AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲ; ಮಮತಾ ಬ್ಯಾನರ್ಜಿ ಈಗ ಮಾಜಿ ಸಿಎಂ

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ ನಂತರ ಪಶ್ಚಿಮ ಬಂಗಾಳದ ರಾಜ್ಯಪಾಲರು ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಹುಮತ ಕಳೆದುಕೊಂಡು ಅಧಿಕಾರಾವಧಿ ಮುಗಿದರೂ ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಮಮತಾ ಬ್ಯಾನರ್ಜಿಗೆ ಕಾನೂನಿನ ಮೂಲಕವೇ ರಾಜ್ಯಪಾಲರು ಉತ್ತರ ನೀಡಿದ್ದಾರೆ. ಹೀಗಾಗಿ, ದೀದಿ ಸರ್ಕಾರ ಅಧಿಕೃತವಾಗಿ ಪತನವಾಗಿದ್ದು, 15 ವರ್ಷಗಳ ಕಾಲ ರಾಜ್ಯವನ್ನು ಆಳಿದ ಮಮತಾ ಬ್ಯಾನರ್ಜಿ ಈಗ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ.

ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲ; ಮಮತಾ ಬ್ಯಾನರ್ಜಿ ಈಗ ಮಾಜಿ ಸಿಎಂ
Rn Ravi And Mamata BanerjeeImage Credit source: TV9
ಸುಷ್ಮಾ ಚಕ್ರೆ
|

Updated on:May 07, 2026 | 7:52 PM

Share

ಕೊಲ್ಕತ್ತಾ, ಮೇ 7: ಪಶ್ಚಿಮ ಬಂಗಾಳದ (West Bengal) ರಾಜ್ಯಪಾಲ ಆರ್.ಎನ್. ರವಿ ಇಂದು ಪಶ್ಚಿಮ ಬಂಗಾಳದ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದೆ. ಆದರೂ ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ಆರೋಪ ಹೊರಿಸಿ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದರು. ಈಗಾಗಲೇ ಮಮತಾ ಬ್ಯಾನರ್ಜಿ ಅವರ ಅಧಿಕಾರಾವಧಿ ಮುಗಿದಿರುವುದರಿಂದ ಕಾನೂನು ಸಲಹೆ ಪಡೆದ ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್.ಎನ್. ರವಿ ಬಂಗಾಳದ ಸಂಪುಟವನ್ನು ವಿಸರ್ಜಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಹೀಗಾಗಿ, ಬಿಜೆಪಿ ಸರ್ಕಾರ ರಚನೆಯಾಗಲು ಅವಕಾಶ ಸಿಕ್ಕಂತಾಗಿದೆ. ಮೇ 9ರಂದು ಬಂಗಾಳದಲ್ಲಿ ಬಿಜೆಪಿಯ ಮೊದಲ ಸರ್ಕಾರ ರಚನೆಯಾಗಲಿದೆ ಎನ್ನಲಾಗುತ್ತಿದೆ. ಆದರೆ, ಇನ್ನೂ ಬಿಜೆಪಿ ಸರ್ಕಾರ ರಚನೆಗೆ ರಾಜ್ಯಪಾಲರಿಗೆ ಹಕ್ಕು ಮಂಡನೆ ಮಾಡಿಲ್ಲ.

ಭಾರತದ ಸಂವಿಧಾನದ 174ನೇ ವಿಧಿಯ ಷರತ್ತು (2)ರ ಉಪ-ಷರತ್ತು (ಬಿ) ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಬಳಸಿಕೊಂಡು ಬಂಗಾಳದ ರಾಜ್ಯಪಾಲರು ಪಶ್ಚಿಮ ಬಂಗಾಳ ವಿಧಾನಸಭೆಯನ್ನು ವಿಸರ್ಜಿಸಲು ಆದೇಶಿಸಿದ್ದಾರೆ. ಈ ಘೋಷಣೆಯನ್ನು ಬುಧವಾರ, ಮೇ 6, 2026 ರಂದು ಪ್ರಕಟವಾದ ವಿಶೇಷ ಗೆಜೆಟ್ ಅಧಿಸೂಚನೆಯಲ್ಲಿ (ಅಧಿಸೂಚನೆ ಸಂಖ್ಯೆ: 275-PA/1L-03/2026) ಮಾಡಲಾಗಿದೆ. ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆ ಹೊರಡಿಸಿದ ಈ ನಿರ್ದೇಶನದ ಪ್ರಕಾರ, ಪ್ರಸ್ತುತ ವಿಧಾನಸಭೆಯನ್ನು ಮೇ 7ರಿಂದ ಜಾರಿಗೆ ಬರುವಂತೆ ಔಪಚಾರಿಕವಾಗಿ ವಿಸರ್ಜಿಸಲಾಗಿದೆ.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ದರೆ ಪಶ್ಚಿಮ ಬಂಗಾಳದಲ್ಲಿ ಏನಾಗುತ್ತದೆ?

ರಾಜ್ಯಪಾಲ ಆರ್.ಎನ್. ರವಿ ಅವರು ಸಹಿ ಮಾಡಿದ ಈ ಆದೇಶವನ್ನು ಸಾರ್ವಜನಿಕ ಹಿತಾಸಕ್ತಿಗಾಗಿ ರಾಜ್ಯದ ಮುಖ್ಯ ಕಾರ್ಯದರ್ಶಿ ದುಶ್ಯಂತ ನರಿಯಾಲ (ಐಎಎಸ್) ಪ್ರಕಟಿಸಿದ್ದಾರೆ. ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವ ಮೊದಲು ಚುನಾವಣೆಯ ನಂತರ ಹಳೆಯ ವಿಧಾನಸಭೆಯನ್ನು ವಿಸರ್ಜಿಸುವುದು ಸಾಮಾನ್ಯವಾಗಿ ಸಾಂವಿಧಾನಿಕ ಪದ್ಧತಿಯಾಗಿದೆ. ಈ ಆದೇಶವು 17 ನೇ ವಿಧಾನಸಭೆಯ ಅವಧಿಯನ್ನು ಕೊನೆಗೊಳಿಸಲಿದ್ದು, ಹೊಸದಾಗಿ ಆಯ್ಕೆಯಾದ ಪ್ರತಿನಿಧಿಗಳೊಂದಿಗೆ 18ನೇ ವಿಧಾನಸಭೆಯ ರಚನೆಗೆ ದಾರಿ ಮಾಡಿಕೊಡುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:47 pm, Thu, 7 May 26

Follow Us