Bengal panchayat election results: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: 14,972 ಸ್ಥಾನಗಳಲ್ಲಿ ಟಿಎಂಸಿ ಮುನ್ನಡೆ

22 ಜಿಲ್ಲೆಗಳಲ್ಲಿ ಸುಮಾರು 339 ಮತ ಎಣಿಕೆ ಕೇಂದ್ರಗಳಿವೆ. ಗರಿಷ್ಠ ಸಂಖ್ಯೆಯ ಎಣಿಕೆ ಕೇಂದ್ರಗಳು ಅಂದರೆ ದಕ್ಷಿಣ 24 ಪರಗಣದಲ್ಲಿ 28 ಮತ ಎಣಿಕೆ ಕೇಂದ್ರಗಳಿವೆ. ನಾಲ್ಕು ಕಾಲಿಂಪಾಂಗ್‌ನಲ್ಲಿದೆ. ಉತ್ತರದ ಕೆಲವು ಜಿಲ್ಲೆಗಳು ಸಹ ಪ್ರತಿಕೂಲ ಹವಾಮಾನವನ್ನು ಎದುರಿಸುತ್ತಿವೆ.

Bengal panchayat election results: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: 14,972 ಸ್ಥಾನಗಳಲ್ಲಿ ಟಿಎಂಸಿ ಮುನ್ನಡೆ
ಬಂಗಾಳ ಪಂಚಾಯತ್ ಚುನಾವಣೆ
Follow us
ರಶ್ಮಿ ಕಲ್ಲಕಟ್ಟ
|

Updated on:Jul 11, 2023 | 6:00 PM

ಕೋಲ್ಕತ್ತಾ: ರಾಜ್ಯ ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಯಲ್ಲಿ (Bengal panchayat election results) ಟಿಎಂಸಿ (TMC) 14,972 ಗ್ರಾಮ ಪಂಚಾಯತ್ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸಂಜೆ 4.30 ರ ಹೊತ್ತಿಗೆ ಸಿಕ್ಕಿದ ಮಾಹಿತಿ ಪ್ರಕಾರ 63,329 ಸ್ಥಾನಗಳ ಪೈಕಿ 3,421 ಸ್ಥಾನಗಳಲ್ಲಿ ಬಿಜೆಪಿ (BJP) ಮುನ್ನಡೆ ಸಾಧಿಸಿದೆ. ಅದೇ ವೇಳೆ ಸಿಪಿಐ(ಎಂ) 1,392 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 829 ಸ್ಥಾನಗಳಲ್ಲಿ ಮುನ್ನಡೆ ಇದೆ. ಹೊಸದಾಗಿ ರೂಪುಗೊಂಡ ಐಎಸ್‌ಎಫ್ ಸೇರಿದಂತೆ ಇತರ ಪಕ್ಷಗಳು 1,362 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಟಿಎಂಸಿ ಬಂಡುಕೋರರನ್ನು ಒಳಗೊಂಡಿರುವ ಪಕ್ಷೇತರರು 718 ಸ್ಥಾನಗಳನ್ನು ಗೆದ್ದು 216 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.  ಗ್ರಾಮ ಪಂಚಾಯಿತಿ ಸ್ಥಾನಗಳಲ್ಲದೆ 9,730 ಪಂಚಾಯಿತಿ ಸಮಿತಿ ಸ್ಥಾನಗಳು ಮತ್ತು 928 ಜಿಲ್ಲಾ ಪರಿಷತ್ ಸ್ಥಾನಗಳನ್ನು ಒಳಗೊಂಡಂತೆ ಸುಮಾರು 74,000 ಸ್ಥಾನಗಳಿಗೆ ನಡೆದ ಮೂರು ಹಂತದ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಶಾಂತಿಯುತವಾಗಿ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

22 ಜಿಲ್ಲೆಗಳಲ್ಲಿ ಸುಮಾರು 339 ಮತ ಎಣಿಕೆ ಕೇಂದ್ರಗಳಿವೆ. ಗರಿಷ್ಠ ಸಂಖ್ಯೆಯ ಎಣಿಕೆ ಕೇಂದ್ರಗಳು ಅಂದರೆ ದಕ್ಷಿಣ 24 ಪರಗಣದಲ್ಲಿ 28 ಮತ ಎಣಿಕೆ ಕೇಂದ್ರಗಳಿವೆ. ನಾಲ್ಕು ಕಾಲಿಂಪಾಂಗ್‌ನಲ್ಲಿದೆ. ಉತ್ತರದ ಕೆಲವು ಜಿಲ್ಲೆಗಳು ಸಹ ಪ್ರತಿಕೂಲ ಹವಾಮಾನವನ್ನು ಎದುರಿಸುತ್ತಿವೆ.

ಬೆಳಿಗ್ಗೆ 8 ಗಂಟೆಗೆ ಎಣಿಕೆ ಪ್ರಾರಂಭವಾಯಿತು ಮತ್ತು ಮುಂದಿನ ಎರಡು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಮತಪತ್ರಗಳನ್ನು ಎಣಿಕೆ ಮಾಡಲು ಮತ್ತು ಫಲಿತಾಂಶಗಳನ್ನು ಒಗ್ಗೂಡಿಸಲು ಸಮಯ ತೆಗೆದುಕೊಳ್ಳುತ್ತದೆ” ಎಂದು ಎಸ್‌ಇಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬಂಗಾಳ ಪಂಚಾಯತ್ ಚುನಾವಣೆ: 696 ಬೂತ್​ಗಳಲ್ಲಿ ಮರು ಮತದಾನ, ಕಲ್ಲು ತೂರಾಟ, ಟಿಎಂಸಿ ಕಾರ್ಯಕರ್ತನಿಗೆ ಥಳಿತ

ಡಾರ್ಜಿಲಿಂಗ್‌ನ 598 ಮತ್ತು ಕಾಲಿಂಪಾಂಗ್‌ನ 281 ಸ್ಥಾನಗಳಲ್ಲಿ, ಬಿಜಿಪಿಎಂ 21 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ ಒಂದರಲ್ಲಿ ಮುನ್ನಡೆ ಸಾಧಿಸಿದೆ. ಪಕ್ಷೇತರರು ನಾಲ್ಕರಲ್ಲಿ ಮುನ್ನಡೆ ಸಾಧಿಸಿದ್ದಾರೆ. ಎಲ್ಲಾ ಎಣಿಕೆ ಸ್ಥಳಗಳನ್ನು ಸಶಸ್ತ್ರ ರಾಜ್ಯ ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರ ಪಡೆಗಳು ನಿರ್ವಹಿಸುತ್ತಿದ್ದು, ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸಲು ಸ್ಥಳದ ಹೊರಗೆ CrPC ಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ. 22 ಜಿಲ್ಲೆಗಳಲ್ಲಿ ಒಟ್ಟು 767 ಸ್ಟ್ರಾಂಗ್ ರೂಂಗಳಿವೆ.

ಮತ ಎಣಿಕೆ ಸರಿಯಾಗಿ ನಡೆದಿದೆ ಎಂದು ಖಚಿತಪಡಿಸಿಕೊಳ್ಳಲು ವಿವಿಧ ಅಭ್ಯರ್ಥಿಗಳ ಬೆಂಬಲಿಗರು ವಿವಿಧ ಕೇಂದ್ರಗಳಲ್ಲಿ ಜಮಾಯಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:58 pm, Tue, 11 July 23

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ