‘ರಾಜೀನಾಮೆ ಕೊಡಿ ಎಂದಿದ್ದರು’ ಬಾಬುಲ್ ಸುಪ್ರಿಯೊ ಫೇಸ್​ಬುಕ್ ಪೋಸ್ಟ್ ವಿರುದ್ಧ ಗರಂ ಆದ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್

Babul Supriyo: ಅವರು ತಮ್ಮ (ಸುಪ್ರಿಯೋ) ರಾಜೀನಾಮೆಯನ್ನು ಕೇಳಿದರು. ಇದರಿಂದ ಬೇರೊಬ್ಬರು ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆ. ಒಂದು ಪಕ್ಷವು ಹೇಗೆ ಕಾರ್ಯನಿರ್ವಹಿಸುತ್ತದೆ, ನೀವು ಸರಿಯಾದ ಪ್ರಕ್ರಿಯೆಯಲ್ಲಿ ನಂಬಿಕೆಯನ್ನು ಹೊಂದಿರಬೇಕು. ಬದಲಿಗೆ ವಜಾ ಮಾಡಿದ್ದರೆ? ಇದಕ್ಕಿಂತ ಉತ್ತಮವಾಗಿರುತ್ತಿತ್ತೇ ಎಂದು ದಿಲೀಪ್ ಘೋಷ್ ಹೇಳಿದ್ದಾರೆ.

‘ರಾಜೀನಾಮೆ ಕೊಡಿ ಎಂದಿದ್ದರು’ ಬಾಬುಲ್ ಸುಪ್ರಿಯೊ ಫೇಸ್​ಬುಕ್ ಪೋಸ್ಟ್ ವಿರುದ್ಧ ಗರಂ ಆದ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್
ಬಾಬುಲ್ ಸುಪ್ರಿಯೊ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Jul 08, 2021 | 12:20 PM

ಕೊಲ್ಕತ್ತಾ: ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರು ಪಕ್ಷದ ಮುಖಂಡ ಬಾಬುಲ್ ಸುಪ್ರಿಯೊ ವಿರುದ್ಧ ಗುಡುಗಿದ್ದಾರೆ. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಳಲಾಯಿತು ಎಂದು ಬಾಬುಲ್ ಸುಪ್ರಿಯೊ ತಮ್ಮ ಫೇಸ್​ಬುಕ್ ಪೋಸ್ಟ್​​ನಲ್ಲಿ ಬರೆದಿದ್ದಕ್ಕೆ ಘೋಷ್ ಗರಂ ಆಗಿದ್ದಾರೆ. ಎಚ್‌ಟಿ ಬಾಂಗ್ಲಾ  ವರದಿಯ ಪ್ರಕಾರ, ಘೋಷ್ ಅವರು ಬುಧವಾರ ರಾಜೀನಾಮೆ ನೀಡಿದ 12 ಮಂತ್ರಿಗಳಲ್ಲಿ, ಅವರು (ಸುಪ್ರಿಯೋ) ಮಾತ್ರ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕತ್ವದ ನಿರ್ಧಾರದ ಬಗ್ಗೆ ಅಸಮಾಧಾನವನ್ನು ಸೂಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಾಬುಲ್ ಸುಪ್ರಿಯೋ ಅವರು ಬುಧವಾರ ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯ ಪೋಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಹು ನಿರೀಕ್ಷಿತ ಸಂಪುಟ ಪುನಾರಚನೆಗೆ ಮುಂಚಿತವಾಗಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರಾಗಿರುವ ತಮ್ಮ ಹುದ್ದೆಗೆ “ರಾಜೀನಾಮೆ ನೀಡುವಂತೆ ಕೇಳಿಕೊಳ್ಳಲಾಗಿದೆ. “ಹೌದು, ಎಲ್ಲಿಯೋ ಹೊಗೆ ಇದೆ ಎಂದಾದರೆ ಬೆಂಕಿ ಇದ್ದಿರಬೇಕು ಎಂದು ಎಂದು ಸುಪ್ರಿಯೋ ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ನಂತರ ಅವರು ಕೇಂದ್ರ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆದಾಗ್ಯೂ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆಯನ್ನೂ ಅದೇ ಪೋಸ್ಟ್ ನಲ್ಲಿ ಹೇಳಿದ ಅವರು ಫೇಸ್‌ಬುಕ್​​ನಲ್ಲಿ ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಹೇಳುವುದು ಸೂಕ್ತವಲ್ಲ ಎಂದಿದ್ದಾರೆ. ಅವರು ತಮ್ಮ (ಸುಪ್ರಿಯೋ) ರಾಜೀನಾಮೆಯನ್ನು ಕೇಳಿದರು. ಇದರಿಂದ ಬೇರೊಬ್ಬರು ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆ. ಒಂದು ಪಕ್ಷವು ಹೇಗೆ ಕಾರ್ಯನಿರ್ವಹಿಸುತ್ತದೆ, ನೀವು ಸರಿಯಾದ ಪ್ರಕ್ರಿಯೆಯಲ್ಲಿ ನಂಬಿಕೆಯನ್ನು ಹೊಂದಿರಬೇಕು. ಬದಲಿಗೆ ವಜಾ ಮಾಡಿದ್ದರೆ? ಇದಕ್ಕಿಂತ ಉತ್ತಮವಾಗಿರುತ್ತಿತ್ತೇ ಎಂದು ದಿಲೀಪ್ ಘೋಷ್ ಹೇಳಿದ್ದಾರೆ.

ರಾಜೀನಾಮೆ ನೀಡಿದ 12 ಸಚಿವರಲ್ಲಿ ಪಕ್ಷದ ಬಗ್ಗೆ ಬೇರೆ ಯಾರೂ ಈ ರೀತಿ  ಹೇಳಿಕೆ ನೀಡಿಲ್ಲ ಎಂದು ಘೋಷ್ ಹೇಳಿದ್ದಾರೆ.

ಸುಪ್ರಿಯೊ ಇತ್ತೀಚೆಗೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕೋಲ್ಕತ್ತಾದ ಟೋಲಿಗಂಜ್ ವಿಧಾನಸಭಾ ಸ್ಥಾನದಿಂದ ತೃಣಮೂಲದ ಅರೂಪ್ ಬಿಸ್ವಾಸ್ ವಿರುದ್ಧ ಸೋತಿದ್ದರು. ಅಂದಿನಿಂದ ಗಾಯಕ-ರಾಜಕಾರಣಿ ಆಗಿರುವ ಸುಪ್ರಿಯೊ ಕೇಂದ್ರ ನಾಯಕತ್ವದಿಂದ ಕಾಣೆಯಾಗಿದ್ದಾರೆ. ಅವರ ರಾಜಕೀಯ ಉಪಸ್ಥಿತಿಯು ರಾಜ್ಯದ ಟಿಎಂಸಿ ನಾಯಕತ್ವದ ಟೀಕೆಗೆ ಮಾತ್ರ ಸೀಮಿತವಾಗಿದೆ. ಆದಾಗ್ಯೂ, ರಾಜೀನಾಮೆ ನೀಡುವ ಒಂದು ದಿನದ ಮೊದಲು, ಬಾಬುಲ್ ಸುಪ್ರಿಯೋ ಅವರ ಕಾರ್ಯಕ್ರಮವೊಂದರಲ್ಲಿ ಹಾಜರಿದ್ದರು. ಇದರಲ್ಲಿ ಅವರ ಸಚಿವಾಲಯವು ಬುಡಕಟ್ಟು ವ್ಯವಹಾರಗಳ ಸಚಿವಾಲಯದೊಂದಿಗೆ ಜಂಟಿ ಒಪ್ಪಂದಕ್ಕೆ ಸಹಿ ಹಾಕಿತು.

ಇದನ್ನೂ ಓದಿ:  Modi Cabinet Reshuffle: ನೂತನ ಸಚಿವರಿಗೆ ಇಂದೇ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ? ಇಲ್ಲಿದೆ ವಿವರ

(West Bengal BJP president Dilip Ghosh hit back at Babul Supriyo over asked to resign as a Union minister in Facebook post)

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ