AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಕೊಡಲಿಲ್ಲವೆಂದು ಸಹೋದ್ಯೋಗಿಗೆ ಚಾಕುವಿನಿಂದ ಇರಿದ ಸರ್ಕಾರಿ ನೌಕರ

ರಜೆ ಸಿಗದ ಕಾರಣ ಸರ್ಕಾರಿ ಉದ್ಯೋಗಿಯೊಬ್ಬರು ಕಚೇರಿಯಲ್ಲಿ ಗದ್ದಲ ಸೃಷ್ಟಿಸಿ, ಸಹೋದ್ಯೋಗಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಈ ದಾಳಿಯಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ದಾಳಿಯ ನಂತರ, ಆರೋಪಿಯು ಕೈಯಲ್ಲಿ ರಕ್ತಸಿಕ್ತ ಚಾಕುವನ್ನು ಹಿಡಿದುಕೊಂಡು ಬೀದಿಗಿಳಿದನು. ದಾಳಿ ನಡೆಸಿದ ಉದ್ಯೋಗಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯೂಟೌನ್ ಪ್ರದೇಶದ ಕರಿಗೋರಿ ಭವನದ ರಾಜ್ಯ ಸರ್ಕಾರಿ ಉದ್ಯೋಗಿ ಅಮಿತ್ ಸರ್ಕಾರ್ ಎಂದು ಗುರುತಿಸಲಾಗಿದೆ.

ರಜೆ ಕೊಡಲಿಲ್ಲವೆಂದು ಸಹೋದ್ಯೋಗಿಗೆ ಚಾಕುವಿನಿಂದ ಇರಿದ ಸರ್ಕಾರಿ ನೌಕರ
ಅಮಿತ್ ಸರ್ಕಾರ್
ನಯನಾ ರಾಜೀವ್
|

Updated on:Feb 07, 2025 | 10:34 AM

Share

ರಜೆ ಕೊಡಲಿಲ್ಲವೆಂದು ಸರ್ಕಾರಿ ನೌಕರನೊಬ್ಬ ತನ್ನ ಸಹೋದ್ಯೋಗಿಗೆ ಚಾಕುವಿನಿಂದ ಇರಿದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿಧಾನ್ ನಗರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿ ಅಮಿತ್ ಕುಮಾರ್ ಸರ್ಕಾರ್ ಎಂದು ಗುರುತಿಸಲಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಕೈಯಲ್ಲಿ ರಕ್ತಸಿಕ್ತ ಚಾಕು ಹಿಡಿದುಕೊಂಡು ನಗರದ ಬೀದಿಗಳಲ್ಲಿ ನಡೆದುಕೊಂಡು ಹೋಗುತ್ತಿದ್ದ ಈ ವ್ಯಕ್ತಿಯನ್ನು ನೋಡಿ ಜನರು ಭಯಭೀತರಾಗಿದ್ದರು. ಚಾಕುವನ್ನು ಎಸೆಯುವಂತೆ ಅವರು ಕೇಳಿಕೊಳ್ಳುತ್ತಿದ್ದರು.

ಸಂಚಾರ ಪೊಲೀಸರು ಚಾಕುವನ್ನು ಕೆಳಗೆ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ ಬಳಿಕ ಬಂಧಿಸಿದ್ದಾರೆ, ಆದೇಶವನ್ನು ಪಾಲಿಸಿದ ಅಮಿತ್ ಕುಮಾರ್ ಪೊಲೀಸರಿಗೆ ಶರಣಾಗಿದ್ದಾನೆ. ಅಮಿತ್ ರಜೆ ಕೇಳಿದ್ದರು, ಆದರೆ ಅರ್ಜಿಯನ್ನು ತಿರಸ್ಕರಿಸಲಾಗಿತ್ತು.

ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದ ಕರಿಗರಿ ಭವನದಲ್ಲಿರುವ ತಮ್ಮ ಕಚೇರಿಯೊಳಗೆ ತಮ್ಮ ಸಹೋದ್ಯೋಗಗಳೊಂದಿಗೆ ವಾಗ್ವಾದ ನಡೆಸಿದ್ದು, ಬಳಿಕ ಚಾಕುವಿನಿಂದ ಇರಿದಿದ್ದಾರೆ. ಅಮಿತ್ ಸರ್ಕಾರ್ ಅವರ ಚಾಕು ದಾಳಿಯ ಸಮಯದಲ್ಲಿ ಅವರ ಕಚೇರಿಯ ಭದ್ರತಾ ಸಿಬ್ಬಂದಿಯೊಬ್ಬರಿಗೂ ಗಾಯವಾಗಿದೆ.

ಮತ್ತಷ್ಟು ಓದಿ: ಪ್ಯಾರಿಸ್​​ನಲ್ಲಿ ಚಾಕು ದಾಳಿ: 8 ಮಕ್ಕಳು, ಒಬ್ಬ ವ್ಯಕ್ತಿಗೆ ಗಾಯ; ದಾಳಿಕೋರನ ಬಂಧನ

ಪೊಲೀಸ್ ವಿಚಾರಣೆಯ ಸಮಯದಲ್ಲಿ, ಆರೋಪಿಯು ತನ್ನ ಸಹೋದ್ಯೋಗಿಗಳು ತನ್ನ ತಂದೆಯ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾನೆ, ಇದು ಅವನನ್ನು ಕೋಪಗೊಳಿಸಿತು. ಈ ಪ್ರಕರಣದಲ್ಲಿನ ಆರೋಪಗಳು ಮತ್ತು ಪ್ರತಿ-ಆರೋಪಗಳನ್ನು ತನಿಖಾ ಸಂಸ್ಥೆಗಳು ಇನ್ನೂ ಪರಿಶೀಲಿಸಬೇಕಾಗಿದೆ.

ಚಾಕು ಹೇಗೆ ಅವನ ಕೈಗೆ ಬಂತು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಸರ್ಕಾರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಆ ವ್ಯಕ್ತಿ ಮಾನಸಿಕ ಅಸ್ವಸ್ಥನೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಚಾಕು ದಾಳಿಯಲ್ಲಿ ಗಾಯಗೊಂಡವರನ್ನು ಜಯದೇವ್ ಚಕ್ರವರ್ತಿ, ಸಂತನು ಸಹಾ, ಸಾರ್ಥ ಲೇಟ್ ಮತ್ತು ಶೇಖ್ ಸತ್ಬುಲ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಘಟನೆಯಲ್ಲಿ ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ. ಆರೋಪಿ ಅಮಿತ್ ಸರ್ಕಾರ್ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:33 am, Fri, 7 February 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ