AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಅಹಂಕಾರಕ್ಕೆ ಪಶ್ಚಿಮ ಬಂಗಾಳದ ಜನ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ: ಅಬ್ಬಾಸ್ ಸಿದ್ದಿಕಿ

West Bengal Assembly Elections 2021: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಹೊರತುಪಡಿಸಿ, ತಮ್ಮ ಹಾದಿಗೆ ಅಡ್ಡಗಾಲಾಗುವ ಮತ್ತೊಂದು ಪಕ್ಷ ಇರಬಾರದೆಂದು ಈ ಪಕ್ಷಗಳು ಭಾವಿಸಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದರು.

ಮಮತಾ ಬ್ಯಾನರ್ಜಿ ಅಹಂಕಾರಕ್ಕೆ ಪಶ್ಚಿಮ ಬಂಗಾಳದ ಜನ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ: ಅಬ್ಬಾಸ್ ಸಿದ್ದಿಕಿ
ಕೊಲ್ಕತ್ತಾದಲ್ಲಿ ಭಾನುವಾರ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ನಾಯಕರು.
Ghanashyam D M | ಡಿ.ಎಂ.ಘನಶ್ಯಾಮ
|

Updated on: Feb 28, 2021 | 8:49 PM

Share

ಕೊಲ್ಕತ್ತಾ: ಎಡಪಕ್ಷಗಳು, ಕಾಂಗ್ರೆಸ್ ಮತ್ತು ಇತರ ಜಾತ್ಯತೀತ ಪಕ್ಷಗಳ ಮಹಾಮೈತ್ರಿಕೂಟವು ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಟಿಎಂಸಿ ಮತ್ತು ಬಿಜೆಪಿ ವಿರುದ್ಧ ನಿಚ್ಚಳ ಗೆಲುವು ಸಾಧಿಸಲಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿಶ್ವಾಸ ವ್ಯಕ್ತಪಡಿಸಿದರು. ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಎರಡು ಪಕ್ಷಗಳ ಸ್ಪರ್ಧೆಯಷ್ಟೇ ಇರುವುದಿಲ್ಲ ಎನ್ನುವುದಕ್ಕೆ ಇಲ್ಲಿ ನೆರೆದಿರುವ ಭಾರೀ ಸಂಖ್ಯೆಯ ಜನರೇ ಸಾಕ್ಷಿ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಹೊರತುಪಡಿಸಿ, ತಮ್ಮ ಹಾದಿಗೆ ಅಡ್ಡಗಾಲಾಗುವ ಮತ್ತೊಂದು ಪಕ್ಷ ಇರಬಾರದೆಂದು ಈ ಪಕ್ಷಗಳು ಭಾವಿಸಿವೆ. ಮುಂದಿನ ದಿನಗಳಲ್ಲಿ ಕೇವಲ ಮಹಾಮೈತ್ರಿಕೂಟ ಮಾತ್ರ ಉಳಿದುಕೊಳ್ಳುತ್ತದೆ. ಬಿಜೆಪಿ-ಕಾಂಗ್ರೆಸ್​ಗಳು ಪಶ್ಚಿಮ ಬಂಗಾಳದಲ್ಲಿ ಉಳಿಯುವುದಿಲ್ಲ ಎಂದರು.

ಟಿಎಂಸಿ-ಬಿಜೆಪಿಗೆ ಸವಾಲು ಹಾಕಿದ ಅಬ್ಬಾಸ್ ಸಿದ್ದಿಕಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಸೋಲಿಸುತ್ತೇವೆ. ರಾಜ್ಯದ ಜನರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಹಂಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಂದು ಇಂಡಿಯನ್ ಸೆಕ್ಯುಲರ್ ಫ್ರಂಟ್​ನ (ಐಎಸ್​ಎಫ್) ಅಬ್ಬಾಸ್ ಸಿದ್ದಿಕಿ ಹೇಳಿದರು. ನಗರದ ಪರೇಡ್ ಮೈದಾನದಲ್ಲಿ ಭಾನುವಾರ ನಡೆದ ಎಡಪಕ್ಷಗಳು, ಕಾಂಗ್ರೆಸ್ ಮತ್ತು ಜಾತ್ಯತೀತ ಪಕ್ಷಗಳ ಮೈತ್ರಿಕೂಟದ ಬೃಹತ್ ಸಮಾವೇಶದಲ್ಲಿ ಮಾತನಾಡಿದರು.

ಈ ಬಾರಿ ಬಿಜೆಪಿ ಮತ್ತು ಅದರ ಬೇನಾಮಿ ಮಮತಾ ಬ್ಯಾನರ್ಜಿಯಿಂದ ಪಶ್ಚಿಮ ಬಂಗಾಳಕ್ಕೆ ಮುಕ್ತಿ ಸಿಗುತ್ತದೆ. ಮಮತಾ ಬ್ಯಾನರ್ಜಿ ಮತ್ತು ಅವರ ಟಿಎಂಸಿ ನಾಯಕರು ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ನಾಶಪಡಿಸಿದ್ದಾರೆ. ರಾಜ್ಯದಲ್ಲೀಗ ಅರಾಜಕ ಪರಿಸ್ಥಿತಿ ನೆಲೆಗೊಂಡಿದೆ ಎಂದು ಹೇಳಿದರು.

ಕಾಂಗ್ರೆಸ್ ಜೊತೆಗೆ ಐಎಸ್​ಎಫ್​ನ ಸೀಟು ಹಂಚಿಕೆ ಮಾತುಕತೆ ಇನ್ನೂ ನಡೆಯುತ್ತಿದೆ. ಕಾಂಗ್ರೆಸ್​ನೊಂದಿಗೆ ಒಪ್ಪಂದ ಅಂತಿಮಗೊಳ್ಳುವ ಮೊದಲೇ ಎಡಪಕ್ಷಗಳೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಐಎಸ್​ಎಫ್ ಅಂತಿಮಗೊಳಿಸಿದೆ.

Abbas Siddiqui

ಐಎಸ್​ಎಫ್ ನಾಯಕ ಅಬ್ಬಾಸ್ ಸಿದ್ದಿಕಿ

ಚುನಾವಣಾ ದಿನಾಂಕ ಘೋಷಣೆ ಚುನಾವಣಾ ಆಯೋಗವು ಶುಕ್ರವಾರ ಪಶ್ಚಿಮ ಬಂಗಾಳಕ್ಕೆ ಚುನಾವಣಾ ದಿನಾಂಕಗಳನ್ನು ಘೋಷಿಸಿದೆ. ಮಾರ್ಚ್​ 27ರಿಂದ ಆರಂಭವಾಗಲಿರುವ ಚುನಾವಣೆ ಏಪ್ರಿಲ್ 29ರವರೆಗೆ ಒಟ್ಟು 8 ಹಂತಗಳಲ್ಲಿ ನಡೆಯಲಿದೆ. ಒಟ್ಟು 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 209 ಸ್ಥಾನ ಪಡೆದಿತ್ತು. ಬಿಜೆಪಿ 27, ಕಾಂಗ್ರೆಸ್ 23, ಸಿಪಿಎಂ 19 ಸ್ಥಾನ ಪಡೆದಿತ್ತು. ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಜಿದ್ದಾಜಿದ್ದೆ ಹೋರಾಟ ನಡೆಯುತ್ತಿದ್ದು ಚುನಾವಣಾ ಕಣ ರಂಗೇರಿದೆ.

ಇದನ್ನೂ ಓದಿ: ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಪಶ್ಚಿಮ ಬಂಗಾಳದ ಪೊಲೀಸ್​ ಇಲಾಖೆಯಲ್ಲಿ ಮಹತ್ವದ ಬದಲಾವಣೆ

ಇದನ್ನೂ ಓದಿ: West Bengal Election Date 2021: ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ, ಮೇ 2ರಂದು ಫಲಿತಾಂಶ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?