ಸಾರ್ವಜನಿಕವಾಗಿ ಸಂಸದೆ ಮಹುವಾ ಮೊಯಿತ್ರಾರನ್ನು ತರಾಟೆಗೆ ತೆಗೆದುಕೊಂಡ ಮಮತಾ ಬ್ಯಾನರ್ಜಿ

Mahua Moitra ಮಹುವಾ, ನಾನು ಇಲ್ಲಿ ಸ್ಪಷ್ಟ ಸಂದೇಶವನ್ನು ನೀಡಲು ಬಯಸುತ್ತೇನೆ. ಯಾರ ವಿರುದ್ಧ ಯಾರು ಎಂದು ನೋಡುವ ಅಗತ್ಯವಿಲ್ಲ. ಯಾರಾದರೂ ಒಬ್ಬ ವ್ಯಕ್ತಿಯನ್ನು ಇಷ್ಟಪಡದಿದ್ದರೆ, ಅವನು ಅಥವಾ ಅವಳು ಕೆಲವು ಜನರನ್ನು ಯೂಟ್ಯೂಬ್‌ನಲ್ಲಿ ಅಥವಾ ಪತ್ರಿಕೆಗಳಲ್ಲಿ ಸುದ್ದಿಗಾಗಿ ಕಳುಹಿಸುತ್ತಾರೆ...

ಸಾರ್ವಜನಿಕವಾಗಿ ಸಂಸದೆ ಮಹುವಾ ಮೊಯಿತ್ರಾರನ್ನು ತರಾಟೆಗೆ ತೆಗೆದುಕೊಂಡ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ-ಮೊಹುವಾ ಮೊಯಿತ್ರಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 10, 2021 | 6:00 PM

ನದಿಯಾ(ಪಶ್ಚಿಮ ಬಂಗಾಳ): ಸ್ಥಳೀಯ ಸಂಸ್ಥೆಗಳ ಚುನಾವಣೆಗೆ (civic polls) ಮುನ್ನ ನದಿಯಾದಲ್ಲಿ(Nadia)  ಟಿಎಂಸಿ (TMC) ಆಂತರಿಕ ಕಲಹ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾಬ್ಯಾನರ್ಜಿ (Mamata Banerjee) ಅವರು ಗುರುವಾರ ಆಡಳಿತಾತ್ಮಕ ಸಭೆಯಲ್ಲಿ ಕೃಷ್ಣನಗರ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಸಭೆಯಲ್ಲಿ ಬ್ಯಾನರ್ಜಿ ಅವರು ಪಕ್ಷದ ಕೃಷ್ಣನಗರದ ಅಧ್ಯಕ್ಷ (ಸಂಘಟನೆ) ಜಯಂತ್ ಷಾ ಅವರಲ್ಲಿ ಕಳೆದ ತಿಂಗಳು ಪ್ರತಿಭಟನೆಯ ಬಗ್ಗೆ ಕೇಳಿದರು. ಇದನ್ನು ಮೊಯಿತ್ರಾ ಅವರ ಬೆಂಬಲಿಗರು ತಮ್ಮ ವಿರುದ್ಧ ನಡೆಸಿದ್ದರು ಎಂದು ದೂರಿದ್ದರು. ವಸತಿ ಯೋಜನೆಗೆ ಫಲಾನುಭವಿಗಳ ಆಯ್ಕೆ ವಿಚಾರವಾಗಿ ಪ್ರತಿಭಟನೆ ನಡೆದಿತ್ತು. ಸಭೆಯಲ್ಲಿ ಭಾಗವಹಿಸಿದ್ದ ಮೊಯಿತ್ರಾ ಅವರನ್ನು ತರಾಟೆಗೆ ತೆಗೆದುಕೊಂಡ ಟಿಎಂಸಿ ಮುಖ್ಯಸ್ಥರು, ಮಹುವಾ, ನಾನು ಇಲ್ಲಿ ಸ್ಪಷ್ಟ ಸಂದೇಶವನ್ನು ನೀಡಲು ಬಯಸುತ್ತೇನೆ. ಯಾರ ವಿರುದ್ಧ ಯಾರು ಎಂದು ನೋಡುವ ಅಗತ್ಯವಿಲ್ಲ. ಯಾರಾದರೂ ಒಬ್ಬ ವ್ಯಕ್ತಿಯನ್ನು ಇಷ್ಟಪಡದಿದ್ದರೆ, ಅವನು ಅಥವಾ ಅವಳು ಕೆಲವು ಜನರನ್ನು ಯೂಟ್ಯೂಬ್‌ನಲ್ಲಿ ಅಥವಾ ಪತ್ರಿಕೆಗಳಲ್ಲಿ ಸುದ್ದಿಗಾಗಿ ಕಳುಹಿಸುತ್ತಾರೆ. ಈ ರೀತಿಯ ರಾಜಕೀಯ ಒಂದು ದಿನಕ್ಕಾಗಬಹುದು ಆದರೆ ಶಾಶ್ವತವಲ್ಲ. ಅದೇ ವ್ಯಕ್ತಿ ಶಾಶ್ವತವಾಗಿ ಒಂದೇ ಸ್ಥಳದಲ್ಲಿ ಇರುತ್ತಾನೆ ಎಂದು ಒಪ್ಪಿಕೊಳ್ಳುವುದು ಸರಿಯಲ್ಲ. ಚುನಾವಣೆ ಬಂದಾಗ ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ಇಲ್ಲಿ ಭಿನ್ನಾಭಿಪ್ರಾಯಕ್ಕೆ ಅವಕಾಶವಿಲ್ಲ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದಿದ್ದಾರೆ. ಒಗ್ಗಟ್ಟಿನ ರಾಜಕೀಯ ಸ್ಪರ್ಧೆಗೆ ತಯಾರಿ ನಡೆಸುವುದಾಗಿ ಮೊಯಿತ್ರಾ ಉತ್ತರಿಸಿದರು. ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಬ್ಯಾನರ್ಜಿಯವರು ನದಿಯಾಗೆ ನೀಡಿದ ಮೊದಲ ಭೇಟಿ ಇದಾಗಿದೆ.

ಗೋವಾದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಯಾಗಿರುವ ಮೊಯಿತ್ರಾ ಅವರನ್ನು ಶಾಶ್ವತವಾಗಿ ಕರಾವಳಿ ರಾಜ್ಯಕ್ಕೆ ಸ್ಥಳಾಂತರಿಸಬಹುದು ಮತ್ತು ನದಿಯಾದಲ್ಲಿ ಅವರ ಪಕ್ಷದ ಜವಾಬ್ದಾರಿಗಳಿಂದ ಮುಕ್ತರಾಗಬಹುದು ಎಂದು ಹಿರಿಯ ಟಿಎಂಸಿ ನಾಯಕರೊಬ್ಬರು ಹೇಳಿದ್ದಾರೆ. ಮೊಯಿತ್ರಾ ಅಧ್ಯಕ್ಷರಾಗಿರುವ ನದಿಯಾದಲ್ಲಿ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಪಕ್ಷದ ನಾಯಕತ್ವವು ಸಂತೋಷವಾಗಿಲ್ಲ. ಜಿಲ್ಲೆಯಲ್ಲಿ 17 ವಿಧಾನಸಭಾ ಸ್ಥಾನಗಳಿದ್ದು, ಒಂಬತ್ತು ಸ್ಥಾನಗಳನ್ನು ಬಿಜೆಪಿ ಗೆದ್ದಿದೆ.

ಇದನ್ನೂ ಓದಿ: ಜನರು ಇಂದಿರಾಜೀ ಅವರನ್ನು ಕ್ಷಮಿಸಿಲ್ಲ, ಮೋದಿಯವರನ್ನೂ ಕ್ಷಮಿಸಲಾರರು: ಮಮತಾ ಬ್ಯಾನರ್ಜಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್