ಚುನಾವಣೋತ್ತರ ಹಿಂಸಾಚಾರ ದೂರುಗಳ ಬಗ್ಗೆ ಮಾನವ ಹಕ್ಕುಗಳ ಆಯೋಗ ಪರಿಶೀಲಿಸಬೇಕು ಎಂಬ ಆದೇಶ ಹಿಂಪಡೆಯುವಂತೆ ಕಲ್ಕತ್ತಾ ಹೈಕೋರ್ಟ್ ಮೊರೆ ಹೋದ ಬಂಗಾಳ ಸರ್ಕಾರ
Post poll Violence: ಆದೇಶದ ಪ್ರಕಾರ ಐದು ನ್ಯಾಯಾಧೀಶರ ನ್ಯಾಯಪೀಠವು ಪಶ್ಚಿಮ ಬಂಗಾಳದಲ್ಲಿನ ಚುನಾವಣೋತ್ತರ ಹಿಂಸಾಚಾರ ಬಗ್ಗೆ ಸಂತ್ರಸ್ತರ ದೂರುಗಳನ್ನು ಆಲಿಸಲು ರಾಜ್ಯಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ(ಎನ್‌ಎಚ್‌ಆರ್‌ಸಿ) ಹೇಳಿದೆ.
ಕೊಲ್ಕತ್ತಾ: ಹೈಕೋರ್ಟ್‌ನ ಶುಕ್ರವಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಬೇಕು ಅಥವಾ ತಡೆಹಿಡಿಯಬೇಕೆಂದು ಕೋರಿ ಪಶ್ಚಿಮ ಬಂಗಾಳ ಸರ್ಕಾರ ಕಲ್ಕತ್ತಾ ಹೈಕೋರ್ಟ್‌ಗೆ ಮೊರೆ ಹೋಗಿದೆ. ಈ ಆದೇಶದ ಪ್ರಕಾರ ಐದು ನ್ಯಾಯಾಧೀಶರ ನ್ಯಾಯಪೀಠವು ಪಶ್ಚಿಮ ಬಂಗಾಳದಲ್ಲಿನ ಚುನಾವಣೋತ್ತರ ಹಿಂಸಾಚಾರ ಬಗ್ಗೆ ಸಂತ್ರಸ್ತರ ದೂರುಗಳನ್ನು ಆಲಿಸಲು ರಾಜ್ಯಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ(ಎನ್‌ಎಚ್‌ಆರ್‌ಸಿ) ಹೇಳಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ವರದಿಗಳನ್ನು ಎದುರಿಸಲು ಸರ್ಕಾರಕ್ಕೆ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿ ಗೃಹ ಮತ್ತು ಬೆಟ್ಟ ವ್ಯವಹಾರಗಳ ಇಲಾಖೆ , ಗೃಹ ಇಲಾಖೆಯ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪರವಾಗಿ ಅಫಿಡವಿಟ್ ಸಲ್ಲಿಸಲಾಗಿದೆ.
ಈ ವಿಷಯದಲ್ಲಿ ಯಾವುದೇ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಅಥವಾ ಇನ್ನಾವುದೇ ಪ್ರಾಧಿಕಾರಕ್ಕೆ ನಿರ್ದೇಶನ ನೀಡುವ ಮೊದಲು ಅಂತಹ ದೂರುಗಳ ಕುರಿತು ರಾಜ್ಯದ ಅರ್ಜಿದಾರರು ಮತ್ತು ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಸಲ್ಲಿಕೆ ಮಾಡಲು ಅನುಮತಿ ನೀಡುವಂತೆ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾನದ ನಂತರದ ಹಿಂಸಾಚಾರದ ಸಂದರ್ಭದಲ್ಲಿ ಸ್ಥಳಾಂತರಗೊಂಡ ವ್ಯಕ್ತಿಗಳು ಸಲ್ಲಿಸಿದ ದೂರುಗಳನ್ನು ಪರಿಶೀಲಿಸುವ ಸಮಿತಿಯನ್ನು ರಚಿಸುವಂತೆ ಕಲ್ಕತ್ತಾ ಹೈಕೋರ್ಟ್ ಕಳೆದ ಶುಕ್ರವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್‌ಎಚ್‌ಆರ್‌ಸಿ) ಆದೇಶಿಸಿತ್ತು.
ಪಶ್ಚಿಮ ಬಂಗಾಳ ರಾಜ್ಯವು ತನ್ನ ಸಮರ್ಥ ಅಧಿಕಾರಿಗಳ ಮೂಲಕ, ಫಲಿತಾಂಶ ಘೋಷಣೆಯ ನಂತರ ಯಾವುದೇ ಹಿಂಸಾಚಾರವನ್ನು ತಡೆಯಲು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ದೂರುಗಳು ಬಂದಾಗ ಕ್ರಮಗಳನ್ನು ತೆಗೆದುಕೊಂಡಿದ್ದು 12 ಸುಮೊಟೊ ದಾಖಲಿಸಿದೆ.
ರಾಜ್ಯದಲ್ಲಿ ಮತದಾನದ ನಂತರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ನೀಡಿದ ದೂರುಗಳ ಬಗ್ಗೆ ಯಾವುದೇ ಆದೇಶ ಹೊರಡಿಸುವ ಮೊದಲು ಪಶ್ಚಿಮ ಬಂಗಾಳ ರಾಜ್ಯಕ್ಕೆ ವಿಚಾರಣೆಯನ್ನು ನೀಡಬೇಕೆಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ.
ಮುಖ್ಯವಾಗಿ ಪಶ್ಚಿಮ ಬಂಗಾಳ ರಾಜ್ಯ ಮತ್ತು ಅಥವಾ ಅದರ ಅಧಿಕಾರಿಗಳ ವಿರುದ್ಧ 2021 ಜೂನ್ 18 ರ ಆದೇಶದಲ್ಲಿ ಹೈಕೋರ್ಟ್ ಕಂಡುಹಿಡಿದ ಮಾಹಿತಿಗಳನ್ನು ಪ್ರಕಟಿಸಬೇಕು ಎಂದು ಮನವಿ ಮಾಡಲಾಗಿದೆ. “2021 ರ ಜೂನ್ 18 ರ ಆದೇಶವನ್ನು ಹಿಂಪಡೆಯಬೇಕು ಅಥವಾ ಮಾರ್ಪಡಿಸಬಹುದು. ಪಶ್ಚಿಮ ಬಂಗಾಳದ ಕಾರ್ಯದರ್ಶಿ ಸಲ್ಲಿಸಿದ ವರದಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಲು ಅವಕಾಶವನ್ನು ನೀಡದೆ ಅದನ್ನು ಅಂಗೀಕರಿಸಲಾಗಿದೆ ಎಂದು ಅಫಿಡವಿಟ್ನಲ್ಲಿ ಹೇಳಲಾಗಿದೆ.
ಸ್ಥಳಾಂತರಗೊಂಡ ವ್ಯಕ್ತಿಗಳು ಸಲ್ಲಿಸಿದ ಕೆಲವು ದೂರುಗಳಿಗೆ ರಾಜ್ಯ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಗಮನಿಸಿದ ಹೈಕೋರ್ಟ್, “ಚುನಾವಣೋತ್ತರ ಹಿಂಸಾಚಾರದ ಕಾರಣ ರಾಜ್ಯದ ನಿವಾಸಿಗಳ ಜೀವನ ಮತ್ತು ಆಸ್ತಿ ಅಪಾಯದಲ್ಲಿದೆ ಎಂಬ ಆರೋಪದಂತಹ ಸಂದರ್ಭದಲ್ಲಿ, ರಾಜ್ಯವು ಇಷ್ಟಪಡುವ ರೀತಿಯಲ್ಲಿ ಮುಂದುವರಿಯಲು ಅನುಮತಿಸಲಾಗುವುದಿಲ್ಲ. ದೂರುಗಳಿಗೆ ತಕ್ಷಣದ ಕ್ರಮ ಅಗತ್ಯವಿದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ರಾಜ್ಯದ ನಿವಾಸಿಗಳಲ್ಲಿ ವಿಶ್ವಾಸವನ್ನು ಮೂಡಿಸುವುದು ರಾಜ್ಯದ ಕರ್ತವ್ಯವಾಗಿದೆ ಎಂದು ಹೇಳಿದೆ.
ಇದನ್ನೂ ಓದಿ: ಚುನಾವಣೋತ್ತರ ಹಿಂಸಾಚಾರ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್