AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವಾನಿಪುರ ಕ್ಷೇತ್ರ ಉಳಿಸಿಕೊಂಡು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ಬಂಗಾಳದ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿರುವ ಸುವೇಂದು ಅಧಿಕಾರಿ 2 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಎರಡೂ ಕಡೆ ಅವರು ಗೆಲುವು ಸಾಧಿಸಿದ್ದರು. ಇದೀಗ ಒಂದು ಕ್ಷೇತ್ರವನ್ನು ಅವರು ಬಿಡಬೇಕಾಗಿರುವುದರಿಂದಾಗಿ ಭವಾನಿಪುರ ಸ್ಥಾನವನ್ನು ಉಳಿಸಿಕೊಳ್ಳಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನಂದಿಗ್ರಾಮದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಿ ತಮ್ಮ ಭವಾನಿಪುರ ಭದ್ರಕೋಟೆಯಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಸುವೇಂದು ಅಧಿಕಾರಿ 15,105 ಮತಗಳ ಅಂತರದಿಂದ ಸೋಲಿಸಿದ್ದರು.

ಭವಾನಿಪುರ ಕ್ಷೇತ್ರ ಉಳಿಸಿಕೊಂಡು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ಬಂಗಾಳದ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ
Suvendu Adhikari With Pm Modi
ಸುಷ್ಮಾ ಚಕ್ರೆ
|

Updated on: May 13, 2026 | 3:25 PM

Share

ಕೊಲ್ಕತ್ತಾ, ಮೇ 13: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಭವಾನಿಪುರ ವಿಧಾನಸಭಾ ಸ್ಥಾನದ ಶಾಸಕನಾಗಿ ಉಳಿಯುವುದಾಗಿ ಘೋಷಿಸಿದ್ದಾರೆ. ಅವರು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವು ದಿನಗಳ ನಂತರ ಅವರ ಈ ನಿರ್ಧಾರ ಹೊರಬಿದ್ದಿದೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಭವಾನಿಪುರ ಮತ್ತು ನಂದಿಗ್ರಾಮ ಎರಡೂ ಸ್ಥಾನಗಳನ್ನು ಗೆದ್ದ ಅವರು ಇಂದು ಭವಾನಿಪುರದಿಂದ ಶಾಸಕರಾಗಿ ರಾಜ್ಯ ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.

“ಉಪಚುನಾವಣೆಯಲ್ಲಿ ನಂದಿಗ್ರಾಮದಿಂದ ಬೇರೆಯವರು ಶಾಸಕರಾಗಿ ಆಯ್ಕೆಯಾಗುತ್ತಾರೆ. ಆದರೆ ಅಲ್ಲಿನ ಜನರು ನನ್ನ ಅನುಪಸ್ಥಿತಿಯನ್ನು ಅನುಭವಿಸಲು ನಾನು ಬಿಡುವುದಿಲ್ಲ. ರಾಜ್ಯದ ಉಳಿದ ಭಾಗಗಳ ಜೊತೆಗೆ ನಂದಿಗ್ರಾಮದ ಜನರಿಗೆ ನಾನು ನೀಡಿದ ಎಲ್ಲಾ ಅಭಿವೃದ್ಧಿ ಭರವಸೆಗಳನ್ನು ಈಡೇರಿಸುತ್ತೇನೆ” ಎಂದು ಸಿಎಂ ಸುವೇಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: West Bengal CM: ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ; ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಬಂದ ಮೊದಲ ದಿನದಂದು ಸುವೇಂದು ಅಧಿಕಾರಿ ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅವರು ಸದನದ ಪ್ರವೇಶದ್ವಾರದಲ್ಲಿ ಮಂಡಿಯೂರಿ ವಿಧಾನಸಭೆ ಪ್ರವೇಶಿಸುವ ಮೊದಲು ತಮ್ಮ ಹಣೆಯನ್ನು ನೆಲಕ್ಕೆ ಮುಟ್ಟಿಸಿ ನಮಸ್ಕರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್