AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಪಶ್ಚಿಮ ಬಂಗಾಳ; ಇನ್​ಸ್ಟಾಗ್ರಾಂ ರೀಲ್ಸ್​ಗಾಗಿ ಐಫೋನ್ ಖರೀದಿಸಲು 8 ತಿಂಗಳ ಮಗುವನ್ನೇ ಮಾರಿದ ದಂಪತಿ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಜಯದೇವ್ ಘೋಷ್ ಮತ್ತು ಸತಿ ಎಂಬ ದಂಪತಿ ‘ಐಫೋನ್ 14’ ಖರೀದಿಸಲು ಎಂಟು ತಿಂಗಳ ಗಂಡು ಮಗುವನ್ನು ಮಾರಾಟ ಮಾಡಿದ್ದಾರೆ ಎಂದು ವರದಿಯಾಗಿದೆ.

West Bengal: ಪಶ್ಚಿಮ ಬಂಗಾಳ; ಇನ್​ಸ್ಟಾಗ್ರಾಂ ರೀಲ್ಸ್​ಗಾಗಿ ಐಫೋನ್ ಖರೀದಿಸಲು 8 ತಿಂಗಳ ಮಗುವನ್ನೇ ಮಾರಿದ ದಂಪತಿ
ಸಾಂದರ್ಭಿಕ ಚಿತ್ರImage Credit source: pixabay
ಗಣಪತಿ ಶರ್ಮಾ
|

Updated on:Jul 28, 2023 | 7:18 PM

Share

ಕೋಲ್ಕತ್ತ: ಎಲ್ಲರೂ ಇನ್​​​ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುವುದನ್ನು ನೋಡಿದ್ದ ಆ ದಂಪತಿಗೆ ತಾವೂ ಹಾಗೆ ಮಾಡಬೇಕು ಎನಿಸಿತು. ಅದಕ್ಕಾಗಿ ‘ಐಫೋನ್ 14 (iPhone 14)’ ಕೊಂಡುಕೊಂಡರೆ ಒಳ್ಳೆಯದು ಎಂದುಕೊಂಡ ಆ ದಂಪತಿಗೆ ದುಬಾರಿ ಫೋನ್​ ಖರೀದಿಸಲು ಹಣ ಹೊಂದಿಸುವುದು ಹೇಗೆಂಬುದೇ ದೊಡ್ಡ ಸಮಸ್ಯೆಯಾಯಿತು. ಅದಕ್ಕೆ ಅವರು ಕಂಡುಕೊಂಡ ಪರಿಹಾರ ಏನು ಗೊತ್ತೇ? ತಮ್ಮ ಎಂಟು ತಿಂಗಳ ಮಗುವನ್ನೇ ಮಾರಾಟ ಮಾಡಿದ್ದು! ಹೌದು, ಇಂಥದ್ದೊಂದು ಘಟನೆ ಪಶ್ಚಿಮ ಬಂಗಾಳದ (West Bengal) ಉತ್ತರ 24 ಪರಗಣ (North 24 Parganas) ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಜಯದೇವ್ ಘೋಷ್ ಮತ್ತು ಸತಿ ಎಂಬ ದಂಪತಿ ‘ಐಫೋನ್ 14’ ಖರೀದಿಸಲು ಎಂಟು ತಿಂಗಳ ಗಂಡು ಮಗುವನ್ನು ಮಾರಾಟ ಮಾಡಿದ್ದಾರೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ. ಈ ದಂಪತಿಗೆ ಏಳು ವರ್ಷದ ಮಗಳೊಬ್ಬಳು ಇದ್ದಾಳೆ ಎಂದೂ ವರದಿ ಉಲ್ಲೇಖಿಸಿದೆ.

ಅದೇ ಜಿಲ್ಲೆಯ ಖರ್ದಾಹ್ ನಿವಾಸಿ ಪ್ರಿಯಾಂಕಾ ಘೋಷ್ ಎಂಬಾಕೆಯಿಂದ ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ. ಬಾಲಕನ ತಾಯಿ ಮತ್ತು ಹಣ ನೀಡಿದ ಎಂಎಸ್ ಘೋಷ್ ಎಂಬವರನ್ನೂ ಪೊಲೀಸರು ಬಂಧಿಸಿದ್ದಾರೆ. ಮಗುವಿನ ತಂದೆ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.

ಮಗುವಿನ ತಾಯಿ ವಿಚಾರಣೆಯ ವೇಳೆ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಪತಿ ಹಾಗೂ ತಾನು ಇನ್​​ಸ್ಟಾಗ್ರಾಂಗೆ ರೀಲ್ಸ್​​​ ಮಾಡುವುದಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಮಾಡಲು ಬಯಸಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Delhi Crime: ಮದುವೆಯಾಗಲು ಒಲ್ಲೆ ಎಂದಿದ್ದಕ್ಕೆ ಸ್ನೇಹಿತನಿಂದ ವಿದ್ಯಾರ್ಥಿನಿ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ, ಸ್ಥಳದಲ್ಲೇ ಸಾವು

ಪಲೀಸ್ ಅಧಿಕಾರಿಗಳ ಪ್ರಕಾರ, ಜಯದೇವ್ ಘೋಷ್ ತನ್ನ ಮಗಳನ್ನು ಕೂಡ ಮಾರಾಟ ಮಾಡಲು ಪ್ರಯತ್ನಿಸಿದ್ದರು. ಆದರೆ ಸಾಧ್ಯವಾಗಿರಲಿಲ್ಲ ಎಂದು ವರದಿ ತಿಳಿಸಿದೆ.

ಗಂಡು ಮಗುವನ್ನು 2 ಲಕ್ಷ ರೂ.ಗೆ ಮಾರಾಟ ಮಾಡಲಾಗಿತ್ತು. ದಂಪತಿಯು ಆ ಹಣದಲ್ಲಿ ದಿಘಾ ಬೀಚ್‌ನಂತಹ ಅನೇಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಮೊಬೈಲ್ ಫೋನ್ ಸಹ ಖರೀದಿಸಿದ್ದಾರೆ ಎಂದು ದಂಪತಿಯ ನೆರೆಯವರಾದ ಲಕ್ಷ್ಮಿ ಕುಂದು ಎಂಬವರು ತಿಳಿಸಿರುವುದಾಗಿ ‘ಇಂಡಿಯಾ ಟುಡೆ’ ವರದಿ ಮಾಡಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:12 pm, Fri, 28 July 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್