ಪಶ್ಚಿಮ ಬಂಗಾಳದ ಮಮತಾ ಸರ್ಕಾರವನ್ನು ಭ್ರಷ್ಟಾಚಾರದ ಸರ್ಕಾರ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕರೆದಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ದೇಶಕ್ಕೆ ಸ್ಪೂರ್ತಿದಾಯಕವಾಗಿರುವ ಬಂಗಾಳದಲ್ಲಿ ಶಿಕ್ಷಣ ಸಚಿವರ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಎಸ್‌ಎಸ್‌ಸಿ ಹಗರಣ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಬಂಧನದ ಕುರಿತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಕ್ರಿಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 8 ವರ್ಷಗಳಲ್ಲಿ ಸರ್ಕಾರವು ಏನು ಮಾಡಿದೆ, ಏನು ಮಾಡಬೇಕಿದೆ ಎಂಬುದನ್ನು ನಿಮ್ಮಿಂದಲೇ ತಿಳಿಯುವ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ.
ಇದೇ ಕಾರಣದಿಂದ ತಾವು ಮೂರು ದಿನಗಳ ಕಾಲ ಪಶ್ಚಿಮ ಬಂಗಾಳದ ಪ್ರವಾಸದಲ್ಲಿರುತ್ತೇನೆ ಎಂದರು. ದೇಶದಲ್ಲಿ ರಾಷ್ಟ್ರಪತಿ ಚುನಾವಣೆ ಮುಗಿದಿದೆ, ಫಲಿತಾಂಶವು ಕೂಡ ಬಂದಿದೆ. ಈ ಬಾರಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಅಭ್ಯರ್ಥಿಯಾಗುವಲ್ಲಿ ಯಾವುದೇ ಸಂಶಯವಿರಲಿಲ್ಲ. ದೇಶದಲ್ಲಿ ಮೊದಲ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ಉನ್ನತ ಸ್ಥಾನಕ್ಕೆ ಏರುವ ಅವಕಾಶ ದೊರೆತಿದೆ.
ಮಾತೃಭಾಷೆಯಲ್ಲಿ ಶಿಕ್ಷಣ ಸಿಗಬೇಕು, ಉದ್ಯೋಗ ಆಧರಿತ ಶಿಕ್ಷಣ ನೀಡಬೇಕು ಎಂಬುದು ಸರ್ಕಾರದ ಆಸೆಯಾಗಿದೆ. ಆದರೆ ಪಶ್ಚಿಮ ಬಂಗಾಳದ ಜನತೆಗೆ ಇದರಿಂದ ತೊಂದರೆ ಏನಿದೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ.
Published On - 5:20 pm, Sat, 23 July 22