Assembly Election 2021 Date LIVE: ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ, ಮೇ 2ಕ್ಕೆ ಮತ ಎಣಿಕೆ
WB, Kerala, TN, Assam and Puducherry Election 2021 Result and Voting Schedule: ಕೊರೊನಾವೈರಸ್ ಸಾಂಕ್ರಾಮಿಕದ ಹೊತ್ತಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಇದಾಗಿದ್ದು, ಕಟ್ಟು ನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
Assembly Election 2021 Date LIVE: ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದೆ. ದೇಶ ಗೆಲ್ಲುವ ಹುಮ್ಮಸ್ಸಿನಲ್ಲಿ ಬಿಜೆಪಿಯಿದ್ದರೆ, ಕಾಂಗ್ರೆಸ್ಗೆ ಈಗ ಅಸ್ತಿತ್ವ ಸಾಬೀತುಪಡಿಸಿಕೊಳ್ಳುವ ತವಕ. ರಾಜಕಾರಣದಲ್ಲಿ ನಮ್ಮ ಮಹತ್ವ ಕಡಿಮೆಯಾಗಿಲ್ಲ ಎಂದು ಸಾರಿಹೇಳಬೇಕಾದ ಅನಿವಾರ್ಯತೆ ಸ್ಥಳೀಯ ಪಕ್ಷಗಳದ್ದು. ಭೌಗೋಳಿಕವಾಗಿಯೂ ಈ ಚುನಾವಣೆ ಮಹತ್ವದ್ದು. ದಕ್ಷಿಣ ಭಾರತದಲ್ಲಿ ಕರ್ನಾಟಕದಿಂದ ಆಚೆಗೆ ಪ್ರಭಾವ ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿರುವ ಬಿಜೆಪಿಗೆ ಪುದುಚೇರಿ, ತಮಿಳುನಾಡು ಬಹುಮುಖ್ಯ.
ಬಿಜೆಪಿಯ ಹಿಂದಿನ ಆವೃತ್ತಿ ಎನಿಸಿದ್ದ ಜನಸಂಘದ ಸಂಸ್ಥಾಪಕರಾದ ಶ್ಯಾಂ ಪ್ರಸಾದ್ ಮುಖರ್ಜಿಯವರ ತವರು ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಶತಾಯಗತಾಯ ಕಮಲ ಅರಳಿಸಲೇಬೇಕು ಎಂಬ ದೃಢ ಸಂಕಲ್ಪದೊಂದಿಗೆ ಬಿಜೆಪಿ ಅಭಿಯಾನ ನಡೆಸಿದೆ. ‘ಪಶ್ಚಿಮ ಬಂಗಾಳದಲ್ಲಿ ಗುಜರಾತಿಗಳ ಆಳ್ವಿಕೆಗೆ ಅವಕಾಶ ಕೊಡುವುದಿಲ್ಲ’ ಎಂದು ದೀದಿಯೂ ಸೆಡ್ಡು ಹೊಡೆದಿದ್ದಾರೆ.
Published On - 5:48 pm, Fri, 26 February 21