West Bengal Election Date 2021: ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ, ಮೇ 2ರಂದು ಫಲಿತಾಂಶ

Election Date: ಕಳೆದ ಕೆಲವು ತಿಂಗಳುಗಳಲ್ಲಿ ಟಿಎಂಸಿಯಿಂದ ಹಲವಾರು ಸದಸ್ಯರು ಬಿಜೆಪಿಗೆ ಸೇರಿರುವುದರಿಂದ ಮತ್ತು ಟಿಎಂಸಿ ನಾಯಕರ ಮೇಲೆ ಭ್ರಷ್ಟಾಚಾರ ಆರೋಪಗಳಿರುವುದರಿಂದ ಈ ಚುನಾವಣೆ ಟಿಎಂಸಿ ಪಾಲಿಗೆ ನಿರ್ಣಾಯಕವಾಗಲಿದೆ.

West Bengal Election Date 2021: ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ, ಮೇ 2ರಂದು ಫಲಿತಾಂಶ
ನರೇಂದ್ರ ಮೋದಿ ಮತ್ತು ಮಮತಾ ಬ್ಯಾನರ್ಜಿ
Follow us
ರಶ್ಮಿ ಕಲ್ಲಕಟ್ಟ
|

Updated on:Feb 26, 2021 | 7:52 PM

ದೆಹಲಿ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 294 ಸೀಟುಗಳಿರುವ ವಿಧಾನಸಭೆಗೆ ಮಾರ್ಚ್ 27ರಿಂದ ಏಪ್ರಿಲ್29ರವರೆಗೆ ಚುನಾವಣೆ ನಡೆಯಲಿದ್ದು ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಈ ಬಾರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ನಡುವೆ ಸ್ಪರ್ಧೆ ನಡೆಯಲಿದೆ. ಈ ಚುನಾವಣೆಯಲ್ಲಿ 200ಕ್ಕಿಂತಲೂ ಹೆಚ್ಚು ಸೀಟು ಗೆಲ್ಲಲು ಬಿಜೆಪಿ ಹವಣಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಟಿಎಂಸಿಯಿಂದ ಹಲವಾರು ಸದಸ್ಯರು ಬಿಜೆಪಿಗೆ ಸೇರಿರುವುದರಿಂದ ಮತ್ತು ಟಿಎಂಸಿ ನಾಯಕರ ಮೇಲೆ ಭ್ರಷ್ಟಾಚಾರ ಆರೋಪಗಳಿರುವುದರಿಂದ ಈ ಚುನಾವಣೆ ಟಿಎಂಸಿ ಪಾಲಿಗೆ ನಿರ್ಣಾಯಕವಾಗಲಿದೆ. ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಪೈಪೋಟಿ ನಡೆಸುತ್ತಿದ್ದವು. ಆದರೆ ಈ ಬಾರಿ ಬಿಜೆಪಿ ಮತ್ತು ಟಿಎಂಸಿ ನಡುವಿನ ಸ್ಪರ್ಧೆ ಎಂದೇ ಪಶ್ಚಿಮ ಬಂಗಾಳ ಚುನಾವಣೆಯನ್ನು ಬಿಂಬಿಸಲಾಗುತ್ತದೆ.

ಈಗಾಗಲೇ ಚುನಾವಣಾ ಪ್ರಚಾರಗಳು ಭರದಿಂದ ನಡೆಯುತ್ತಿದ್ದು ಬಿಜೆಪಿ ಮತ್ತು ಟಿಎಂಸಿ ನಾಯಕರು ಪರಸ್ಪರ ಟೀಕೆ-ವಾಗ್ವಾದಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಗೋಲ್ ಕೀಪರ್ ಆಗಲಿದ್ದು, ಬೇರೆ ಯಾವುದೇ ರಾಷ್ಟ್ರೀಯ ಪಕ್ಷಕ್ಕೆ ಒಂದೇ ಒಂದು ಗೋಲು ಬಾರಿಸಲು ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅದೇ ವೇಳೆ ಮೆರವಣಿಗೆ, ರೋಡ್ ಶೋಗಳನ್ನು ನಡೆಸುತ್ತಾ ಅಬ್ಬರದ ಪ್ರಚಾರ ನಡೆಸುತ್ತಿರುವ ಬಿಜೆಪಿ, ಪಶ್ಚಿಮ ಬಂಗಾಳವನ್ನು ಸೋನರ್ ಬಾಂಗ್ಲಾ ಮಾಡುವುದಾದಿ ಭರವಸೆ ನೀಡಿದೆ. ಮಮತಾ ಬ್ಯಾನರ್ಜಿ ಅವರ ಅಧಿಕಾರವಧಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳನ್ನು ಎತ್ತಿ ತೋರಿಸಿ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ.

ಒಂದು ವೇಳೆ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಗೆದ್ದರೆ ಮಮತಾ ಬ್ಯಾನರ್ಜಿ ಮೂರನೇ ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ. ಬಿಜೆಪಿ ಇಲ್ಲಿಯವರೆಗೆ ಯಾವುದೇ ಅಭ್ಯರ್ಥಿಯನ್ನು ಘೋಷಿಸಿಲ್ಲ. ಆದರೆ ಬಿಜೆಪಿ ಇಲ್ಲಿ ಖಾತೆ ತೆರೆದರೆ ಅದು ರಾಜಕೀಯವಲಯದಲ್ಲಿ ಮಹತ್ವದ ಬೆಳವಣಿಗೆಯಾಗಲಿದೆ.

ಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ಅವಲೋಕನ ನಡೆಸಸಲು ಚುನಾವಣಾ ಆಯೋಗದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಬಂಗಾಳದಾದ್ಯಂತವಿರುವ 78,000 ಮತಗಟ್ಟೆಗಳನ್ನು ಇವರು ಪರಿಶೀಲಿಸಿದ್ದು, ಅಲ್ಲಿ ನೀರು, ಶೌಚಾಲಯ ಮತ್ತು ಇನ್ನಿತರ ಸೌಕರ್ಯಗಳು ಇರುವುದಾಗಿ ಖಾತ್ರಿ ಪಡಿಸಿದ್ದಾರೆ.

ಕೊವಿಡ್ ಸಂಕ್ರಾಮಿಕದ ಹೊತ್ತಲ್ಲಿ ನಡೆಯುವ ಚುನಾವಣೆ ಇದಾಗಿರುವ ಕಾರಣ ಕಟ್ಟುನಿಟ್ಟಿನ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಮತಗಟ್ಟೆಯಲ್ಲಿರುವ ಸಿಬ್ಬಂದಿಗಳು ಮಾಸ್ಕ್, ಫೇಸ್ ಶೀಲ್ಡ್, ಗ್ಲೌಸ್ ಮತ್ತು ಸ್ಯಾನಿಟೈಸರ್​ಗಳನ್ನು ಬಳಸಬೇಕು. ಮತದಾರರ ದೇಹದ ಉಷ್ಣತೆ ಪರೀಕ್ಷಿಸಿದ ನಂತರವೇ ಮತದಾನಕ್ಕೆ ಅವಕಾಶ ನೀಡಲಾಗುವುದು.

ಒಟ್ಟು 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) 209 ಸ್ಥಾನ ಪಡೆದಿದೆ. ಟಿಎಂಸಿ ಮೈತ್ರಿ ಪಕ್ಷ ಜಿಜೆಎಂ 2 ಸ್ಥಾನ ಹೊಂದಿದೆ. ಬಿಜೆಪಿ 27, ಕಾಂಗ್ರೆಸ್ 23, ಸಿಪಿಎಂ 19 ಸ್ಥಾನ ಪಡೆದಿದೆ. 10 ಕ್ಷೇತ್ರಗಳು ಖಾಲಿಯಿವೆ.

ಮತದಾನ  ಪ್ರಕ್ರಿಯೆ ಹೀಗಿರಲಿದೆ  ಮೊದಲ ಹಂತದ ಚುನಾವಣೆ ಮಾರ್ಚ್  27ಕ್ಕೆ  ನಡೆಯಲಿದೆ. 2ನೇ ಹಂತದ ಚುನಾವಣೆ- 1ನೇ ಏಪ್ರಿಲ್ , 3ನೇ ಹಂತದ ಚುನಾವಣೆ- 31 ಕ್ಷೇತ್ರಗಳಲ್ಲಿ ಚುನಾವಣೆ, ಮತದಾನ 6 ಏಪ್ರಿಲ್, 4ನೇ ಹಂತದ ಚುನಾವಣೆ – 44 ಕ್ಷೇತ್ರಗಳಲ್ಲಿ ಚುನಾವಣೆ, ಏಪ್ರಿಲ್ 10ರಂದು ಮತದಾನ 5ನೇ ಹಂತದ ಚುನಾವಣೆ – 45 ಕ್ಷೇತ್ರಗಳಲ್ಲಿ ಚುನಾವಣೆ, 17 ಏಪ್ರಿಲ್ ಮತದಾನ 6ನೇ ಹಂತದ ಚುನಾವಣೆ – 43 ಕ್ಷೇತ್ರಗಳು,22 ಏಪ್ರಿಲ್ ಮತದಾನ 7ನೇ ಹಂತದ ಚುನಾವಣೆ – 36 ಕ್ಷೇತ್ರಗಳು – 26 ಏಪ್ರಿಲ್ ಮತದಾನ, 8ನೇ ಹಂತದ ಚುನಾವಣೆ – 29 ಏಪ್ರಿಲ್  ಮತದಾನ 2 ಮಾರ್ಚ್ ಅಧಿಸೂಚನೆ, 9 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಮಾರ್ಚ್ 10- ಪರಿಶೀಲನೆ ನಡೆಯಲಿದ್ದು ಮೇ.2ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: West Bengal Elections: ಪಶ್ಚಿಮ ಬಂಗಾಳ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಸ್ಕೂಟರ್ ಓಡಿಸಿದ ಸ್ಮೃತಿ ಇರಾನಿ

Published On - 7:49 pm, Fri, 26 February 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ