ಅಪಾರ್ಟ್​ಮೆಂಟ್​ನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆ

|

Updated on: Nov 20, 2023 | 9:16 AM

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೃಂದಾವನ್ ಕರ್ಮಾಕರ್ (52) ಎಂದು ಗುರುತಿಸಲಾಗಿರುವ ವ್ಯಕ್ತಿ ಮೊದಲು ತನ್ನ ಕುಟುಂಬ ಸದಸ್ಯರಿಗೆ ವಿಷ ಕುಡಿಸಿ ಹತ್ಯೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಅಪಾರ್ಟ್​ಮೆಂಟ್​ನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆ
ಪೊಲೀಸ್
Image Credit source: NDTV
Follow us on

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೃಂದಾವನ್ ಕರ್ಮಾಕರ್ (52) ಎಂದು ಗುರುತಿಸಲಾಗಿರುವ ವ್ಯಕ್ತಿ ಮೊದಲು ತನ್ನ ಕುಟುಂಬ ಸದಸ್ಯರಿಗೆ ವಿಷ ಕುಡಿಸಿ ಹತ್ಯೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ಆತಂಕ ವ್ಯಕ್ತಪಡಿಸಿದ ನಂತರ ಪೊಲೀಸರು ಖರ್ದಾಹ್‌ನ ಎಂಎಸ್ ಮುಖರ್ಜಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ಗೆ ತೆರಳಿದರು. ಅಪಾರ್ಟ್‌ಮೆಂಟ್‌ಗೆ ಪ್ರವೇಶಿಸಲು ಬಾಗಿಲು ಒಡೆದು ನೋಡಿದಾಗ ನಾಲ್ಕು ಶವಗಳು ಪತ್ತೆಯಾಗಿವೆ.

ಕರ್ಮಾಕರ್ ಅವರ ಮೃತದೇಹವು ಫ್ಯಾನ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಕುಟುಂಬ ಸದಸ್ಯರ ಮೃತದೇಹಗಳು – ಪತ್ನಿ ದೇಬಶ್ರೀ, 17 ವರ್ಷದ ಮಗಳು ದೇಬಲೀನಾ ಮತ್ತು ಎಂಟು ವರ್ಷದ ಮಗ ಉತ್ಸಾಹ್​ ಫ್ಲಾಟ್‌ನ ವಿವಿಧ ಸ್ಥಳಗಳಲ್ಲಿ ಪತ್ತೆಯಾಗಿವೆ.

ಮತ್ತಷ್ಟು ಓದಿ: ದೀಪಾವಳಿಗೆ ಗಂಡ ತನ್ನ ತವರು ಮನೆಗೆ ಬರಲಿಲ್ಲ ಎಂದು ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ!

ಕಟ್ಟಡದಲ್ಲಿ ನೀರಿನ ಪಂಪ್ ನಿರ್ವಹಿಸುವ ವ್ಯಕ್ತಿ ಕೀಲಿಗಾಗಿ ಕರ್ಮಾಕರ್ ಅವರ ಫ್ಲಾಟ್‌ಗೆ ಹೋಗಿದ್ದರು. ಕಾಲಿಂಗ್ ಬೆಲ್ ಎಷ್ಟೇ ಪ್ರೆಸ್​ ಮಾಡಿದರೂ ಆ ಕಡೆಯಿಂದ ಉತ್ತರವಿರಲಿಲ್ಲ, ದುರ್ವಾಸನೆಯನ್ನು ಗಮನಿಸಿ ಸ್ಥಳೀಯ ಕೌನ್ಸಿಲರ್‌ಗೆ ಮಾಹಿತಿ ನೀಡಿದರು, ಬಳಿಕ ಅವರು ಪೊಲೀಸರಿಗೆ ಕರೆ ಮಾಡಿದ್ದರು.

ಪೊಲೀಸರು ಬಾಗಿಲು ಒಡೆದು ಒಳಗೆ ತೆರಳಿದಾಗ ನಾಲ್ವರ ಶವ ಪತ್ತೆಯಾಗಿದೆ.ಈ ಘಟನೆ ಅಕ್ಕಪಕ್ಕದ ಜನರನ್ನು ಬೆಚ್ಚಿ ಬೀಳಿಸಿದೆ. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಪತಿ ತನ್ನ ಹೆಂಡತಿಗೆ ವಿವಾಹೇತರ ಸಂಬಂಧವಿದೆ ಎಂದು ಸ್ನೇಹಿತರ ಬಳಿ ಹೇಳಿಕೊಂಡಿದ್ದ, ಅದನ್ನು ಸಹಿಸಲಾಗದೆ ಈ ಹೆಜ್ಜೆ ಇಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ