ಪಶ್ಚಿಮ ಬಂಗಾಳ: ಎನ್‌ಐಎ ತಂಡದ ಕಾರಿನ ಮೇಲೆ ದಾಳಿ ಮಾಡಿದ ಸ್ಥಳೀಯರು

ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡವು ಪಶ್ಚಿಮ ಬಂಗಾಳದಲ್ಲಿ 2022ರಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ತನಿಖಾ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಪೊಲೀಸ್‌ ದೂರು ದಾಖಲಿಸಿದೆ. ಇದೀಗ ಕೇಂದ್ರ ಪೊಲೀಸ್ ಪಡೆಯ ಬೃಹತ್ ತುಕಡಿ ಭೂಪತಿನಗರ ತಲುಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳ: ಎನ್‌ಐಎ ತಂಡದ ಕಾರಿನ ಮೇಲೆ ದಾಳಿ ಮಾಡಿದ ಸ್ಥಳೀಯರು
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 06, 2024 | 12:35 PM

ಭೂಪತಿನಗರ, ಎ.6: ಪಶ್ಚಿಮ ಬಂಗಾಳದ (West Bengal) ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ಇಂದು (ಎ.06) ಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತಂಡವು ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರ ಮನೆಯ ಮೇಲೆ 2022ರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ದಾಳಿಯನ್ನು ನಡೆಸಿತ್ತು. ಈ ವೇಳೆ ಕಿಡಿಗೇಡಿಗಳು ಎನ್‌ಐಎ ತಂಡದ ಕಾರಿನ ಮೇಲೆ ಇಟ್ಟಿಗೆಗಳನ್ನು ಎಸೆದು ವಿಂಡ್‌ಸ್ಕ್ರೀನ್‌ಗೆ ಹಾನಿ ಮಾಡಿದ್ದಾರೆ. ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳೀಯರು ವಾಹನಕ್ಕೆ ಪ್ರತಿಭಟನೆ ನಡೆಸಿ ಕಾರಿನ ಮೇಲೆ ದಾಳಿ ಮಾಡಿದ್ದಾರೆ.

ಈ ಘಟನೆಯಿಂದ ಎನ್‌ಐಎ ತಂಡದ ಅಧಿಕಾರಿಗೊಬ್ಬರಿಗೆ ಗಾಯ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಪೊಲೀಸ್‌ ದೂರು ದಾಖಲಿಸಿದೆ. ಇದೀಗ ಕೇಂದ್ರ ಪೊಲೀಸ್ ಪಡೆಯ ಬೃಹತ್ ತುಕಡಿ ಭೂಪತಿನಗರ ತಲುಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಡಿಸೆಂಬರ್ 3, 2022 ರಂದು, ಭೂಪತಿನಗರದಲ್ಲಿ ಹುಲ್ಲಿನ ಮೇಲ್ಛಾವಣಿಯ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದರು. ಕಳೆದ ತಿಂಗಳು ಈ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ಎಂಟು ತೃಣಮೂಲ ಕಾಂಗ್ರೆಸ್ ನಾಯಕರನ್ನು ವಿಚಾರಣೆಗೆ ಕರೆಸಿತ್ತು. ಎನ್‌ಐಎ ದಾಳಿಯನ್ನು ಬಿಜೆಪಿ ವ್ಯಕ್ತಿಗಳು ಮಾಡಿದ್ದರೆ ಎಂದು ಟಿಎಂಸಿ ಆರೋಪಿಸಿತ್ತು.

ಇದನ್ನೂ ಓದಿ: ‘ದೇಶ ಮೊದಲು’ ಮಂತ್ರದೊಂದಿಗೆ ಜನಸೇವೆಯಲ್ಲಿ ತೊಡಗಿರುವ ಬಿಜೆಪಿ ದೇಶದ ಅತ್ಯಂತ ನೆಚ್ಚಿನ ಪಕ್ಷ: ಪ್ರಧಾನಿ ಮೋದಿ

ಮಾರ್ಚ್ 28 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರಿಗೆ ನೋಟಿಸ್​​​ ನೀಡಿತ್ತು. ಇದಕ್ಕೆ ಉತ್ತರ ನೀಡದ ಕಾರಣ ಇಂದು ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ಹಿಂದೆಯೂ ಪಶ್ಚಿಮ ಬಂಗಾಳದಲ್ಲಿ ಎನ್​​​ಐಎ ಕಾರಿನ ಮೇಲೆ ನಡೆಸಿದರು. ಇದೀಗ ಮತ್ತೆ ಅವರ ಮೇಲೆ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:22 pm, Sat, 6 April 24