ತಂಬಾಕು ಪ್ರಿಯರಿಗೆ ಶಾಕ್; ಪಶ್ಚಿಮ ಬಂಗಾಳದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲ ಮಾರಾಟ ನಿಷೇಧ

ಜನರ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾದ ತಂಬಾಕು ಅಥವಾ ನಿಕೋಟಿನ್ ಅನ್ನು ಪದಾರ್ಥಗಳಾಗಿ ಬಳಸುವ ಆಹಾರದ ಉತ್ಪನ್ನಗಳ ಮಾರಾಟವನ್ನು ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಗಾಳದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲ ಮಾರಾಟ ಬ್ಯಾನ್ ಆಗಿದೆ.

ತಂಬಾಕು ಪ್ರಿಯರಿಗೆ ಶಾಕ್; ಪಶ್ಚಿಮ ಬಂಗಾಳದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲ ಮಾರಾಟ ನಿಷೇಧ
ಗುಟ್ಕಾ, ಪಾನ್ ಮಸಾಲ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 26, 2021 | 6:37 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಒಂದು ವರ್ಷದವರೆಗೆ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದ್ದು, 2021ರ ನವೆಂಬರ್ 7ರವರೆಗೆ ಪಶ್ಚಿಮ ಬಂಗಾಳದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಾ ಬ್ಯಾನ್ ಆಗಲಿದೆ.

ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಸೆಕ್ಷನ್ 30ರ ಅಡಿಯಲ್ಲಿ ಆಹಾರ ಸುರಕ್ಷತಾ ಆಯುಕ್ತರಿಗೆ ಇಡೀ ರಾಜ್ಯದಲ್ಲಿ ಯಾವುದೇ ಆಹಾರದ ತಯಾರಿಕೆ, ಸಂಗ್ರಹಣೆ, ವಿತರಣೆ ಅಥವಾ ಮಾರಾಟದ ಮೇಲೆ ಅಂತಹ ನಿಷೇಧವನ್ನು ವಿಧಿಸಲು ಅಧಿಕಾರವಿದೆ ಎಂದು ಬಂಗಾಳ ಸರ್ಕಾರ ಹೇಳಿದೆ.

ಜನರ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾದ ತಂಬಾಕು ಅಥವಾ ನಿಕೋಟಿನ್ ಅನ್ನು ಪದಾರ್ಥಗಳಾಗಿ ಬಳಸುವ ಆಹಾರದ ಉತ್ಪನ್ನಗಳ ಮಾರಾಟವನ್ನು ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಆಹಾರ ಸುರಕ್ಷತೆ ಆಯುಕ್ತರಾದ ತಪನ್ ಕೆ. ರುದ್ರ ಆದೇಶ ಹೊರಡಿಸಿದ್ದಾರೆ. ಗುಟ್ಖಾ ಮತ್ತು ಪಾನ್ ಮಸಾಲಾಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅನ್ನು ಪದಾರ್ಥಗಳಾಗಿ ಬಳಸಲಾಗುತ್ತದೆ. ಹೀಗಾಗಿ ಅದರ ತಯಾರಿಕೆ ಮತ್ತು ಮಾರಾಟಕ್ಕೆ ನಿಷೇಧ ವಿಧಿಸಲಾಗಿದೆ.

ಸಾಮಾನ್ಯವಾಗಿ ಮದ್ಯ, ಗುಟ್ಕಾ, ಪಾನ್ ಮಸಾಲದಂತಹ ವಸ್ತುಗಳ ಮಾರಾಟದಿಂದ ರಾಜ್ಯ ಸರ್ಕಾರಗಳಿಗೆ ಸಾಕಷ್ಟು ತೆರಿಗೆ ಬರುತ್ತದೆ. ಆದರೂ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ದೇಶಾದ್ಯಂತ ಹಲವು ರಾಜ್ಯಗಳು ಕ್ರಮೇಣ ನಿಕೋಟಿನ್ ಹೊಂದಿರುವ ಗುಟ್ಖಾ ಮತ್ತು ಇತರ ಉತ್ಪನ್ನಗಳನ್ನು ನಿಷೇಧಿಸಲು ಕ್ರಮಗಳನ್ನು ಕೈಗೊಂಡಿವೆ. ಅವುಗಳ ಸಾಲಿಗೆ ಪಶ್ಚಿಮ ಬಂಗಾಳವೂ ಸೇರ್ಪಡೆಯಾಗಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರವು 2019ರಲ್ಲಿ ಮೊದಲ ಬಾರಿಗೆ ಗುಟ್ಕಾ, ವೀಳ್ಯದೆಲೆ ಮತ್ತು ಇತರ ಹಲವಾರು ತಂಬಾಕು ಉತ್ಪನ್ನಗಳನ್ನು ನಿಷೇಧಿಸಲು ನಿರ್ಧರಿಸಿತ್ತು. 2013ರಲ್ಲಿ ಕೂಡ ಪಶ್ಚಿಮ ಬಂಗಾಳ ಸರ್ಕಾರ ಖೈನಿ, ಗುಟ್ಕಾ, ಪಾನ್ ಮಸಾಲ ತಯಾರಿಕೆ ಮತ್ತು ಮಾರಾಟಕ್ಕೆ 1 ವರ್ಷ ನಿಷೇಧ ಹೇರಿತ್ತು.

ಇದನ್ನೂ ಓದಿ: ‘ಪಾನ್ ಮಸಾಲಾದ ಪ್ರಚಾರದಿಂದ ದಯವಿಟ್ಟು ಹಿಂದೆ ಸರಿಯಿರಿ’; ಅಮಿತಾಭ್​ಗೆ ತಂಬಾಕು ವಿರೋಧಿ ಸಂಘಟನೆ ಒತ್ತಾಯ

World No Tobacco Day 2021: ವಿಶ್ವ ತಂಬಾಕು ರಹಿತ ದಿನದ ಇತಿಹಾಸ, ಮಹತ್ವ ಹಾಗೂ ಈ ವರ್ಷದ ಸಂದೇಶವೇನು?

Published On - 6:35 pm, Tue, 26 October 21

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ