ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಮಮತಾ ಬ್ಯಾನರ್ಜಿ ಪಾದಯಾತ್ರೆ; ಮೋದಿ ವಿರುದ್ಧ ವಾಗ್ದಾಳಿ

Mamata Banerjee: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಗ್ಯಾಸ್ ಸಿಲಿಂಡರ್ (LPG) ಬೆಲೆ ಏರಿಕೆ ವಿರುದ್ಧ ಪಾದಯಾತ್ರೆ ನಡೆಸಿದರು.

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಮಮತಾ ಬ್ಯಾನರ್ಜಿ ಪಾದಯಾತ್ರೆ; ಮೋದಿ ವಿರುದ್ಧ ವಾಗ್ದಾಳಿ
ಮಮತಾ ಬ್ಯಾನರ್ಜಿ
Follow us
TV9 Web
| Updated By: ganapathi bhat

Updated on:Apr 06, 2022 | 7:21 PM

ಕೋಲ್ಕತ್ತಾ: ಬಿಜೆಪಿ ಮತ ಕೊಂಡುಕೊಳ್ಳಲು ಬಯಸುತ್ತಿದೆ. ಅವರು ನಿಮ್ಮ ಮತ ಕೊಳ್ಳಲು ಬಂದರೆ ಅವರು ನೀಡುವ ಹಣ ಪಡೆದುಕೊಳ್ಳಿ. ಬಳಿಕ, ನಿಮ್ಮ ಮತವನ್ನು ತೃಣಮೂಲ ಕಾಂಗ್ರೆಸ್ (TMC)ಗೆ ನೀಡಿ ಎಂದು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಇಂದು (ಮಾರ್ಚ್ 7) ಮಮತಾ ಬ್ಯಾನರ್ಜಿ ತಿಳಿಸಿದರು. ನಾವು ಆಟಕ್ಕೆ ತಯಾರಿದ್ದೇವೆ ಎಂದು ಬಿಜೆಪಿ ವಿರುದ್ಧ ಸಮರ ಸಾರಿದರು.

ನರೇಂದ್ರ ಮೋದಿ, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವೆಂದು ಹೇಳುತ್ತಾರೆ. ಅವರು ಉತ್ತರ ಪ್ರದೇಶ, ಬಿಹಾರ ಮತ್ತು ಇತರ ರಾಜ್ಯಗಳನ್ನು ನೋಡಬೇಕು. ಪಶ್ಚಿಮ ಬಂಗಾಳದಲ್ಲಿ ಮಹಿಳಾ ಸುರಕ್ಷತೆ ಇದೆ ಎಂದು ಮಮತಾ ಬ್ಯಾನರ್ಜಿ ಹೇಳಿದರು. ಗ್ಯಾಸ್ ಸಿಲಿಂಡರ್ (LPG) ಬೆಲೆ ಏರಿಕೆ ವಿರುದ್ಧ ಪಾದಯಾತ್ರೆ ಕೈಗೊಂಡ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ,  ಸತತವಾಗಿ ಆಗುತ್ತಿರುವ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ನಾವೂ ಪಶ್ಚಿಮ ಬಂಗಾಳಕ್ಕೆ ಹೋಗುತ್ತೇವೆ: ರಾಕೇಶ್ ಟಿಕಾಯತ್ ಸರ್ಕಾರ ಕೋಲ್ಕತ್ತಾಗೆ ತೆರಳಿದೆ. ನಾವು ಕೂಡ ಮಾರ್ಚ್ 13ರಂದು ಪಶ್ಚಿಮ ಬಂಗಾಳಕ್ಕೆ ಹೋಗುತ್ತೇವೆ. ಅಲ್ಲಿನ ರೈತರ ಜೊತೆ ಮಾತನಾಡುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ (BKU) ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ನರೇಂದ್ರ ಮೋದಿ ಪ್ರಚಾರ ಟಿಎಂಸಿ ಖೇಲ್ ಖತಮ್, ವಿಕಾಸ್ ಶುರು. ಯಾವುದೇ ಭಯವಿಲ್ಲದೆ ಧೈರ್ಯವಾಗಿ ಬಿಜೆಪಿಗೆ ಮತ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಇಂದು (ಮಾರ್ಚ್ 7) ಹೇಳಿದ್ದಾರೆ. ಕೆಟ್ಟ ಆಡಳಿತದ ವಿರುದ್ಧ ಮತ ಚಲಾಯಿಸಿ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ನನ್ನ ವಿರೋಧಿಗಳು ನಾನು ಗೆಳೆಯರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತಾರೆ. ನಾವು ಯಾರೊಂದಿಗೆ ಬೆಳೆದೆವೋ ಅವರು ನಮ್ಮ ಗೆಳೆಯರಾಗಿರುತ್ತಾರೆ. ನಾನು ಬಡತನದೊಂದಿಗೆ ಬೆಳೆದವನು. ಹಾಗಾಗಿ, ಬಡವರ ಕಷ್ಟ ನನಗೆ ಅರ್ಥವಾಗುತ್ತದೆ. ನಾನು ನನ್ನ ಗೆಳೆಯರಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ’ ಎಂದು ಮೋದಿ ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್​ನವರು ಬಹಳ ಅನುಭವಿಗಳು. ಅವರು ಬಹು ಚೆನ್ನಾಗಿ ಆಟ ಆಡುತ್ತಾರೆ. ಭ್ರಷ್ಟಾಚಾರ ಮಾಡಿ ಬಂಗಾಳವನ್ನು ಲೂಟಿ ಮಾಡುತ್ತಾರೆ. ಅಂಫಾನ್​ಗೆ ಕಳುಹಿಸಿದ ಪರಿಹಾರ ಧನದಲ್ಲಿ ಕೂಡ ಭ್ರಷ್ಟಾಚಾರ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಅಭಿವೃದ್ಧಿ ನಡೆಸುವ ಬದಲು, ಜನರನ್ನು ಒಡೆಯುತ್ತಿದ್ದೀರಿ. ಧರ್ಮದ ಹೆಸರಲ್ಲಿ ಜನರನ್ನು ಬೇರ್ಪಡಿಸುತ್ತಿದ್ದೀರಿ ಎಂದು ಟಿಎಂಸಿ ವಿರುದ್ಧ ಮೋದಿ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: West Bengal Assembly Elections 2021: ದಿನದ 24 ಗಂಟೆಯೂ ಬಂಗಾಳದ ಅಭಿವೃದ್ಧಿಗೆ ಶ್ರಮಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಇದನ್ನೂ ಓದಿ: West Bengal Assembly Elelctions 2021: ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೇರ್ಪಡೆ

Published On - 6:53 pm, Sun, 7 March 21

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?