ಪಶ್ಚಿಮ ಬಂಗಾಳ: ಶೇಕಡಾ 3ರಷ್ಟು ವಿದ್ಯಾರ್ಥಿಗಳು ಮಾತ್ರ ಪಾಸ್​​, ಉಳಿದ ಶೇಕಡಾ 97ರಷ್ಟು ವಿದ್ಯಾರ್ಥಿಗಳ ಜೀವನ ಬೀದಿಗೆ

ಪಶ್ಚಿಮ ಬಂಗಾಳದಲ್ಲಿ ಶೇಕಡಾ 3ರಷ್ಟು  ವಿದ್ಯಾರ್ಥಿಗಳು ಮಾತ್ರ ಪಾಸ್​ ಆಗಿದ್ದು, ಉಳಿದ ಶೇಕಡಾ 97 ವಿದ್ಯಾರ್ಥಿಗಳು ಫೇಲ್​​​ ಆಗಿದ್ದಾರೆ. ಇದೀಗ ಈ ವಿಚಾರವಾಗಿ ಪಶ್ಚಿಮ ಬಂಗಾಳದ ಗೌಟೆಂಗ್ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಹಾಗೂ ಗೌಟೆಂಗ್ ವಿಶ್ವವಿದ್ಯಾಲಯಕ್ಕೆ ಧಿಕ್ಕಾರ ಹಾಕಿದ್ದಾರೆ. 

ಪಶ್ಚಿಮ ಬಂಗಾಳ: ಶೇಕಡಾ 3ರಷ್ಟು ವಿದ್ಯಾರ್ಥಿಗಳು ಮಾತ್ರ ಪಾಸ್​​, ಉಳಿದ ಶೇಕಡಾ 97ರಷ್ಟು ವಿದ್ಯಾರ್ಥಿಗಳ ಜೀವನ ಬೀದಿಗೆ
ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 09, 2024 | 1:24 PM

ಪಶ್ಚಿಮ ಬಂಗಾಳದ ಗೌಟೆಂಗ್ ವಿಶ್ವವಿದ್ಯಾಲಯದ ನಡೆಸಿದ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದೀಗ ಈ ವಿಚಾರವಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ, ಸರ್ಕಾರ ಹಾಗೂ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಹಾಕುತ್ತಿದ್ದಾರೆ. ಪರೀಕ್ಷೆ ಬರೆದ ಶೇಕಡಾ ನೂರು ವಿದ್ಯಾರ್ಥಿಗಳಲ್ಲಿ ಶೇಕಡಾ ಮೂರರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣಗೊಂಡಿದ್ದಾರೆ. ಶೇಕಡಾ 97 ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದು ವಿದ್ಯಾರ್ಥಿಗಳಲ್ಲಿ ಅಚ್ಚರಿ ತಂದಿದೆ. ಇದೀಗ ಈ ಪರೀಕ್ಷೆಯಲ್ಲಿ ದೊಡ್ಡ ಅಕ್ರಮವಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಗೌರ್ಬಂಗ್ ವಿಶ್ವವಿದ್ಯಾಲಯದ ವ್ಯಾಪ್ತಿಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಭಟನೆ ಮಾಡಿ, ಮರು ಮೌಲ್ಯಮಾಪನ ಮಾಡಬೇಕು, ಹಾಗೂ ಈ ಫಲಿತಾಂಶವನ್ನು ವಾಪಸ್ಸು ಪಡೆಯಬೇಕು ಎಂದು ಹೇಳಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಯೊಬ್ಬರು ತಮ್ಮ ಬೇಡಿಕೆಯ ಪತ್ರವನ್ನು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಧರ್ಮದೇಟು; ವಿಡಿಯೋ ವೈರಲ್

ಮಾಲ್ಡಾ ಜಿಲ್ಲಾ ತೃಣಮೂಲ ಛಾತ್ರ ಪರಿಷತ್ತಿನ ನಿಯೋಗ ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದು, ವಿಶ್ವವಿದ್ಯಾಲಯದ ಅಧಿಕಾರಿಗಳು ಈ ಬಗ್ಗೆ ಉತ್ತರಿಸುವಂತೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ತೃಣಮೂಲ ಛಾತ್ರ ಪರಿಷತ್ ಅಧ್ಯಕ್ಷ ಪ್ರಸೂನ್ ರಾಯ್ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ನಂತರ ಶೇ.97ರಷ್ಟು ಮಂದಿ ಪ್ರಮುಖ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ. ನಾವು ನಮ್ಮ ಬೇಡಿಕೆಯನ್ನು ವಿಶ್ವವಿದ್ಯಾಲಯದ ಮುಂದೆ ಇಟ್ಟಿದ್ದೇವೆ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Tue, 9 July 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ