ಪಶ್ಚಿಮ ಬಂಗಾಳದ ಭತ್ತದ ಗದ್ದೆಯಲ್ಲಿ ಮುಖ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಭತ್ತದ ಗದ್ದೆಯೊಂದರಲ್ಲಿ ಮುಖ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಸಾರ್ವಜನಿಕರ ನಿದ್ದೆಗೆಡಿಸಿದೆ. ಮಾಹಿತಿ ಪಡೆದ ಮಾಲ್ಡಾ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಗುರುತಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮಹಿಳೆಯ ಮುಖಕ್ಕೆ ಆ್ಯಸಿಡ್ ಹಾಕಿ ಸುಟ್ಟಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಂದಿದ್ದಾರೆ ಎಂದು ಅವರು ಹೇಳಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ದೇಹದ ಮೇಲೆ ಹಲವೆಡೆ ಇರಿತದ ಗಾಯಗಳಿವೆ. ಅಪರಾಧ ಸ್ಥಳದ ಸುತ್ತಲೂ ಚಾಕುಗಳು, ಆಸಿಡ್, ಬಳಸಿದ ಕಾಂಡೋಮ್‌ಗಳು ಮತ್ತು ಸುಟ್ಟ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ರಾಯಚೂರು: ಯರಮರಸ್ ಬಳಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಕುಮಾರ್ ಯಾದವ್ ಮಾತನಾಡಿ, ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ತನಿಖೆಯನ್ನು ಪ್ರಾರಂಭಿಸಲಾಗಿದೆ. ಮಹಿಳೆಯ ಮೈಮೇಲೂ ಸಾಕಷ್ಟು ಗಾಯದ ಗುರುತುಗಳಿವೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ