ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ, ಒಬ್ಬರಿಗೆ ಗಾಯ
ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ(Bomb Blast)ಗೊಂಡಿದ್ದು, ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಸ್ಪಿ ಭಾಸ್ಕರ್ ಮುಖರ್ಜಿ ಈ ಕುರಿತು ಮಾಹಿತಿ ನೀಡಿದ್ದು, ಪಂಚಾಯತಿ ಅಧ್ಯಕ್ಷ ರೂಪಚಂದ್ ಮಂಡಲ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ ಅವರ ಆರೋಗ್ಯ ಸ್ಥಿತಿ ಕುರಿತು ಆಸ್ಪತ್ರೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ, ಸೋಮವಾರವಷ್ಟೇ ಜಾಯ್ ನಗರದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.
ಮೃತರನ್ನು 47 ವರ್ಷದ ಸೈಫುದ್ದೀನ್ ಲಾಸ್ಕರ್ ಎಂದು ಗುರುತಿಸಲಾಗಿದೆ, ಇದಾದ ಬಳಿಕ ಟಿಎಂಸಿ ಹಾಗೂ ಬಿಜೆಪಿ ನಡುವೆ ಚಕಮಕಿ ಆರಂಭವಾಗಿತ್ತು. ಘಟನೆಯ ನಂತರ ಪ್ರದೇಶದಲ್ಲಿ ಘರ್ಷಣೆ ಸಂಭವಿಸಿತ್ತು, ಇದರಲ್ಲಿ ಇಬ್ಬರು ಗಾಯಗೊಂಡಿದ್ದರು, ಅದರಲ್ಲಿ ಒಬ್ಬರು ಸಾವನ್ನಪ್ಪಿದ್ದರು.
ಮತ್ತಷ್ಟು ಓದಿ: ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಐವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ
ಮೃತರನ್ನು ಶಹಾಬುದ್ದೀನ್ ಎಂದು ಗುರುತಿಸಲಾಗಿದೆ. ಹತ್ಯೆಯ ನಂತರ ಟಿಎಂಸಿ ಹಾಗೂ ಬಿಜೆಪಿ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ. ತೃಣಮೂಲ ಕಾಂಗ್ರೆಸ್ನ ಸಂಸದ ಸಂತನು ಸೇನ್ ಮಾತನಾಡಿ, ಬಿಜೆಪಿ ಹಾಗೂ ಸಿಪಿಐ(ಎಂ) ಗೂಂಡಾಗಳು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ