ಕಾಂಗ್ರೆಸ್, ಕಮ್ಯೂನಿಸ್ಟರು ಬಿಜೆಪಿ ಪರ ಕೆಲಸ ಮಾಡ್ತಿದಾರೆ, ಅವರಿಗೆ ವೋಟ್ ಹಾಕಬೇಡಿ: ಮಮತಾ ಬ್ಯಾನರ್ಜಿ ಕರೆ

Lok Sabha Elections 2024: ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಟಿಎಂಸಿ, ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ಪಕ್ಷಗಳು ಪರಸ್ಪರ ಬದ್ಧವೈರಿಗಳೇ ಆಗಿವೆ. ಮಮತಾ ಬ್ಯಾನರ್ಜಿ ಚುನಾವಣಾ ಭಾಷಣವೊಂದರಲ್ಲಿ ಮಾತನಾಡುತ್ತಾ, ಬಂಗಾಳದಲ್ಲಿ ಬಿಜೆಪಿಯನ್ನು ಗೆಲ್ಲಲು ಬಯಸದವರು ಕಾಂಗ್ರೆಸ್ ಮತ್ತು ಸಿಪಿಐಎಂಗೆ ಮತ ಹಾಕಬಾರದು ಎಂದು ಕರೆ ನೀಡಿದ್ದಾರೆ. ಈ ಎರಡು ಪಕ್ಷಗಳು ಬಂಗಾಳದಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತಿವೆ. ಈ ಪಕ್ಷಗಳಿಗೆ ಮತ ಹಾಕದಿರಿ ಎಂದು ಮುರ್ಶಿದಾಬಾದ್​ನಲ್ಲಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.

ಕಾಂಗ್ರೆಸ್, ಕಮ್ಯೂನಿಸ್ಟರು ಬಿಜೆಪಿ ಪರ ಕೆಲಸ ಮಾಡ್ತಿದಾರೆ, ಅವರಿಗೆ ವೋಟ್ ಹಾಕಬೇಡಿ: ಮಮತಾ ಬ್ಯಾನರ್ಜಿ ಕರೆ
ಮಮತಾ ಬ್ಯಾನರ್ಜಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 19, 2024 | 6:34 PM

ಕೋಲ್ಕತಾ, ಏಪ್ರಿಲ್ 19: ರಾಷ್ಟ್ರಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟ ರಚನೆ ಆಗಲು ನಾನೇ ಕಾರಣ. ಇಂಡಿಯಾ (INDIA) ಎಂದು ಮೈತ್ರಿಕೂಟಕ್ಕೆ ಹೆಸರು ಸೂಚಿಸಿದ್ದೇ ನಾನು. ಆದರೆ ಪಶ್ಚಿಮ ಬಂಗಾಳದಲ್ಲಿ ಸಿಪಿಐಎಂ ಮತ್ತು ಕಾಂಗ್ರೆಸ್ ಪಕ್ಷಗಳು ಬಿಜೆಪಿ ಪರ ಕೆಲಸ ಮಾಡುತ್ತಿವೆ. ಬಂಗಾಳದಲ್ಲಿ ಯಾರೂ ಕೂಡ ಈ ಪಕ್ಷಗಳಿಗೆ ಮತ ಹಾಕಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಕರೆ ನೀಡಿರುವ ಘಟನೆ ವರದಿಯಾಗಿದೆ. ಮುರ್ಷಿದಾಬಾದ್​ನಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಭಾಷಣ ಮಾಡುವ ವೇಳೆ ಮಮತಾ ಬ್ಯಾನರ್ಜಿ ಅವರು ಇಂಡಿಯಾ ಮೈತ್ರಿಕೂಟದಲ್ಲಿನ ಒಡಕನ್ನು ಜಾಹೀರುಗೊಳಿಸಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ನಾನೇ ಇಂಡಿಯಾ ಮೈತ್ರಿಕೂಟ ಮಾಡಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಯಾವ ಇಂಡಿಯಾ ಕೂಟ ಇಲ್ಲ. ನೀವು ಬಿಜೆಪಿಯನ್ನು ಸೋಲಿಸಬೇಕೆಂದಿದ್ದರೆ ಕಾಂಗ್ರೆಸ್ ಮತ್ತು ಸಿಪಿಐಎಂ ಪಕ್ಷಕ್ಕೆ ಮತ ಹಾಕಬೇಡಿ. ಈ ಎರಡು ಪಕ್ಷಗಳು ಬಿಜೆಪಿ ಪರ ಕೆಲಸ ಮಾಡುತ್ತಿವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಪರ ಹಾಡು ಬರೆದಿದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ ಆರೋಪ: ದೂರು ದಾಖಲು

ಮುರ್ಶಿದಾಬಾದ್ ಜಿಲ್ಲೆಯಲ್ಲಿ ರಾಮನವಮಿ ದಿನದಂದು ಸಂಭವಿಸಿದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ದೀದಿ, ಇದು ಪೂರ್ವಯೋಜಿತ ಕೃತ್ಯವಾಗಿದೆ. ಬಿಜೆಪಿ ಉದ್ದೇಶಪೂರ್ವಕವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿತು ಎಂದು ಆರೋಪಿಸಿದ್ದಾರೆ.

ರಾಮನವಮಿ ಆಚರಣೆ ವೇಳೆ ಮುರ್ಶಿದಾಬಾದ್​ನಲ್ಲಿ ಹಿಂದೂಗಳನ್ನು ರಕ್ಷಿಸಲು ಮುಖ್ಯಮಂತ್ರಿ ವಿಫಲರಾಗಿದ್ದಾರೆ. ಇದರ ಜವಾಬ್ದಾರಿ ಅವರು ಹೊರಬೇಕು. ಅವರದ್ದು ಹಿಂದೂ ವಿರೋಧಿ ಸರ್ಕಾರ ಎಂದು ಬಿಜೆಪಿ ಆರೋಪಿಸುತ್ತಿದೆ.

ಇದನ್ನೂ ಓದಿ: Lok Sabha Polls: ನಾಗಾಲ್ಯಾಂಡ್​ನ ಆರು ಜಿಲ್ಲೆಗಳಲ್ಲಿ ಮತದಾನ ಬಹಿಷ್ಕಾರ ಬಹುತೇಕ ಯಶಸ್ವಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈಗ ಟಿಎಂಸಿಗೆ ಪರ್ಯಾಯ ಶಕ್ತಿಯಾಗಿ ಬೆಳೆದಿದೆ. ಒಂದು ಕಾಲದಲ್ಲಿ ಮಾರ್ಕ್ಸ್​ವಾದಿ ಕಮ್ಯೂನಿಸ್ಟ್ ಪಕ್ಷದ ಪೂರ್ಣ ಪ್ರಾಬಲ್ಯ ಇದ್ದ ಈ ರಾಜ್ಯ ಕಳೆದ ಎರಡು ದಶಕದಿಂದ ಟಿಎಂಸಿಮಯವಾಗಿದೆ. ಪ್ರಮುಖ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಈಗ ನಾಲ್ಕನೇ ಸ್ಥಾನಕ್ಕೆ ಸರ್ಕಸ್ ನಡೆಸುವಂತಾಗಿದೆ. ಒಂದು ಕಾಲದಲ್ಲಿ ಹೇಳಹೆಸರಿಲ್ಲದಂತಿದ್ದ ಬಿಜೆಪಿ ಪಕ್ಷ ಈಗ ಟಿಎಂಸಿಗೆ ಪರ್ಯಾಯವಾಗುವ ನಿಟ್ಟಿನಲ್ಲಿ ಬೆಳೆಯುತ್ತಿದೆ.

ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ಪಕ್ಷಗಳ ವಿರುದ್ಧವೇ ಹೋರಾಡುತ್ತ ಅಧಿಕಾರಕ್ಕೆ ಬಂದಿದ್ದು ಟಿಎಂಸಿ. ಈಗ ಈ ಮೂರು ಪಕ್ಷಗಳೂ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವುದು ಕುತೂಹಲ. ಹಾಗೆಯೇ, ಕೇರಳದಲ್ಲಿ ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ಪಕ್ಷಗಳು ಹಾವು ಮುಂಗೂಸಿ ಇದ್ದಂತೆ. ಆದರೂ ಇವು ಇಂಡಿಯಾ ಮೈತ್ರಿಕೂಟದ ಭಾಗವಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು