Mamata Banerjee: ಇಂದು ಸಂಜೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದಾರೆ ದೀದಿ..

ಮಮತಾ ಬ್ಯಾನರ್ಜಿ ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನೂ ಭೇಟಿಯಾಗಲಿದ್ದಾರೆ. ಉಳಿದಂತೆ ಕಾಂಗ್ರೆಸ್​ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಮಲನಾಥ್​, ಆನಂದ್​ಶರ್ಮಾ, ಅಭಿಷೇಕ್​ ಮನು ಸಿಂಘ್ವಿಯವರನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

Mamata Banerjee: ಇಂದು ಸಂಜೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದಾರೆ ದೀದಿ..
ಮಮತಾ ಬ್ಯಾನರ್ಜಿ
TV9kannada Web Team

| Edited By: Lakshmi Hegde

Jul 27, 2021 | 11:50 AM

ದೆಹಲಿ: ಸದ್ಯ ಸಂಸತ್ತಿನ ಮುಂಗಾರು ಅಧಿವೇಶನ(Monsoon session of Parliament) ನಡೆಯುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ತಂಗಿರುವ ಪಶ್ಚಿಮ ಬಂಗಾಳ (West Bengal)  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee), ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ, ವಿವಿಧ ಪ್ರತಿಪಕ್ಷಗಳ ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ. ತೃಣಮೂಲ ಕಾಂಗ್ರೆಸ್ ಮಮತಾ ಬ್ಯಾನರ್ಜಿಯವರ 5 ದಿನಗಳ ವೇಳಾ ಪಟ್ಟಿಯನ್ನು ನೀಡಿದ್ದು, ಅದರ ಪ್ರಕಾರ ಇಂದು ಸಂಜೆ 4 ಗಂಟೆ ಹೊತ್ತಿಗೆ ಪ್ರಧಾನಿ ಮೋದಿ (PM Narendra Modi) ಯವರನ್ನು ಭೇಟಿ ಮಾಡಲಿದ್ದಾರೆ.

ಮಮತಾ ಬ್ಯಾನರ್ಜಿಯವರು ಮೂರನೇ ಅವಧಿಗೆ ಮುಖ್ಯಮಂತ್ರಿಯಾದ ಮೇಲೆ ಸೋಮವಾರವೇ ಮೊದಲು ದೆಹಲಿಗೆ ತೆರಳಿದ್ದಾರೆ. ಜುಲೈ 30ರವರೆಗೂ ದೆಹಲಿಯಲ್ಲಿಯೇ ಇರಲಿದ್ದು, ಈ ವೇಳೆ ಸಂಸತ್ತಿಗೂ ಹೋಗಲಿದ್ದಾರೆ ಎಂದು ಟಿಎಂಸಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಕೆಲ ದಿನಗಳ ಹಿಂದೆ ಪ್ರಧಾನಿ ಭೇಟಿಯ ಬಗ್ಗೆ ಮಮತಾ ಬ್ಯಾನರ್ಜಿ ಮಾಹಿತಿ ನೀಡಿದ್ದರು. ಆದರೆ ಆ ಬಗ್ಗೆ ಹೆಚ್ಚಿನ ವಿವರಣೆಯನ್ನೇನೂ ನೀಡಿರಲಿಲ್ಲ.

ಮಮತಾ ಬ್ಯಾನರ್ಜಿ ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನೂ ಭೇಟಿಯಾಗಲಿದ್ದಾರೆ. ಉಳಿದಂತೆ ಕಾಂಗ್ರೆಸ್​ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಮಲನಾಥ್​, ಆನಂದ್​ಶರ್ಮಾ, ಅಭಿಷೇಕ್​ ಮನು ಸಿಂಘ್ವಿಯವರನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಮುಗಿದಿದೆ. ಅದರಲ್ಲಿ ಗೆದ್ದು ಅಧಿಕಾರ ಹಿಡಿದಿರುವ ಮಮತಾ ಬ್ಯಾನರ್ಜಿ, 2024ರ ಲೋಕಸಭಾ ಚುನಾವಣೆಗೆ ಸಿದ್ಧವಾಗುತ್ತಿದ್ದಾರೆ. ಇದೇ ನಿಟ್ಟಿನಲ್ಲಿ ಕಾಂಗ್ರೆಸ್​ ಸೇರಿ ವಿವಿಧ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನ ಶುರು ಮಾಡಿದ್ದಾರೆಂದು ಹೇಳಲಾಗಿದೆ.

ಇದನ್ನೂ ಓದಿ: ಪ್ರವಾಹದಲ್ಲಿ ಸಿಲುಕಿದ್ದ ನಾಯಿಯನ್ನು ರಕ್ಷಿಸಿದ ಎನ್​ಡಿಆರ್​ಫ್ ತಂಡ; ಸಾಮಾಜಿಕ ಜಾಲತಾಣದಲ್ಲಿ ಹರಿದು ಬಂತು ಮೆಚ್ಚುಗೆಯ ಮಹಾಪೂರ

West Bengal Chief Minister Mamata Banerjee will meet PM Modi today in Delhi

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada