AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Elections 2021: ಟಿಎಂಸಿ ಪಟ್ಟಿ ಬಿಡುಗಡೆ; ಮಹಿಳೆ, ಮುಸ್ಲಿಂ, ಯುವ ಮತ್ತು ಹಿಂದುಳಿದ ವರ್ಗಗಳಿಗೆ ಮಣೆ- ಮೈತ್ರಿಗೆ ಮೂರು!

West Bengal Assembly elections 2021: 294 ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಲ್ಲಿ ಟಿಎಂಸಿ ಸ್ಪರ್ಧಿಸಲಿದ್ದು, ಮೂರು ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಅವಕಾಶ ನೀಡಿದೆ. 50 ಮಹಿಳೆಯರು,   79 ಎಸ್‌ಸಿ, 17 ಎಸ್‌ಟಿ ಮತ್ತು 42 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಎಂಸಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಒದಗಿಸಿದೆ. 

West Bengal Elections 2021: ಟಿಎಂಸಿ ಪಟ್ಟಿ ಬಿಡುಗಡೆ; ಮಹಿಳೆ, ಮುಸ್ಲಿಂ, ಯುವ ಮತ್ತು ಹಿಂದುಳಿದ ವರ್ಗಗಳಿಗೆ ಮಣೆ- ಮೈತ್ರಿಗೆ ಮೂರು!
ಯಾರಿಗೆ ಟಿಕೆಟ್ ನೀಡಿದೆ ಟಿಎಂಸಿ?
Follow us
guruganesh bhat
|

Updated on:Mar 05, 2021 | 3:04 PM

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮತ್ತೆ ಅಧಿಕಾರಕ್ಕೆ ಏರುವ ಉತ್ಸಾಹದಲ್ಲಿರುವ ತೃಣಮೂಲ ಕಾಂಗ್ರೆಸ್​ನ 291 ಅಭ್ಯರ್ಥಿಗಳ ಪಟ್ಟಿಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ನಂದಿಗ್ರಾಮ ಕ್ಷೇತ್ರದಿಂದ ಮಾತ್ರವೇ ದೀದಿ ಸ್ಪರ್ಧಿಸಲಿದ್ದು,  ಭವಾನಿಪುರ್‌ ಕ್ಷೇತ್ರದಲ್ಲೂ ಸ್ಪರ್ಧಿಸಲಿದ್ದಾರೆ ಎಂಬ ಊಹೆ ಸುಳ್ಳಾಗಿದೆ. 294 ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಲ್ಲಿ ಟಿಎಂಸಿ ಸ್ಪರ್ಧಿಸಲಿದ್ದು, ಮೂರು ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಅವಕಾಶ ನೀಡಿದೆ. 50 ಮಹಿಳೆಯರು,   79 ಎಸ್‌ಸಿ, 17 ಎಸ್‌ಟಿ ಮತ್ತು 42 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಎಂಸಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಒದಗಿಸಿದೆ. 

ಮಾರ್ಚ್ 9ರಂದು ಮಮತಾ ಬ್ಯಾನರ್ಜಿ ನಂದಿಗ್ರಾಮಕ್ಕೆ ತೆರಳಲಿದ್ದು,  ಮರುದಿನ ನಾಮಪತ್ರ ಸಲ್ಲಿಸಲಿದ್ದಾರೆ. ಜತೆಗೆ, ತಮಗೆ ಬೆಂಬಲ ವ್ಯಕ್ತಪಡಿಸಿದ ಆರ್​ಜೆಡಿಯ ತೇಜಸ್ವಿ ಯಾದವ್, ಆಮ್​ಆದ್ಮಿಯ ಅರವಿಂದ್ ಕೇಜ್ರೀವಾಲ್, ಶಿವಸೇನೆ ಪಕ್ಷಗಳಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

ಅಭ್ಯರ್ಥಿಗಳು ಮಾರ್ಚ್ 9ರ ಒಳಗೆ ನಾಮಪತ್ರ ಸಲ್ಲಿಸಬೇಕಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸುವ ದಿನಾಂಕವನ್ನು ಇದುವರೆಗೂ ಸ್ಪಷ್ಟಪಡಿಸಿಲ್ಲ.

294 ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಹಾಗೂ ಏಪ್ರಿಲ್ 29ರಂದು ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಹೆಚ್ಚು ಕಟ್ಟುನಿಟ್ಟಾಗಿ ಚುನಾವಣೆ ನಡೆಸಬೇಕು ಎನ್ನುವ ಕಾರಣಕ್ಕೆ 8 ಹಂತಗಳಲ್ಲಿ ಚುನಾವಣೆ ನಡೆಸಲಾಗುತ್ತಿದೆ.

ಚುನಾವಣಾ ದಿನಾಂಕ ಘೋಷಣೆ ಮಾಡಿದ್ದ ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್​ ಅರೋರಾ, ಎಲ್ಲಾ ಕಡೆಗಳಲ್ಲಿ ದಕ್ಷ ಅಧಿಕಾರಿಗಳನ್ನು ನೇಮಕ ಮಾಡುತ್ತೇವೆ. ಈ ಮೂಲಕ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದರು. ಇದಾದ ಮರುದಿನವೇ ಪಶ್ಚಿಮ ಬಂಗಾಳದ ಎಡಿಜಿ ಮತ್ತು ಐಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಜಾವೇದ್ ಶಮೀಮ್ ಅವರನ್ನು ಚುನಾವಣಾ ಆಯೋಗ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸ್ಥಾನಕ್ಕೆ ಐಪಿಎಸ್​ ಅಧಿಕಾರಿ ಜಗ್​ ಮೋಹನ್​ ಅವರನ್ನು ತರಲಾಗಿದೆ.

ಬಿಜೆಪಿ ನಿಯೋಗವು ಸಿಇಒ ಅರಿಜ್ ಅಫ್ತಾಬ್ ಅವರನ್ನು ಭೇಟಿಯಾಗಿ ಪಕ್ಷಪಾತ ಮಾಡುವ ಪೊಲೀಸ್ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯದಿಂದ ತೆಗೆದುಹಾಕುವಂತೆ ಒತ್ತಾಯಿಸಿತ್ತು. ಇದಾದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿತ್ತು.

ಇದನ್ನೂ ಓದಿ: ದೀದಿಗೆ ಶಿವಸೇನಾ ಬೆಂಬಲ; ಮಮತಾ ಬ್ಯಾನರ್ಜಿಯನ್ನು ಬಂಗಾಳದ ಹುಲಿ ಎಂದ ಶಿವಸೇನಾ ಸಂಸದ

ಮಮತಾ ಬ್ಯಾನರ್ಜಿ ಅಹಂಕಾರಕ್ಕೆ ಪಶ್ಚಿಮ ಬಂಗಾಳದ ಜನ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ: ಅಬ್ಬಾಸ್ ಸಿದ್ದಿಕಿ

Published On - 3:00 pm, Fri, 5 March 21

25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?