AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರ್ಭೂಮ್‌ನಲ್ಲಿ ಮೃತಪಟ್ಟವರ ಕುಟುಂಬ ಭೇಟಿ ಮಾಡಿದ ಮಮತಾ ಬ್ಯಾನರ್ಜಿ; ₹5 ಲಕ್ಷ ಪರಿಹಾರ ಘೋಷಣೆ

ಬಿರ್ಭೂಮ್ ಜಿಲ್ಲೆಯಲ್ಲಿ  ನಡೆದ ಹಿಂಸಾಚಾರದಲ್ಲಿ ಸಾವನ್ನಪ್ಪಿದ ಎಂಟು ಜನರ ಕುಟುಂಬವನ್ನು ಭೇಟಿ ಮಾಡಿದ್ದು,  ಪ್ರತಿಯೊಬ್ಬರಿಗೂ ₹ 5 ಲಕ್ಷ ಪರಿಹಾರವನ್ನು ಘೋಷಿಸಿದರು. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಹೆಚ್ಚುವರಿ ₹ 50,000 ಘೋಷಿಸಿದ್ದಾರೆ.

ಬಿರ್ಭೂಮ್‌ನಲ್ಲಿ ಮೃತಪಟ್ಟವರ ಕುಟುಂಬ ಭೇಟಿ ಮಾಡಿದ ಮಮತಾ ಬ್ಯಾನರ್ಜಿ; ₹5 ಲಕ್ಷ ಪರಿಹಾರ ಘೋಷಣೆ
ಮಮತಾ ಬ್ಯಾನರ್ಜಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Mar 24, 2022 | 7:08 PM

Share

ಪಶ್ಚಿಮ  ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಈ ವಾರ ಬಿರ್ಭೂಮ್ (Birbhum) ಜಿಲ್ಲೆಯಲ್ಲಿ  ನಡೆದ ಹಿಂಸಾಚಾರದಲ್ಲಿ ಸಾವನ್ನಪ್ಪಿದ ಎಂಟು ಜನರ ಕುಟುಂಬವನ್ನು ಭೇಟಿ ಮಾಡಿದ್ದು,  ಪ್ರತಿಯೊಬ್ಬರಿಗೂ ₹ 5 ಲಕ್ಷ ಪರಿಹಾರವನ್ನು ಘೋಷಿಸಿದರು. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಹೆಚ್ಚುವರಿ ₹ 50,000 ಘೋಷಿಸಿದ್ದಾರೆ. ಸಜೀವ ದಹನವಾದ ಎಂಟು ಮಕ್ಕಳ ಪೈಕಿ ಇಬ್ಬರು ಮಕ್ಕಳು.  ಘಟನೆಯಲ್ಲಿ ಸುಟ್ಟುಹೋದ ಮನೆಗಳನ್ನು ಮರುನಿರ್ಮಾಣ ಮಾಡಲು ಪ್ರತಿ ಮನೆಗೆ ಹೆಚ್ಚುವರಿ ₹ 2 ಲಕ್ಷ ನೀಡಲಾಗುವುದು. ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ  ಉದ್ಯೋಗ ನೀಡಲಾಗುವುದು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.  ಮುಖ್ಯಮಂತ್ರಿಯನ್ನು ಪ್ರತಿಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಟೀಕಿಸಿದ್ದು ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ಪ್ರದೇಶದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.  “ದೊಡ್ಡ ಪಿತೂರಿ ಇದೆ, ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಾರೆ, ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ,” ಎಂದು ಮಮತಾ ಹೇಳಿದ್ದಾರೆ.  ಅಕ್ರಮ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲು ರಾಜ್ಯಾದ್ಯಂತ ವಿಶೇಷ ಅಭಿಯಾನವನ್ನು ಅವರು ಘೋಷಿಸಿದರು. ಮಾರ್ಚ್ 23 ರಂದು ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಅನುಗುಣವಾಗಿ ಬಂಗಾಳ ಸರ್ಕಾರವು ಈ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸುತ್ತಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಮಂಗಳವಾರ ಮುಂಜಾನೆ ರಾಮ್‌ಪುರಹತ್‌ನಲ್ಲಿ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ ನಂತರ ಎಂಟು ಜನರು ಸುಟ್ಟು ಕರಕಲಾದರು. ಬೊಗ್ಟುಯಿ ಗ್ರಾಮದ ನಿವಾಸಿ ಮತ್ತು ಸ್ಥಳೀಯ ತೃಣಮೂಲ ನಾಯಕ ಭದು ಶೇಖ್ ಹತ್ಯೆಯ ನಂತರ ಈ ಹಿಂಸಾಚಾರ ನಡೆದಿದೆ. ತೃಣಮೂಲ ಕಾಂಗ್ರೆಸ್‌ನ ಎರಡು ಬಣಗಳ ನಡುವಿನ ಹಳೆಯ ಪೈಪೋಟಿಯ ಪರಿಣಾಮವಾಗಿ ಹಿಂಸಾಚಾರ ನಡೆದಿರಬಹುದು ಎಂದು ನಿವಾಸಿಗಳು ಹೇಳಿದ್ದಾರೆ. ಪೊಲೀಸರು ಇದುವರೆಗೆ 23 ಜನರನ್ನು ಬಂಧಿಸಿದ್ದಾರೆ. ಶೇಖ್‌ನನ್ನು ಕೊಂದ ಬಾಂಬ್ ದಾಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಎರಡು ಪ್ರಕರಣಗಳು ದಾಖಲಾಗಿದ್ದು, ವಿಶೇಷ ತಂಡ ತನಿಖೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿರ್‌ಭೂಮ್​​ನಲ್ಲಿ ಸಜೀವ ದಹನ ಮಾಡುವ ಮುನ್ನ ಥಳಿಸಲಾಗಿತ್ತು ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ  ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವ ದಹನ ಮಾಡುವ ಮುನ್ನ ಥಳಿಸಲಾಗಿತ್ತು ಎಂದು ಅವರ ಮರಣೋತ್ತರ ಪರೀಕ್ಷೆಯಿಂದ ತಿಳಿದು ಬಂದಿದೆ.  ಮಂಗಳವಾರ ಮುಂಜಾನೆ ಅಪರಿಚಿತರಿಂದ ಬೆಂಕಿ ಹಚ್ಚಲಾಗಿದೆ ಎನ್ನಲಾದ ಮನೆಗಳಲ್ಲಿ ಸುಟ್ಟು ಕರಕಲಾದ ಶವಗಳ ಪರೀಕ್ಷೆಯನ್ನು ನಡೆಸಿದ ವಿಧಿವಿಜ್ಞಾನ ತಜ್ಞರ ಪ್ರಾಥಮಿಕ ಸಂಶೋಧನೆಗಳ ಪ್ರಕಾರ, ಸಂತ್ರಸ್ತರನ್ನು ಮೊದಲು ತೀವ್ರವಾಗಿ ಥಳಿಸಿ ನಂತರ ಜೀವಂತವಾಗಿ ಸುಡಲಾಯಿತು ಎಂದು ಅಧಿಕಾರಿಯೊಬ್ಬರು ರಾಮ್‌ಪುರಹತ್  ಆಸ್ಪತ್ರೆಯಿಂದ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಕನಿಷ್ಠ 20 ಜನರನ್ನು ಬಂಧಿಸಲಾಗಿದೆ. ಸೋಮವಾರ ಸಂಜೆ ಸ್ಥಳೀಯ ತೃಣಮೂಲ ನಾಯಕನ ಹತ್ಯೆಯ ಪ್ರತೀಕಾರ ಇದಾಗಿರಬಹುದು ಎಂದು ಶಂಕಿಸಲಾಗಿದೆ ಮತ್ತು ಹಲವಾರು ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ಸ್ವಯಂಸೇವಕರನ್ನು ನಿರ್ಲಕ್ಷ್ಯದ ಆಧಾರದ ಮೇಲೆ ತೆಗೆದುಹಾಕಲಾಗಿದೆ.

ಇದನ್ನೂ ಓದಿ: ಪರಮ್​​ಬೀರ್ ಸಿಂಗ್​​ ವಿರುದ್ಧದ ಪ್ರಕರಣಗಳ ತನಿಖೆ ಸಿಬಿಐಗೆ ವರ್ಗಾಯಿಸಿದ ಸುಪ್ರೀಂಕೋರ್ಟ್

Published On - 5:36 pm, Thu, 24 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?