ತಮಿಳುನಾಡು ಬಳಿಕ ಪಶ್ಚಿಮ ಬಂಗಾಳದ ಸರದಿ: ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅನುಮತಿ

ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಸೀಟು ಭರ್ತಿಗೆ ಅನುಮತಿ ನೀಡಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆದೇಶ ಹೊರಡಿಸಿದ್ದಾರೆ.

ತಮಿಳುನಾಡು ಬಳಿಕ ಪಶ್ಚಿಮ ಬಂಗಾಳದ ಸರದಿ: ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅನುಮತಿ
ಮಮತಾ ಬ್ಯಾನರ್ಜಿ (ಎಡ), ಚಿತ್ರಮಂದಿರ ಪುನರಾರಂಭ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Apr 06, 2022 | 9:23 PM

ಕೊಲ್ಕತ್ತಾ: ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಸೀಟು ಭರ್ತಿಗೆ ಅನುಮತಿ ನೀಡಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆದೇಶ ಹೊರಡಿಸಿದ್ದಾರೆ. ಅನ್​ಲಾಕ್​ ನಂತರ ಇದುವರೆಗೆ ಶೇ. 50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ, ಇದೀಗ ಅದನ್ನು ವಿಸ್ತರಿಸಿ, ಬಂಗಾಳದಲ್ಲಿ ಸಂಪೂರ್ಣವಾಗಿ ಥಿಯೇಟರ್ ತೆರೆಯಲು ಅವಕಾಶ ನೀಡಿದಂತಾಗಿದೆ. ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಸೀಟು ಭರ್ತಿಗೆ ಅನುಮತಿ ನೀಡಿದರೂ ಕೊರೊನಾ ವಿರುದ್ಧ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಮತಾ ಬ್ಯಾನರ್ಜಿ ಸೂಚನೆ ನೀಡಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ, ತಮಿಳುನಾಡು ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಸೀಟು ಭರ್ತಿಗೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಇದಕ್ಕೆ ಕೇಂದ್ರ ಗೃಹ ಸಚಿವಾಲಯ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ, ತಮಿಳುನಾಡು ಸರ್ಕಾರ ನಿನ್ನೆಯಷ್ಟೇ ತನ್ನ ಆದೇಶವನ್ನು ಹಿಂಪಡೆದಿತ್ತು.

ಇದೀಗ, ಈ ಘಟನಾವಳಿಗಳ ಬೆನ್ನಲ್ಲೇ, ಪಶ್ಚಿಮ ಬಂಗಾಳ ಶೇ. 100ರಷ್ಟು ಸೀಟು ಭರ್ತಿಗೆ ಅನುಮತಿ ನೀಡಿದೆ. ಕೇಂದ್ರ  ಗೃಹ ಇಲಾಖೆಯ ಕೊವಿಡ್ ನಿಯಮಾವಳಿಗಳನ್ನು ಮೀರಿ ಕೈಗೊಂಡಿರುವ ಈ ನಿರ್ಧಾರವು ಇದೀಗ ಚರ್ಚೆಗೆ ಕಾರಣವಾಗಿದೆ.

ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅನುಮತಿ ವಾಪಸ್ ಪಡೆದ ತಮಿಳುನಾಡು ಸರ್ಕಾರ

Published On - 4:40 pm, Sat, 9 January 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್