AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Panchayat Election: ಬಂಗಾಳ ಪಂಚಾಯತ್ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಟಿಎಂಸಿ, ಎರಡನೇ ಸ್ಥಾನದಲ್ಲಿ ಬಿಜೆಪಿ

ರಾಜ್ಯದ ಒಟ್ಟು 3,317 ಗ್ರಾಮ ಪಂಚಾಯಿತಿಗಳ ಪೈಕಿ 2,634ರಲ್ಲಿ ಟಿಎಂಸಿ ಗೆಲುವು ಸಾಧಿಸಿದೆ. ಬಿಜೆಪಿ 220 ಗ್ರಾಮ ಪಂಚಾಯಿತಿಗಳನ್ನು ಗೆದ್ದರೆ, ಎಡರಂಗ 41 ಮತ್ತು ಕಾಂಗ್ರೆಸ್ ಐದು ಗ್ರಾಮ ಪಂಚಾಯಿತಿಗಳನ್ನು ಗೆದ್ದುಕೊಂಡಿದೆ. ಐಎಸ್‌ಎಫ್ ಒಂದೇ ಒಂದು ಗ್ರಾಮ ಪಂಚಾಯಿತಿಯನ್ನು ಗೆಲ್ಲಲು ವಿಫಲವಾಗಿದೆ.

West Bengal Panchayat Election: ಬಂಗಾಳ ಪಂಚಾಯತ್ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಟಿಎಂಸಿ, ಎರಡನೇ ಸ್ಥಾನದಲ್ಲಿ ಬಿಜೆಪಿ
ಟಿಎಂಸಿ ಬೆಂಬಲಿಗರ ಸಂಭ್ರಮಾಚಾರಣೆ
Follow us
ರಶ್ಮಿ ಕಲ್ಲಕಟ್ಟ
|

Updated on:Jul 12, 2023 | 7:43 PM

ಪಶ್ಚಿಮ ಬಂಗಾಳದಾದ್ಯಂತ (West Bengal) ಒಟ್ಟು 63,229 ಗ್ರಾಮ ಪಂಚಾಯತ್ (Gram panchayath) ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) 34,901 ಸ್ಥಾನಗಳನ್ನು ಗೆದ್ದಿದೆ. ರಾಜ್ಯ ಚುನಾವಣಾ ಆಯೋಗದ ವೆಬ್‌ಸೈಟ್‌ ಪ್ರಕಾರಬಿಜೆಪಿ 9,719 ಸ್ಥಾನಗಳೊಂದಿಗೆ ದೂರದ ಎರಡನೇ ಸ್ಥಾನದಲ್ಲಿದೆ. ಎಡರಂಗವು 3,083 ಗ್ರಾಮ ಪಂಚಾಯಿತಿ ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 2,542 ಸ್ಥಾನಗಳನ್ನು ಮತ್ತು ಇತರರು 2,896 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವೆಬ್‌ಸೈಟ್ ಹೇಳಿದೆ.

ರಾಜ್ಯದ ಒಟ್ಟು 3,317 ಗ್ರಾಮ ಪಂಚಾಯಿತಿಗಳ ಪೈಕಿ 2,634ರಲ್ಲಿ ಟಿಎಂಸಿ ಗೆಲುವು ಸಾಧಿಸಿದೆ. ಬಿಜೆಪಿ 220 ಗ್ರಾಮ ಪಂಚಾಯಿತಿಗಳನ್ನು ಗೆದ್ದರೆ, ಎಡರಂಗ 41 ಮತ್ತು ಕಾಂಗ್ರೆಸ್ ಐದು ಗ್ರಾಮ ಪಂಚಾಯಿತಿಗಳನ್ನು ಗೆದ್ದುಕೊಂಡಿದೆ. ಐಎಸ್‌ಎಫ್ ಒಂದೇ ಒಂದು ಗ್ರಾಮ ಪಂಚಾಯಿತಿಯನ್ನು ಗೆಲ್ಲಲು ವಿಫಲವಾಗಿದೆ. ವೆಬ್‌ಸೈಟ್ ಪ್ರಕಾರ 214 ಗ್ರಾಮ ಪಂಚಾಯಿತಿಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಇತರರು ಮುನ್ನಡೆ ಸಾಧಿಸಿದ್ದಾರೆ. 203 ಗ್ರಾಮ ಪಂಚಾಯಿತಿಗಳು ಅತಂತ್ರ ಸ್ಥಿತಿಗೆ ತಲುಪಿವೆ. ಉಳಿದ ಸ್ಥಾನಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.

ಪಂಚಾಯತ್ ಸಮಿತಿ ಸ್ಥಾನಗಳ ಪ್ರಕಾರ, ಒಟ್ಟು 9,740 ರಲ್ಲಿ 6,430 ಸ್ಥಾನಗಳನ್ನು ಟಿಎಂಸಿ ಗೆದ್ದಿದೆ. ಬಿಜೆಪಿ 982 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಎಡರಂಗ 180 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 266 ಪಂಚಾಯತ್ ಸಮಿತಿ ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರರು ಅಭ್ಯರ್ಥಿಗಳು ಸೇರಿದಂತೆ ಇತರರು 279 ಸ್ಥಾನಗಳನ್ನು ಗೆದ್ದಿದ್ದಾರೆ. ಉಳಿದ ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ.

ಒಟ್ಟು 341 ಪಂಚಾಯಿತಿ ಸಮಿತಿಗಳಲ್ಲಿ 264ರಲ್ಲಿ ಟಿಎಂಸಿ ಗೆಲುವು ಸಾಧಿಸಿದೆ. ಬಿಜೆಪಿ ಒಂಬತ್ತು ಪಂಚಾಯತ್ ಸಮಿತಿಗಳನ್ನು ಗೆದ್ದುಕೊಂಡಿದ್ದು, ಎಡರಂಗ ಮೂರು ಗೆದ್ದಿದೆ. ಪಕ್ಷೇತರರು ಒಂಬತ್ತು ಪಂಚಾಯತಿ ಸಮಿತಿಗಳಲ್ಲಿ ಗೆಲುವು ಸಾಧಿಸಿದ್ದು, ನಾಲ್ಕು ಪಂಚಾಯತಿ ಸಮಿತಿಗಳಲ್ಲಿ ಅತಂತ್ರ ಸ್ಥಿತಿ ಇದೆ.

ಒಟ್ಟು 928 ಜಿಲ್ಲಾ ಪರಿಷತ್ ಸ್ಥಾನಗಳಲ್ಲಿ ಟಿಎಂಸಿ 674 ಮತ್ತು ಬಿಜೆಪಿ 21 ಸ್ಥಾನ ಗೆದ್ದಿದೆ. ಎಡರಂಗ ಎರಡು ಜಿಲ್ಲಾ ಪರಿಷತ್ ಸ್ಥಾನಗಳನ್ನು ಗೆದ್ದಿದ್ದು, ಕಾಂಗ್ರೆಸ್ 6 ಸ್ಥಾನಗಳನ್ನು ಗೆದ್ದಿದೆ. ಒಂದು ಸ್ಥಾನ ಪಕ್ಷೇತರರ ಪಾಲಾಯಿತು. ಮತ ಎಣಿಕೆ ನಡೆಯುತ್ತಿರುವುದರಿಂದ ಉಳಿದ ಸೀಟುಗಳ ಫಲಿತಾಂಶ ಇನ್ನಷ್ಟೇ ಬರಬೇಕಿದೆ. ರಾಜ್ಯದ ಎಲ್ಲಾ 20 ಜಿಲ್ಲಾ ಪರಿಷತ್‌ಗಳನ್ನು ಟಿಎಂಸಿ ಗೆದ್ದಿದೆ.

ಇದನ್ನೂ ಓದಿ: ಜುಲೈ 13ರಿಂದ ಪ್ರಧಾನಿ ಮೋದಿಯವರ ಫ್ರಾನ್ಸ್, ಯುಎಇ ಪ್ರವಾಸ ಆರಂಭ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ರಾಜ್ಯವು 63,229 ಸ್ಥಾನಗಳೊಂದಿಗೆ 3,317 ಗ್ರಾಮ ಪಂಚಾಯತ್‌ಗಳನ್ನು ಹೊಂದಿದೆ. 9,730 ಸ್ಥಾನಗಳೊಂದಿಗೆ 341 ಪಂಚಾಯತ್ ಸಮಿತಿಗಳು ಮತ್ತು 928 ಸ್ಥಾನಗಳಿರುವ 20 ಜಿಲ್ಲಾ ಪರಿಷತ್ತುಗಳನ್ನು ಹೊಂದಿದೆ. ಜುಲೈ 8 ರಂದು 61,000 ಬೂತ್‌ಗಳಲ್ಲಿ ಚುನಾವಣೆ ನಡೆದಿದ್ದು, 80.71 ರಷ್ಟು ಮತದಾನವಾಗಿದೆ. ಕನಿಷ್ಠ 21 ಜನರ ಸಾವಿಗೆ ಕಾರಣವಾದ ವ್ಯಾಪಕ ಹಿಂಸಾಚಾರದಿಂದ ಆಸ್ತಿಗೂ ಹಾನಿಯಾಗಿದೆ. ಮತಗಟ್ಟೆ ವಶಪಡಿಸಿಕೊಳ್ಳುವಿಕೆ, ಮತಪೆಟ್ಟಿಗೆ ಲೂಟಿ ಮತ್ತು ಮತಯಂತ್ರಗಳನ್ನು ನಾಶಪಡಿಸಿದ ಘಟನೆಗಳು ಹಲವಾರು ಜಿಲ್ಲೆಗಳಿಂದ ವರದಿಯಾಗಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:31 pm, Wed, 12 July 23

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!