ಬಿಜೆಪಿ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ ನಡೆಸುತ್ತಿದೆ: ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಸಿಎಂ, ವಿಪಕ್ಷ ನಾಯಕರಿಗೆ ಮಮತಾ ಪತ್ರ

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ನ್ಯಾಯಾಂಗದ ನಿರ್ದೇಶನಗಳನ್ನು ನಿರಂತರವಾಗಿ ಉಲ್ಲಂಘಿಸುತ್ತಿರುವುದು ನನಗೆ ನೋವು ತಂದಿದೆ.  ನ್ಯಾಯಾಂಗದ ಬಗ್ಗೆ ನನಗೆ ಹೆಚ್ಚಿನ ಗೌರವವಿದೆ. ಆದರೆ ಪ್ರಸ್ತುತ, ಕೆಲವು ಪಕ್ಷಪಾತದ ರಾಜಕೀಯ ಹಸ್ತಕ್ಷೇಪಗಳಿಂದ ಜನರಿಗೆ ನ್ಯಾಯ ಸಿಗುತ್ತಿಲ್ಲ...

ಬಿಜೆಪಿ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ ನಡೆಸುತ್ತಿದೆ: ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಸಿಎಂ, ವಿಪಕ್ಷ ನಾಯಕರಿಗೆ ಮಮತಾ ಪತ್ರ
ಮಮತಾ ಬ್ಯಾನರ್ಜಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 29, 2022 | 1:48 PM

ಕೊಲ್ಕತ್ತಾ: ಬಿಜೆಪಿಯೇತರ ರಾಜ್ಯಗಳಲ್ಲಿ ಮುಖ್ಯಮಂತ್ರಿಗಳು ಮತ್ತು ಹಿರಿಯ ವಿರೋಧ ಪಕ್ಷದ ನಾಯಕರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಮಂಗಳವಾರ ಬಿಜೆಪಿ (BJP) ನೇತೃತ್ವದ ಕೇಂದ್ರವು ದೇಶದ ಒಕ್ಕೂಟ ವ್ಯವಸ್ಥೆ(federal structure) ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ವಿರುದ್ಧ ಒಗ್ಗೂಡುವಂತೆ ವಿರೋಧ ಪಕ್ಷಗಳನ್ನು ಕೋರಿದ ಬ್ಯಾನರ್ಜಿ, ಸರ್ಕಾರವನ್ನು ಅದರ ಕಾರ್ಯಗಳಿಗೆ ಜವಾಬ್ದಾರರನ್ನಾಗಿಸಬೇಕು ಎಂದು ಹೇಳಿದರು. “ಈ ದೇಶದ ಸಾಂಸ್ಥಿಕ ಪ್ರಜಾಪ್ರಭುತ್ವದ ಮೇಲೆ ಆಡಳಿತಾರೂಢ ಬಿಜೆಪಿಯ ನೇರ ದಾಳಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲು ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ. ಇಡಿ, ಸಿಬಿಐ, ಕೇಂದ್ರೀಯ ವಿಜಿಲೆನ್ಸ್ ಕಮಿಷನ್ (CVC) ಮತ್ತು ಆದಾಯ ತೆರಿಗೆ ಇಲಾಖೆಯಂತಹ ಕೇಂದ್ರೀಯ ಏಜೆನ್ಸಿಗಳನ್ನು ದೇಶಾದ್ಯಂತ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು, ಕಿರುಕುಳ ನೀಡಲು ಮತ್ತು ಸೇಡು ತೀರಿಸಿಕೊಳ್ಳಲು ಬಳಸಲಾಗುತ್ತಿದೆ. ಇತ್ತೀಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ, ಪ್ರತಿಪಕ್ಷಗಳ ವಾಕ್‌ಔಟ್‌ನ ಮಧ್ಯೆ ದೆಹಲಿ ವಿಶೇಷ ಪೊಲೀಸ್ (ತಿದ್ದುಪಡಿ) ಮಸೂದೆ 2021 ಮತ್ತು ಸಿವಿಸಿ(ತಿದ್ದುಪಡಿ) ಮಸೂದೆ 2021 ಮಂಡನೆಯಾಗಿದೆ. ಈ ಕಾನೂನುಗಳು ಹಿಂದಿನ ಸುಪ್ರೀಂಕೋರ್ಟ್ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದ್ದು ಇಡಿ ಮತ್ತು ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ಕೇಂದ್ರಕ್ಕೆ ಅನುವು ಮಾಡಿಕೊಡುತ್ತದೆ ಎಂದು ಮಮತಾ ಪತ್ರದಲ್ಲಿ ಹೇಳಿದ್ದಾರೆ.

ಪ್ರತಿಪಕ್ಷಗಳನ್ನು ಹತ್ತಿಕ್ಕಲು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಬಿಜೆಪಿಯ ಉದ್ದೇಶವನ್ನು ವಿರೋಧಿಸಲು ನಾಯಕರನ್ನು ಕೇಳಿಕೊಂಡ ಅವರು, “ಚುನಾವಣೆಗಳು ಹೊಸ್ತಿಲಲ್ಲಿರುವಾಗ ಕೇಂದ್ರೀಯ ಸಂಸ್ಥೆಗಳು ಕ್ರಮಕ್ಕೆ ಮುಂದಾಗುತ್ತವೆ. ಬಿಜೆಪಿ ಆಡಳಿತವಿರುವ ರಾಜ್ಯಗಳು ತಮ್ಮ ಪೊಳ್ಳು ಆಡಳಿತದ ಉತ್ತಮ ಚಿತ್ರಣವನ್ನು ಚಿತ್ರಿಸಲು ಈ ಏಜೆನ್ಸಿಗಳಿಂದ ಉಚಿತ ಪಾಸ್ ಪಡೆಯುತ್ತವೆ ಎಂಬುದು ಸ್ಪಷ್ಟವಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ನ್ಯಾಯಾಂಗದ ನಿರ್ದೇಶನಗಳನ್ನು ನಿರಂತರವಾಗಿ ಉಲ್ಲಂಘಿಸುತ್ತಿರುವುದು ನನಗೆ ನೋವು ತಂದಿದೆ.  ನ್ಯಾಯಾಂಗದ ಬಗ್ಗೆ ನನಗೆ ಹೆಚ್ಚಿನ ಗೌರವವಿದೆ. ಆದರೆ ಪ್ರಸ್ತುತ, ಕೆಲವು ಪಕ್ಷಪಾತದ ರಾಜಕೀಯ ಹಸ್ತಕ್ಷೇಪಗಳಿಂದ ಜನರಿಗೆ ನ್ಯಾಯ ಸಿಗುತ್ತಿಲ್ಲ, ಇದು ನಮ್ಮ ಪ್ರಜಾಪ್ರಭುತ್ವದಲ್ಲಿ ಅಪಾಯಕಾರಿ ಪ್ರವೃತ್ತಿಯಾಗಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಬಿಜೆಪಿಯು ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿರುವ ಅವರು, “ನ್ಯಾಯಾಂಗದ ಕೆಲವು ವರ್ಗದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವ ಮೂಲಕ ಬಿಜೆಪಿ ಈ ದೇಶದ ಫೆಡರಲ್ ವ್ಯವಸ್ಥೆ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದೆ. ವಿರೋಧ ಪಕ್ಷಗಳಾಗಿ, ಈ ಸರ್ಕಾರವನ್ನು ಅವರ ಕಾರ್ಯಗಳಿಗೆ ಹೊಣೆಗಾರರನ್ನಾಗಿ ಮಾಡುವುದು, ಭಿನ್ನಾಭಿಪ್ರಾಯದ ಧ್ವನಿಗಳನ್ನು ಹತ್ತಿಕ್ಕುವುದನ್ನು ವಿರೋಧಿಸುವುದು ನಮ್ಮ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಗಂಡನನ್ನು ಕೊಂದರು, ಮಗ ಅಳುತ್ತಿದ್ದರೂ ನನ್ನ ಮೇಲೆ ಅತ್ಯಾಚಾರ ನಡೆಸಿದರು; ರಷ್ಯನ್ ಸೈನಿಕರ ಕರಾಳ ಮುಖ ಬಿಚ್ಚಿಟ್ಟ ಉಕ್ರೇನ್ ಮಹಿಳೆ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!