Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಪಟಾಕಿ ಕಾರ್ಖಾನೆ
Follow us
ನಯನಾ ರಾಜೀವ್
| Updated By: Digi Tech Desk

Updated on:May 17, 2023 | 10:41 AM

ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.  ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ, ಹಲವು ಮಂದಿ ಗಾಯಗೊಂಡಿದ್ದಾರೆ. ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಘಟನೆಯ ತನಿಖೆಯನ್ನು ಪ್ರಾರಂಭಿಸಿದೆ. ಮೂಲಗಳ ಪ್ರಕಾರ, ರಾಜ್ಯ ಸರ್ಕಾರವು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ ನಂತರ ಕೋಲ್ಕತ್ತಾದಿಂದ ಅಪರಾಧ ತನಿಖಾ ವಿಭಾಗದ (ಸಿಐಡಿ) ತಂಡವು ಮಂಗಳವಾರ ರಾತ್ರಿ 9.45 ಕ್ಕೆ ಸ್ಥಳಕ್ಕೆ ತಲುಪಿ ವಿಧಿವಿಜ್ಞಾನ ತಜ್ಞರ ಸಹಾಯದಿಂದ ತನಿಖೆ ಆರಂಭಿಸಿದೆ. ಪೂರ್ವ ಮೇದಿನಿಪುರ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ಕೆ, ಇಲ್ಲಿಯವರೆಗೆ, 9 ಮೃತದೇಹಗಳು ಪತ್ತೆಯಾಗಿವೆ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.

ಮಧ್ಯಾಹ್ನದ ಸಮಯದಲ್ಲಿ ಇದ್ದಕ್ಕಿದ್ದಂತೆ ಭಾರಿ ಸ್ಫೋಟವೊಂದು ಕೇಳಿಬಂದಿತ್ತು, ಕಾರ್ಖಾನೆಯ ಮೇಲ್ಛಾವಣಿ ಹಾರಿಹೋಗಿರುವುದನ್ನು ನೋಡಿದ್ದಾರೆ. ಜನರ ಮೃತ ದೇಹಗಳು ಛಿದ್ರವಾಗಿ ಬಿದ್ದಿವೆ. ಕೆಲವರ ದೇಹಗಳು ರಸ್ತೆಯಲ್ಲಿ ಬಿದ್ದಿವೆ. ಅದರಲ್ಲಿ ಹಲವರು ಸುಟ್ಟು ಕರಕಲಾದರು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತರು ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪೊಲೀಸರ ಪ್ರಕಾರ, ಸ್ಫೋಟ ಸಂಭವಿಸಿದ ಸ್ಥಳವು ಒಡಿಶಾದ ಗಡಿ ಪ್ರದೇಶದಲ್ಲಿದೆ.

ಮತ್ತಷ್ಟು ಓದಿ: ಪಶ್ಚಿಮ ಬಂಗಾಳ: ಮಿಡ್ನಾಪುರದಲ್ಲಿ ಪಟಾಕಿ ತಯಾರಿಸುತ್ತಿದ್ದ ಟಿಎಂಸಿ ನಾಯಕನ ಮನೆ ಸ್ಫೋಟ: ಏಳು ಸಾವು

ಕಾರ್ಖಾನೆ ಕಾನೂನುಬಾಹಿರವೋ ಅಥವಾ ಅಕ್ರಮವೋ ಎಂಬುದು ಪೊಲೀಸರಿಗೆ ತಿಳಿದಿಲ್ಲ. ಇತ್ತ ಎಗ್ರಾ ಠಾಣೆಯ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಇಡೀ ಅಪರಾಧ ಸ್ಥಳವನ್ನು ಸುತ್ತುವರಿಯಲಾಗಿದೆ. ಸ್ಫೋಟದ ನಂತರ, ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು, ಅದನ್ನು ನಂದಿಸಲು ಅಗ್ನಿಶಾಮಕ ದಳದ ವಾಹನವೂ ಸ್ಥಳಕ್ಕೆ ತಲುಪಿತು. ಸಮೀಪದ ಗುಡಿಸಲಿನಲ್ಲಿಯೂ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ಹತೋಟಿಗೆ ತರಲಾಗಿದೆ.

ಮತ್ತೊಂದೆಡೆ, ತೃಣಮೂಲ ಕಾಂಗ್ರೆಸ್ ಮುಖಂಡ ಕೃಷ್ಣಪಾಂಡ ಈ ಅಕ್ರಮ ಕಾರ್ಖಾನೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ್ ಮಜುಂದಾರ್ ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. ಎನ್‌ಐಎ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:59 am, Wed, 17 May 23

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ