AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

ಪಕ್ಷದ ಕಚೇರಿಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ
ಬಿಜೆಪಿ
ನಯನಾ ರಾಜೀವ್
|

Updated on: Nov 10, 2024 | 9:33 AM

Share

ಪಕ್ಷದ ಕಚೇರಿಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮೃತ ಪೃಥ್ವಿರಾಜ್ ನಾಸ್ಕರ್ ಜಿಲ್ಲೆಯಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ಖಾತೆಯನ್ನು ನಿರ್ವಹಿಸುತ್ತಿದ್ದರು. ಬಿಜೆಪಿಯು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮೇಲೆ ಬೆರಳು ಮಾಡಿದೆ. ಹತ್ಯೆಗೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸಿದ ನಂತರ ಪೊಲೀಸರು ಕೊಲೆಗೆ ಕಾರಣ ವೈಯಕ್ತಿಕವಾಗಿರಬಹುದು ಎಂದು ಹೇಳಿದರು.

ಶುಕ್ರವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ನಸ್ಕರ್ ಅವರ ರಕ್ತಸಿಕ್ತ ಶವ ಪತ್ತೆಯಾಗಿದೆ. ನವೆಂಬರ್ 5 ರಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪೊಲೀಸರು ಕಚೇರಿಯ ಬಾಗಿಲನ್ನು ಒಡೆದು ಒಳಗೆ ಪ್ರವೇಶಿಸಿದ್ದಾರೆ. ಪಕ್ಷದ ಕಚೇರಿಯ ಗೇಟ್​ ಅನ್ನು ಲಾಕ್​ ಮಾಡಲಾಗಿತ್ತು. ಶಂಕಿತ ದುಷ್ಕರ್ಮಿ ಹಿಂಬಾಗಿಲ ಮೂಲಕ ಪರಾರಿಯಾಗಬೇಕು ಎಂದಿದ್ದಾರೆ.

ಪ್ರಾಥಮಿಕ ತನಿಖೆ ಬಳಿಕ ಮಹಿಳೆಯನ್ನು ವಿಚಾರಿಸಿದಾಗ ತಾನೇ ತಪ್ಪು ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕೃತ್ಯಕ್ಕೆ ಯಾರಾದರೂ ನೆರವು ನೀಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಹತ್ಯೆಯ ನಂತರ ಬಿಜೆಪಿ ಮತ್ತು ಟಿಎಂಸಿ ನಡುವೆ ಮಾತಿನ ಚಕಮಕಿ ನಡೆದಿದೆ. ಪಕ್ಷದ ಜಿಲ್ಲಾ ಸಾಮಾಜಿಕ ಮಾಧ್ಯಮ ಸಂಚಾಲಕರನ್ನು ಟಿಎಂಸಿ ಗೂಂಡಾಗಳು ಅಪಹರಿಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಹೇಳಿದೆ. ಸಹಾಯಕ್ಕಾಗಿ ಅವರ ಕುಟುಂಬದ ಹತಾಶ ಮನವಿಯನ್ನು ಪೊಲೀಸರು ನಿರ್ಲಕ್ಷಿಸಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಬೆಂಜ್ ಕಾರು ಡಿಕ್ಕಿ ಹೊಡೆದು ಸಂಧ್ಯಾ ಸಾವು ಪ್ರಕರಣ: ಮತ್ತಷ್ಟು ರೋಚಕ ಸಂಗತಿ ಬಯಲು

ಟಿಎಂಸಿಯ ಹಿರಿಯ ನಾಯಕ ಮತ್ತು ಮಾಜಿ ರಾಜ್ಯಸಭಾ ಸಂಸದ ಕುನಾಲ್ ಘೋಷ್ ಅವರು ನಸ್ಕರ್ ಅವರ ಸಾವಿನ ಹಿಂದಿನ ನಿಖರವಾದ ಕಾರಣ ಬಿಜೆಪಿಗೆ ತಿಳಿದಿದೆ ಆದರೆ ಟಿಎಂಸಿ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದರು.

ದೇಹದ ಕೆಲವು ಭಾಗಗಳಲ್ಲಿನ ಗಾಯವು ವ್ಯಕ್ತಿಯ ಕಡೆಗೆ ಆಕ್ರಮಣಕಾರನ ದ್ವೇಷ ಮತ್ತು ತಿರಸ್ಕಾರವನ್ನು ತೋರಿಸಿದೆ ಎಂದು ಟಿಎಂಸಿ ನಾಯಕ ಹೇಳಿಕೊಂಡಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್​ ಹತ್ಯೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್ ಲಾಕ್ರಾನನ್ನು ವಿರೋಧಿಗಳ ಗುಂಪು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮುಂಡ್ಕಾ ಪ್ರದೇಶದ ಅವರ ಮನೆಯ ಸಮೀಪ ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೋಗಿ ಗ್ಯಾಂಗ್‌ನ ಸದಸ್ಯ ಅಮಿತ್ ಲಾಕ್ರಾ, ಪ್ರತಿಸ್ಪರ್ಧಿ ಟಿಲ್ಲು ತಾಜ್‌ಪುರಿಯಾ ಗ್ಯಾಂಗ್‌ನಿಂದ ಮೋಟಾರ್‌ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಸುಮಾರು ಆರು ಗುಂಡುಗಳನ್ನು ಹಾರಿಸಿದ್ದಾರೆ ಮತ್ತು ಲಾಕ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್