿ ಬಗ್ಗೆ ನನಗೆ ಬಹುಕಾಲದಿಂದ ಗೊತ್ತು. ಅವರು ಎಡಪಕ್ಷಗಳ ವಿರುದ್ಧ ಧ್ವನಿ ಎತ್ತಿದವರಾಗಿ ಈಗ ಉಳಿದಿಲ್ಲ. ಬೇರೆಯವರ ಮಾತನ್ನು ತಾವು ಆಡುತ್ತಿದ್ದಾರೆ. ಬೇರೆಯವರ ನಿಯಂತ್ರಣಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು.

ತೃಣಮೂಲ ಕಾಂಗ್ರೆಸ್​ನವರು ಬಹಳ ಅನುಭವಿಗಳು. ಅವರು ಬಹು ಚೆನ್ನಾಗಿ ಆಟ ಆಡುತ್ತಾರೆ. ಭ್ರಷ್ಟಾಚಾರ ಮಾಡಿ ಬಂಗಾಳವನ್ನು ಲೂಟಿ ಮಾಡುತ್ತಾರೆ. ಅಂಫಾನ್​ಗೆ ಕಳುಹಿಸಿದ ಪರಿಹಾರ ಧನದಲ್ಲಿ ಕೂಡ ಭ್ರಷ್ಟಾಚಾರ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಅಭಿವೃದ್ಧಿ ನಡೆಸುವ ಬದಲು, ಜನರನ್ನು ಒಡೆಯುತ್ತಿದ್ದೀರಿ. ಧರ್ಮದ ಹೆಸರಲ್ಲಿ ಜನರನ್ನು ಬೇರ್ಪಡಿಸುತ್ತಿದ್ದೀರಿ ಎಂದು ಮೋದಿ ಟಿಎಂಸಿ ವಿರುದ್ಧ ಹರಿಹಾಯ್ದರು.

ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಇಂದು (ಮಾರ್ಚ್ 7) ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ರಾಜ್ಯದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮಿಥುನ್ ಬಿಜೆಪಿ ಬಾವುಟ ಹಾರಿಸಿ ಪಕ್ಷಕ್ಕೆ ಪಾದಾರ್ಪಣೆ ಮಾಡಿದರು. ಇದಕ್ಕೂ ಮುನ್ನ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್ ಮಿಥುನ್ ಚಕ್ರವರ್ತಿಯನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್​ವರ್ಗಿಯಾ ಉಪಸ್ಥಿತರಿದ್ದರು.

ಇದನ್ನೂ ಓದಿ: West Bengal Assembly Elections 2021: ದಿನದ 24 ಗಂಟೆಯೂ ಬಂಗಾಳದ ಅಭಿವೃದ್ಧಿಗೆ ಶ್ರಮಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

West Bengal Assembly Elelctions 2021: ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೇರ್ಪಡೆ

Published On - 4:14 pm, Sun, 7 March 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್