Mamata Banerjee: ಅತ್ಯಾಚಾರ ವಿರೋಧಿ ಕಾನೂನನ್ನು ಕಠಿಣಗೊಳಿಸುವಂತೆ ಕೋರಿ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಪತ್ರ

Kolkata Rape Case: ಈ ತಿಂಗಳ ಆರಂಭದಲ್ಲಿ ಕೊಲ್ಕತ್ತಾದ ಆರ್‌ಜಿ ಕರ್ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.

Mamata Banerjee: ಅತ್ಯಾಚಾರ ವಿರೋಧಿ ಕಾನೂನನ್ನು ಕಠಿಣಗೊಳಿಸುವಂತೆ ಕೋರಿ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಪತ್ರ
ಮಮತಾ ಬ್ಯಾನರ್ಜಿ
Follow us
ಸುಷ್ಮಾ ಚಕ್ರೆ
|

Updated on:Aug 22, 2024 | 7:39 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣಗಳನ್ನು ಎದುರಿಸಲು ಕಠಿಣ ಕಾನೂನು ರೂಪಿಸುವಂತೆ ಕೋರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ 31 ವರ್ಷದ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಹತ್ಯೆಯ ಕುರಿತು ರಾಷ್ಟ್ರವ್ಯಾಪಿ ಆಕ್ರೋಶದ ನಡುವೆ ಈ ಬೆಳವಣಿಗೆ ನಡೆದಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ಅತ್ಯಾಚಾರ-ಕೊಲೆ ಪ್ರಕರಣ ಮತ್ತು ನಂತರದ ಘಟನೆ ಸಂಭವಿಸಿದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವಿಧ್ವಂಸಕ ಕೃತ್ಯಗಳ ಬಗ್ಗೆ ಟೀಕೆಗಳನ್ನು ಎದುರಿಸುತ್ತಿದೆ ಎಂಬುದನ್ನು ಗಮನಿಸುವುದು ಮುಖ್ಯವಾಗಿದೆ. ಸುಪ್ರೀಂ ಕೋರ್ಟ್ “ಆಸ್ಪತ್ರೆಯಲ್ಲಿ ನಡೆದ ವಿಧ್ವಂಸಕತೆಯ ಸಮಸ್ಯೆಯನ್ನು ರಾಜ್ಯವು ಹೇಗೆ ನಿಭಾಯಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಾಗುತ್ತಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕೊಲ್ಕತ್ತಾ ವೈದ್ಯೆ ಕೊಲೆಗೂ ಮುನ್ನ ಸಾಮೂಹಿಕ ಅತ್ಯಾಚಾರ?; ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಅಂಶ ಬಯಲು

ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ:

ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ “ದೇಶದಾದ್ಯಂತ ನಿಯಮಿತವಾಗಿ ಮತ್ತು ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಅನೇಕ ಸಂದರ್ಭಗಳಲ್ಲಿ ಕೊಲೆಯೊಂದಿಗೆ ಅತ್ಯಾಚಾರಗಳು ನಡೆಯುತ್ತಿವೆ. ಲಭ್ಯವಿರುವ ಮಾಹಿತಿಯ ಪ್ರಕಾರ, ದೇಶಾದ್ಯಂತ ಪ್ರತಿದಿನ ಸುಮಾರು 90 ಅತ್ಯಾಚಾರ ಪ್ರಕರಣಗಳು ನಡೆಯುತ್ತಿರುವುದು ಸಮಾಜ ಮತ್ತು ರಾಷ್ಟ್ರದ ಆತ್ಮಸಾಕ್ಷಿಯನ್ನು ಅಲುಗಾಡಿಸುತ್ತಿದೆ. ಅಂತಹ ಘೋರ ಅಪರಾಧಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಶಿಕ್ಷೆಯನ್ನು ಸೂಚಿಸುವ ಕಟ್ಟುನಿಟ್ಟಾದ ಕಾನೂನಿನ ಮೂಲಕ ಇಂತಹ ಗಂಭೀರ ಮತ್ತು ಸೂಕ್ಷ್ಮ ಸಮಸ್ಯೆಯನ್ನು ಸಮಗ್ರ ರೀತಿಯಲ್ಲಿ ಕೇಂದ್ರ ಸರ್ಕಾರ ಪರಿಹರಿಸಬೇಕಾಗಿದೆ. ಅಂತಹ ಪ್ರಕರಣಗಳಲ್ಲಿ ತ್ವರಿತ ವಿಚಾರಣೆಗಾಗಿ ತ್ವರಿತಗತಿಯ ವಿಶೇಷ ನ್ಯಾಯಾಲಯಗಳ ಸ್ಥಾಪನೆಯನ್ನು ಪ್ರಸ್ತಾವಿತ ಶಾಸನದಲ್ಲಿ ಪರಿಗಣಿಸಬೇಕು. ತ್ವರಿತ ನ್ಯಾಯವನ್ನು ಒದಗಿಸಲು ಅಂತಹ ಪ್ರಕರಣಗಳ ವಿಚಾರಣೆಯನ್ನು 15 ದಿನಗಳಲ್ಲಿ ಪೂರ್ಣಗೊಳಿಸಬೇಕು ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Kolkata Crime News: ಪಶ್ಚಿಮ ಬಂಗಾಳದ ಕೊಲ್ಕತ್ತಾದ ಪೊದೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಪತ್ರಿಕಾಗೋಷ್ಠಿಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯ ಮುಖ್ಯ ಸಲಹೆಗಾರ ಅಲಪನ್ ಬಂಡೋಪಾಧ್ಯಾಯ ಆ ಪತ್ರವನ್ನು ಓದಿದ್ದಾರೆ. ಈ ಹಿಂದೆ, ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವಿಧ್ವಂಸಕ ಕೃತ್ಯಕ್ಕೆ ಬಿಜೆಪಿ ಮತ್ತು ಎಡಪಕ್ಷಗಳು (ರಾಮ್ ಮತ್ತು ಬಾಮ್) ಕಾರಣವೆಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು. ಅವರು ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯವನ್ನು ನಾಶಪಡಿಸಲು ಪ್ರಯತ್ನಿಸಿದರು ಎಂದು ಹೇಳಿದ್ದರು.

ಏನಿದು ಘಟನೆ?:

ಆಗಸ್ಟ್ 9ರಂದು ಆರ್​ಜಿ ಕರ್ ಆಸ್ಪತ್ರೆಯಲ್ಲಿ ನೈಟ್ ಡ್ಯೂಟಿ ಕರ್ತವ್ಯದಲ್ಲಿದ್ದಾಗ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು. ನಂತರ, ಆ 31 ವರ್ಷದ ಮಹಿಳೆಯ ಅರೆಬೆತ್ತಲೆ ದೇಹವು ಕೊಲ್ಕತ್ತಾದ ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಪತ್ತೆಯಾಗಿತ್ತು. ಮರುದಿನ ಅಪರಾಧಕ್ಕೆ ಸಂಬಂಧಿಸಿದಂತೆ ನಾಗರಿಕ ಸ್ವಯಂಸೇವಕನನ್ನು ಬಂಧಿಸಲಾಯಿತು. ಇದರ ಬೆನ್ನಲ್ಲೇ ಕೊಲ್ಕತ್ತಾ ಹೈಕೋರ್ಟ್ ಪ್ರಕರಣದ ತನಿಖೆಯನ್ನು ಕೊಲ್ಕತ್ತಾ ಪೊಲೀಸರಿಂದ ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಲು ಆದೇಶಿಸಿದೆ. ಈ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:39 pm, Thu, 22 August 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್