ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೈರಾಗುವ ಸಾಧ್ಯತೆ

PM Narendra Modi: ಇಂದಿನ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಮಹಾರಾಷ್ಟ್ರ, ‌ಕರ್ನಾಟಕ, ಕೇರಳ, ಛತ್ತೀಸಗಡ, ಪಂಜಾಬ್ ಸೇರಿ 11 ರಾಜ್ಯಗಳ ಸಿಎಂಗಳ ಜೊತೆ ಚರ್ಚೆಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಯಿದೆ.

ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೈರಾಗುವ ಸಾಧ್ಯತೆ
ಮಮತಾ ಬ್ಯಾನರ್ಜಿ
Follow us
ರಶ್ಮಿ ಕಲ್ಲಕಟ್ಟ
|

Updated on: Apr 08, 2021 | 12:20 PM

ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ಸಾಂಕ್ರಾಮಿಕದ ನಿಯಂತ್ರಣ ಮತ್ತು ದೇಶದ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವ ಸಾಧ್ಯತೆ ಇಲ್ಲ. ಇವರ ಬದಲು ಪಶ್ಚಿಮ ಬಂಗಾಳದ ಪ್ರಧಾನ ಕಾರ್ಯದರ್ಶಿ ಅಲ್ಪನ್ ಬಂದೋಪಧ್ಯಾಯ್ ಸಭೆಗೆ ಹಾಜರಾಗಲಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವುದರಿಂದ ಮಮತಾ ಬ್ಯಾನರ್ಜಿ ಈ ಸಭೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.

ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ವಿಡಿಯೊ ಸಂವಾದ ಮೂಲಕ ಸಭೆ ನಡೆಸಲಿದ್ದು, ಕೊವಿಡ್-19 ಪರಿಸ್ಥಿತಿ, ಕೊವಿಡ್ ಲಸಿಕೆ ಬಗ್ಗೆ ಚರ್ಚಿಸಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 6.30ಕ್ಕೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಲಿದ್ದಾರೆ. ಕೊವಿಡ್-19 ಪ್ರಕರಣಗಳ ಹೆಚ್ಚಳ ಮತ್ತು ಕೆಲ ರಾಜ್ಯಗಳು ಕೊವಿಡ್ ಲಸಿಕೆ ಖಾಲಿಯಾಗಿವೆ, ಇನ್ನಷ್ಟು ಸರಬರಾಜು ಮಾಡಿ ಎಂದು ಕೇಂದ್ರ ಸರ್ಕಾರವನ್ನು ಕೋರಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸಭೆ ಮಹತ್ವ ಪಡೆದಿದೆ.

ಕೊವಿಡ್-19 ಸೋಂಕು ನಿಯಂತ್ರಿಸಲು ದೇಶದ ಜನರ ಸಹಭಾಗಿತ್ವವನ್ನು ಪ್ರಧಾನಿಯವರ ಕಚೇರಿ ಕೇಳಿದೆ. ಸೋಂಕು ನಿಯಂತ್ರಣ ಸಾಧಿಸುವಲ್ಲಿ ಜನರೇ ಭಾಗಿಯಾಗಬೇಕು, ಮತ್ತು ಇದು ಜನರೇ ಮುನ್ನಡೆಸುವ ಆಂದೋಲನ ಆಗಬೇಕು ಎಂದು ಪ್ರಧಾನಮಂತ್ರಿ ಕಾರ್ಯಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ಹೇಳಿದೆ. ಇಂದು ನಡೆಯಲಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆಗಿನ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇಂದಿನ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಮಹಾರಾಷ್ಟ್ರ, ‌ಕರ್ನಾಟಕ, ಕೇರಳ, ಛತ್ತೀಸಗಡ, ಪಂಜಾಬ್ ಸೇರಿ 11 ರಾಜ್ಯಗಳ ಸಿಎಂಗಳ ಜೊತೆ ಚರ್ಚೆಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಯಿದೆ. ಎಲ್ಲರಿಗೂ‌ ವ್ಯಾಕ್ಸಿನ್ ನೀಡುವಂತೆ ಕೆಲ ರಾಜ್ಯಗಳು ಮನವಿ ಸಲ್ಲಿಸಲಿವೆ ಎಂದು ಹೇಳಲಾಗುತ್ತಿದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡುವ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ದೇಶದಲ್ಲಿ ಕೊರೊನಾ ಸ್ಥಿತಿಗತಿ ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1,26,789 ಹೊಸ ಕೊವಿಡ್ ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕಿತರಿದ್ದು, ಛತ್ತೀಸಗಡದಲ್ಲಿ ಇದೇ ಮೊದಲ ಬಾರಿ ಸೋಂಕಿತರ ಸಂಖ್ಯೆ 10,000 ಗಡಿದಾಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ 1,29,28,574ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಹೇಳಿವೆ. ಈ ಪೈಕಿ 8,43,473 ಸಕ್ರಿಯ ಪ್ರಕರಣಗಳಿದ್ದು 1,18,51,393 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 1,66,862 ಮಂದಿ ಸಾವಿಗೀಡಾಗಿದ್ದಾರೆ. 9,01,98,673 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.  ಕಳೆದ 24 ಗಂಟೆಗಳಲ್ಲಿ 59,258 ಮಂದಿ ಚೇತರಿಸಿಕೊಂಡಿದ್ದು 685 ಮಂದಿ ಮೃತಪಟ್ಟಿದ್ದಾರೆ.  ನಾಲ್ಕು ದಿನಗಳ ಅವಧಿಯಲ್ಲಿ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ ಮೂರು ಬಾರಿ 1ಲಕ್ಷದ ಗಡಿದಾಟಿದೆ. ಫೆಬ್ರವರಿ 12ರಂದು ಅತೀ ಕಡಿಮೆ ಸಕ್ರಿಯ ಪ್ರಕರಣಗಳು ಅಂದರೆ 1,35,926ಪ್ರಕರಣಗಳು ವರದಿಯಾಗಿತ್ತು.

ಮಹಾರಾಷ್ಟ್ರದಲ್ಲಿ 59,907 ಹೊಸ ಕೊವಿಡ್ ಪ್ರಕರಣ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 59,907 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿನ ಥಾಣೆ ಜಿಲ್ಲೆಯಲ್ಲಿ 6,290 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 3,56,267ಕ್ಕೇರಿದೆ. 21ಮಂದಿ ಸೋಂಕಿತರು ಮೃತಪಟ್ಟಿದ್ದರು, ಮೃತರ ಸಂಖ್ಯೆ 6,620ಕ್ಕೇರಿದೆ. ಥಾಣೆಯಲ್ಲಿ ಮೃತರ ಸಾವಿನ ಸಂಖ್ಯೆಯ ಪ್ರಮಾಣ ಶೇಕಡಾ1.86ಆಗಿದೆ. ಇಲ್ಲಿಯವರೆಗೆ 3,02,521ಮಂದಿ ಚೇತರಿಸಿಕೊಂಡಿದ್ದು ಚೇತರಿಕೆಯ ಪ್ರಮಾಣ ಶೇಕಡಾ 84.91ಆಗಿದೆ. ಪಲ್ಘಾರ್ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54,813ಕ್ಕೇರಿದ್ದು 1,247 ಮಂದಿ ಮೃತಪಟ್ಟಿದ್ದಾರೆ.

 ಇದನ್ನೂ ಓದಿ: ಕೊವಿಡ್ ಹೆಚ್ಚಳ: ಸೋಂಕು ನಿಯಂತ್ರಣಕ್ಕೆ ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ; 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡುವ ಬಗ್ಗೆ ಚರ್ಚೆ ಸಾಧ್ಯತೆ

( West Bengal Chief Minister Mamata Banerjee expected to skip a meeting with Prime Minister Narendra Modi Today )

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು