AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ರಾಜೀನಾಮೆಯಿಂದಾಗಿ ಖಾಲಿಯಿರುವ ಭಬಾನಿಪುರ ವಿಧಾನಸಭಾ ಕ್ಷೇತ್ರದಿಂದ ಮಮತಾ ಬ್ಯಾನರ್ಜಿ ಸ್ಪರ್ಧೆ ಸಾಧ್ಯತೆ

West Assembly Elections 2021: ಮುಖ್ಯಮಂತ್ರಿ ಆರು ತಿಂಗಳಲ್ಲಿ ಶಾಸಕರಾಗಿ ಆಯ್ಕೆಯಾಗಬೇಕು. ನಾನು ಈ ವರ್ಷದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಇಂದು, ನಾನು ಈ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದರಿಂದ ಅವರು ಭಬಾನಿಪುರದಿಂದ ಚುನಾಯಿತರಾಗುತ್ತಾರೆ ಎಂದು ಶೋಬನ್​ದೇಬ್ ಚಟ್ಟೋಪಾಧ್ಯಾಯ್ ಹೇಳಿದ್ದಾರೆ.

ಶಾಸಕರ ರಾಜೀನಾಮೆಯಿಂದಾಗಿ ಖಾಲಿಯಿರುವ ಭಬಾನಿಪುರ ವಿಧಾನಸಭಾ ಕ್ಷೇತ್ರದಿಂದ ಮಮತಾ ಬ್ಯಾನರ್ಜಿ ಸ್ಪರ್ಧೆ ಸಾಧ್ಯತೆ
ಮಮತಾ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 21, 2021 | 6:06 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಭಬಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಶೋಬನ್​ದೇಬ್ ಚಟ್ಟೋಪಾಧ್ಯಾಯ್ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಹಿನ್ನಲೆಯಲ್ಲಿ ಈ ಕ್ಷೇತ್ರದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುವ ಸಾಧ್ಯತೆ ಇದೆ. ಪಕ್ಷದ ಮುಖಂಡ ಮತ್ತು ರಾಜ್ಯ ಸಚಿವ ಪಾರ್ಥ ಚಟರ್ಜಿ ಮತ್ತು ಇತರರ ಸಮ್ಮುಖದಲ್ಲಿ ಚಟ್ಟೋಪಾಧ್ಯಾಯ್ ತಮ್ಮ ರಾಜೀನಾಮೆಯನ್ನು ಪಶ್ಚಿಮ ಬಂಗಾಳ ವಿಧಾನಸಭಾ ಸ್ಪೀಕರ್ ಬಿಮನ್ ಬಂದ್ಯೋಪಾಧ್ಯಾಯರಿಗೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಆರು ತಿಂಗಳಲ್ಲಿ ಶಾಸಕರಾಗಿ ಆಯ್ಕೆಯಾಗಬೇಕು. ನಾನು ಈ ವರ್ಷದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಇಂದು, ನಾನು ಈ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದರಿಂದ ಅವರು ಭಬಾನಿಪುರದಿಂದ ಚುನಾಯಿತರಾಗುತ್ತಾರೆ.

ವೈಯಕ್ತಿಕವಾಗಿ ಮತ್ತು ನಮ್ಮ ಪಕ್ಷ ಮಮತಾ ಬ್ಯಾನರ್ಜಿ ಅವರು ಭಬಾನಿಪುರದಿಂದ ಸ್ಪರ್ಧಿಸಬೇಕೆಂದು ಬಯಸಿದೆ. ಅವರು ಈಗ ನನ್ನ ರಾಜಕೀಯ ಜೀವನದ ಮುಂದಿನ ಹಾದಿಯನ್ನು ನಿರ್ಧರಿಸುತ್ತಾರೆ ಎಂದು ರಾಜೀನಾಮೆ ನೀಡಿದ ನಂತರ ಚಟ್ಟೋಪಾಧ್ಯಾಯ ಹೇಳಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿಯ ಅದ್ಭುತ ವಿಜಯದ ಹೊರತಾಗಿಯೂ, ಬ್ಯಾನರ್ಜಿ ನಂದಿಗ್ರಾಮದಲ್ಲಿ ತನ್ನ ಮಾಜಿ ಶಿಷ್ಯ ಪ್ರತಿಸ್ಪರ್ಧಿ ಸುವೇಂದು ಅಧಿಕಾರಿಯ ವಿರುದ್ಧ ಪರಾಭವಗೊಂಡಿದ್ದರು.

ಮುಖ್ಯಮಂತ್ರಿಯ ಪದವಿಯಲ್ಲಿ ಮುಂದುವರಿಯಬೇಕಾದರೆ ಮಮತಾ ಬ್ಯಾನರ್ಜಿ ಆರು ತಿಂಗಳಲ್ಲಿ ವಿಧಾನಸಭೆಗೆ  ಆಯ್ಕೆಯಾಗಬೇಕಿದೆ.

ನಂದಿಗ್ರಾಮದಲ್ಲಿ ಬ್ಯಾನರ್ಜಿ 1,200 ಮತಗಳ ಅಂತರದಿಂದ ಜಯಗಳಿಸಿದ್ದಾರೆಂದು ಆರಂಭದಲ್ಲಿ ವರದಿಯಾಗಿತ್ತು ಆದರೆ ಕೆಲವೇ ಗಂಟೆಗಳ ನಂತರ ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿಯನ್ನು 1,956 ಮತಗಳಿಂದ ವಿಜೇತರಾಗಿದ್ದಾರೆ ಎಂದು ಚುನಾವಣಾ ಆಯೋಗ ಘೋಷಿಸಿತ್ತು.

ಏತನ್ಮಧ್ಯೆ, ಮೂಲಗಳ ಪ್ರಕಾರ ಕೊವಿಡ್ -19 ಕಾರಣದಿಂದ ಇಬ್ಬರು ಅಭ್ಯರ್ಥಿಗಳು ಸಾವನ್ನಪ್ಪಿದ ನಂತರ ಮುರ್ಷಿದಾಬಾದ್ ಜಿಲ್ಲೆಯ ಎರಡು ಸ್ಥಾನಗಳಿಗೆ ಚುನಾವಣೆ ಮುಂದೂಡಲ್ಪಟ್ಟಿರುವುದರಿಂದ ಟಿಎಂಸಿ ಚಟ್ಟೋಪಾಧ್ಯಾಯರನ್ನು ಬೇರೆ ಕ್ಷೇತ್ರದಿಂದ ಕಣಕ್ಕಿಳಿಸಬಹುದು. ಚಟ್ಟೋಪಾಧ್ಯಾಯರನ್ನು ರಾಜ್ಯಸಭಾ ಸಂಸದರನ್ನಾಗಿ ಮಾಡಬಹುದು ಎಂದು ಪಕ್ಷದ ಮೂಲಗಳು ಹೇಳಿರುವುದಾಗಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ನಮಗೆ ಮಾತಾಡೋಕೆ ಬಿಡಲಿಲ್ಲ ಎಂದಿದ್ದ ಮಮತಾ ಬ್ಯಾನರ್ಜಿಗೆ ಮಾಜಿ ಆಪ್ತನಿಂದ ತಿರುಗೇಟು; ವ್ಯಂಗ್ಯ ಮಾಡಿದ ಸುವೇಂದು ಅಧಿಕಾರಿ

ನಮ್ಮ ಕಚೇರಿಗೆ ಬಂದು ಮಮತಾ ಬ್ಯಾನರ್ಜಿ ಭಯದ ವಾತಾವರಣ ನಿರ್ಮಾಣ ಮಾಡಿದರು: ಸಿಬಿಐ

Published On - 6:04 pm, Fri, 21 May 21

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್