AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾಲಕನ ಸಮಯಪ್ರಜ್ಞೆಗೊಂದು ಸಲಾಂ, ರೈಲು ಅಪಘಾತ ತಪ್ಪಿಸಿ ನೂರಾರು ಜನರ ಪ್ರಾಣ ಉಳಿಸಿದ ಪೋರ

ಬಾಲಕನ ಸಮಯಪ್ರಜ್ಞೆಯಿಂದ ಬಹುದೊಡ್ಡ ರೈಲು ಅಪಘಾತ ತಪ್ಪಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆ ಇದು. ಮುರ್ಸಲೀನ್ ಶೇಖ್ ಎಂಬ 12 ವರ್ಷದ ಬಾಲಕ ಹೊಲದಲ್ಲಿ ಕೆಲಸ ಮಾಡುವ ಕಾರ್ಮಿಕನ ಮಗ. ಅಂದು ತಂದೆಯೊಂದಿಗೆ ಹೊಲಕ್ಕೆ ಬಂದಿದ್ದ ಮುರ್ಸಲಿನ್ ಹಳಿಯ ಒಂದು ಭಾಗವು ಹಾನಿಗೊಳಗಾಗಿರುವುದನ್ನು ಗಮನಿಸಿದ್ದಾನೆ. ಇನ್ನೇನು ರೈಲು ಬಂದೇ ಬಿಡುತ್ತದೆ ಏನು ಮಾಡುವುದು ಎಂದು ಆಲೋಚಿಸಿ ತಕ್ಷಣ ತಾನು ಧರಿಸಿರುವ ಕೆಂಪು ಟಿ ಶರ್ಟ್​ ತೆಗೆದು ರೈಲು ಬರುತ್ತಿದ್ದ ಕಡೆಗೆ ಬೀಸುತ್ತಾನೆ.

ಈ ಬಾಲಕನ ಸಮಯಪ್ರಜ್ಞೆಗೊಂದು ಸಲಾಂ, ರೈಲು ಅಪಘಾತ ತಪ್ಪಿಸಿ ನೂರಾರು ಜನರ ಪ್ರಾಣ ಉಳಿಸಿದ ಪೋರ
ಬಾಲಕ ಶೇಖ್Image Credit source: India Today
ನಯನಾ ರಾಜೀವ್
|

Updated on: Sep 26, 2023 | 3:16 PM

Share

ಬಾಲಕನ ಸಮಯಪ್ರಜ್ಞೆಯಿಂದ ಬಹುದೊಡ್ಡ ರೈಲು ಅಪಘಾತ ತಪ್ಪಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆ ಇದು. ಮುರ್ಸಲೀನ್ ಶೇಖ್ ಎಂಬ 12 ವರ್ಷದ ಬಾಲಕ ಹೊಲದಲ್ಲಿ ಕೆಲಸ ಮಾಡುವ ಕಾರ್ಮಿಕನ ಮಗ. ಅಂದು ತಂದೆಯೊಂದಿಗೆ ಹೊಲಕ್ಕೆ ಬಂದಿದ್ದ ಮುರ್ಸಲಿನ್ ರೈಲ್ವೆ ಹಳಿಯ ಒಂದು ಭಾಗವು ಹಾನಿಗೊಳಗಾಗಿರುವುದನ್ನು ಗಮನಿಸಿದ್ದಾನೆ. ಇನ್ನೇನು ರೈಲು ಬಂದೇ ಬಿಡುತ್ತದೆ ಏನು ಮಾಡುವುದು ಎಂದು ಆಲೋಚಿಸಿ ತಕ್ಷಣ ತಾನು ಧರಿಸಿರುವ ಕೆಂಪು ಟಿ ಶರ್ಟ್​ ತೆಗೆದು ರೈಲು ಬರುತ್ತಿದ್ದ ಕಡೆಗೆ ಬೀಸುತ್ತಾನೆ.

ರೈಲಿನ ಲೊಕೊಮೊಟಿವ್ ಪೈಲಟ್ ಸಿಗ್ನಲ್ ಗುರುತಿಸಿ ತುರ್ತು ಬ್ರೇಕ್ ಹಾಕಿದ್ದರಿಂದ ಅಪಘಾತ ತಪ್ಪಿತ್ತು. ಕಳೆದ ಒಂದು ವಾರದಿಂದ ಆ ಭಾಗದಲ್ಲಿ ಭಾರಿ ಮಳೆಯಾಗಿತ್ತು, ಇದರಿಂದಾಗಿ ರೈಲು ಹಳಿ ಹಾಳಾಗಿತ್ತು, ಬಾಲಕನ ಸಮಯಪ್ರಜ್ಞೆಯಿಂದ ಅಪಘಾತ ತಪ್ಪಿದೆ, ಜತೆಗೆ ಜನರ ಜೀವವೂ ಉಳಿದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಯಿಂದಾಗಿ ಹಳಿಗಳು ಹಾಳಾಗಿದ್ದವು, ಸಮಯಕ್ಕೆ ಸರಿಯಾಗಿ ಬಾಲಕ ಅತ್ತ ಹೋಗಿದ್ದ, ಆತ ಏನು ಮಾಡಬೇಕು ಎಂದು ಆಲೋಚಿಸುವುದು ಸ್ವಲ್ಪ ತಡವಾಗಿದ್ದರೂ ದೊಡ್ಡ ಅಪಘಾತ ನಡೆದುಹೋಗುತ್ತಿತ್ತು.

ಮತ್ತಷ್ಟು ಓದಿ: ಸೆಲ್ಫಿ ತೆಗೆಯುತ್ತಿದ್ದ ಯುವಕನ ಮೇಲೆ ಹರಿದ ರೈಲು, ಸ್ಥಳದಲ್ಲೇ ಸಾವು

ರೈಲ್ವೆ ಅಧಿಕಾರಿಗಳು ಬಾಲಕನಿಗೆ ಶೌರ್ಯ ಪ್ರಮಾಣಪತ್ರವನ್ನು ನೀಡಿ ಗೌರವಿಸಿದರು ಮತ್ತು ನಗದು ಬಹುಮಾನವನ್ನು ಸಹ ನೀಡಿದರು. ಸ್ಥಳೀಯ ಸಂಸದರು ಮತ್ತು ವಿಭಾಗೀಯ ರೈಲು ವ್ಯವಸ್ಥಾಪಕರು ಬಾಲಕನ ಮನೆಗೆ ಭೇಟಿ ನೀಡಿ ಅಭಿನಂದಿಸಿದರು. ಏತನ್ಮಧ್ಯೆ, ಹಳಿಗಳ ಹಾನಿಗೊಳಗಾದ ಭಾಗವನ್ನು ಸರಿಪಡಿಸಿ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ