West Bengal Elections: ಪಶ್ಚಿಮ ಬಂಗಾಳ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಸ್ಕೂಟರ್ ಓಡಿಸಿದ ಸ್ಮೃತಿ ಇರಾನಿ

ಬಿಜೆಪಿ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಬಂಗಾಳದ ಜನರು ಹಾಜರಾಗುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಮಲ ಅರಳುತ್ತದೆ ಎಂಬುದಕ್ಕೆ ಇದೇ ಸೂಚನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಂಚ್​ಪೋಟಾದಲ್ಲಿ ಹೇಳಿದ್ದಾರೆ.

West Bengal Elections: ಪಶ್ಚಿಮ ಬಂಗಾಳ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಸ್ಕೂಟರ್ ಓಡಿಸಿದ ಸ್ಮೃತಿ ಇರಾನಿ
ಬಿಜೆಪಿ ರೋಡ್​ ಶೋನಲ್ಲಿ ಸ್ಕೂಟರ್ ಓಡಿಸಿದ ಸ್ಮೃತಿ ಇರಾನಿ
Follow us
TV9 Web
| Updated By: ganapathi bhat

Updated on:Apr 06, 2022 | 7:41 PM

ಕೋಲ್ಕತ್ತಾ: ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಇಂದು (ಫೆ.26) ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಂದು ದಿನದ ಬಂಗಾಳ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಪಂಚ್​ಪೋಟಾದಲ್ಲಿ ಸ್ಮೃತಿ ಇರಾನಿ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ರೋಡ್​ಶೋನಲ್ಲಿ ಪಾಲ್ಗೊಂಡು ಸ್ಕೂಟರ್ ಚಾಲನೆ ಮಾಡಿ ಗಮನ ಸೆಳೆದಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಸ್ಮೃತಿ ಇರಾನಿ, ಪಶ್ಚಿಮ ಬಂಗಾಳದ ದಕ್ಷಿಣ ಪರಗಣ ಜಿಲ್ಲೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತೀಯ ಜನತಾ ಪಾರ್ಟಿ (BJP) ಪ್ರಚಾರ ಯಾತ್ರೆಗಳಿಗೆ ಅಥವಾ ಸಮಾರಂಭಗಳಿಗೆ ಪಶ್ಚಿಮ ಬಂಗಾಳದ ಜನರು ಬಹಳಷ್ಟು ಪ್ರೋತ್ಸಾಹ ನೀಡುತ್ತಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಬಂಗಾಳದ ಜನರು ಹಾಜರಾಗುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಮಲ ಅರಳುತ್ತದೆ ಎಂಬುದಕ್ಕೆ ಇದೇ ಸೂಚನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಂಚ್​ಪೋಟಾದಲ್ಲಿ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಆಳ್ವಿಕೆಯಲ್ಲಿ ನಡೆದ ಹಿಂಸಾಚಾರಗಳು ಮತ್ತು ಪ್ರಜಾಪ್ರಭುತ್ವದ ಧ್ವನಿಗಳು ತೃಣಮೂಲ ಕಾಂಗ್ರೆಸ್ ಪಕ್ಷವನ್ನು (TMC) ವಿಧಾನಸಭಾ ಚುನಾವಣೆಯಲ್ಲಿ ಸೋಲಿಸುತ್ತಾರೆ ಎಂದು ಸ್ಮೃತಿ ಇರಾನಿ ಅಭಿಪ್ರಾಯಪಟ್ಟಿದ್ದಾರೆ.

ಪಶ್ಚಿಮ ಬಂಗಾಳ ಬಿಜೆಪಿ ರೋಡ್​ಶೋನಲ್ಲಿ ಸ್ಕೂಟರ್ ಚಲಾಯಿಸಿದ ಸ್ಮೃತಿ ಇರಾನಿ

ಈ ಹಿಂದೆಯೂ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿದ್ದ ಸ್ಮೃತಿ ಇರಾನಿ ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆಂತರಿಕ ಜಗಳವನ್ನು ಉತ್ತೇಜಿಸುವ ಮತ್ತು ಜೈ ಶ್ರೀರಾಮ್ ಘೋಷಣೆಯನ್ನು ದ್ವೇಷಿಸುವ ಪಕ್ಷವಾದ ಟಿಎಂಸಿಯಲ್ಲಿ ಯಾರೂ ಇರಲು ಇಷ್ಟಪಡುವುದಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದರು. ಹೌರಹ್​ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಸ್ಮೃತಿ ಇರಾನಿ, ದೀದೀ..ನೀವು ಜೈ ಶ್ರೀರಾಮ್​ ಎಂಬ ಘೋಷಣೆಯನ್ನು ವರ್ಜಿಸಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದೆ. ರಾಮರಾಜ್ಯ ಪರಿಕಲ್ಪನೆ ಪಶ್ಚಿಮ ಬಂಗಾಳದ ಬಾಗಿಲನ್ನೂ ಬಡಿಯುತ್ತಿದೆ ಎಂದು ಹೇಳಿದ್ದರು.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ನಿಂದ ಬರೀ ಭ್ರಷ್ಟಾಚಾರವೇ ನಡೆಯುತ್ತಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದ ಸುಮಾರು 8 ತಿಂಗಳು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ 80 ಕೋಟಿ ಜನರಿಗೆ ಅನುಕೂಲವಾಗುವಂತೆ ಪಡಿತರ ನೀಡಿದೆ. ಆದರೆ ಪಶ್ಚಿಮ ಬಂಗಾಳ ಸರ್ಕಾರ ಇದನ್ನು ಫಲಾನುಭವಿಗಳಿಗೆ ತಲುಪಿಸದೆ ಲೂಟಿ ಮಾಡಿದೆ ಎಂದು ಸ್ಮೃತಿ ಇರಾನಿ ಆರೋಪಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳವನ್ನು ಸೋನಾರ್ ಬಾಂಗ್ಲಾ ಮಾಡುತ್ತೇವೆ; ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಭರವಸೆ

PM Modi in West Bengal: ಪಶ್ಚಿಮ ಬಂಗಾಳದ ಜನರು ಬದಲಾವಣೆ ಬಯಸುತ್ತಿದ್ದಾರೆ: ನರೇಂದ್ರ ಮೋದಿ

Published On - 5:07 pm, Fri, 26 February 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ