AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಚುನಾವಣಾ ಸಂಬಂಧಿತ ಹಿಂಸಾಚಾರ, ಇಬ್ಬರು ಟಿಎಂಸಿ ಕಾರ್ಯಕರ್ತರ ಸಾವು, ಒಟ್ಟು ಮೃತರ ಸಂಖ್ಯೆ 20ಕ್ಕೆ ಏರಿಕೆ

ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯತ್ ಚುನಾವಣೆ(Panchayat Election) ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ತೃಣಮೂಲ ಕಾಂಗ್ರೆಸ್​ನ ಕಾರ್ಯಕರ್ತರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 20ಕ್ಕೇ ಏರಿಕೆಯಾಗಿದೆ.

West Bengal: ಚುನಾವಣಾ ಸಂಬಂಧಿತ ಹಿಂಸಾಚಾರ, ಇಬ್ಬರು ಟಿಎಂಸಿ ಕಾರ್ಯಕರ್ತರ ಸಾವು, ಒಟ್ಟು ಮೃತರ ಸಂಖ್ಯೆ 20ಕ್ಕೆ ಏರಿಕೆ
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರImage Credit source: India Today
ನಯನಾ ರಾಜೀವ್
|

Updated on: Jul 09, 2023 | 11:51 AM

Share

ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯತ್ ಚುನಾವಣೆ(Panchayat Election) ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ತೃಣಮೂಲ ಕಾಂಗ್ರೆಸ್​ನ ಕಾರ್ಯಕರ್ತರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 20ಕ್ಕೇ ಏರಿಕೆಯಾಗಿದೆ. ಶನಿವಾರ ಬೈಷ್ಣವ ನಗರದಲ್ಲಿ ಇಬ್ಬರು ಟಿಎಂಸಿ ಕಾರ್ಯಕರ್ತರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅವರನ್ನು ಮತಿಯುರ್ ರೆಹಮಾನ್ ಎಂದು ಗುರುತಿಸಲಾಗಿದೆ.

ಮತದಾನ ಕೇಂದ್ರದಲ್ಲಿ ಮತದಾನ ಮಾಡಲು ಬಂದಿದ್ದಾಗ ಕೆಲವರು ಅವನನ್ನು ಸುತ್ತುವರೆದು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಆಡಳಿತಾರೂಢ ಟಿಎಂಸಿ ಈ ಹತ್ಯೆಗೆ ವಿರೋಧ ಪಕ್ಷ ಕಾಂಗ್ರೆಸ್‌ ಕಾರಣ ಎಂದು ಆರೋಪಿಸಿದೆ. ಘರ್ಷಣೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಮೃತರಲ್ಲಿ ಟಿಎಂಸಿ ಕಾರ್ಯಕರ್ತ ಅಜಹರ್ ಲಷ್ಕರ್ ಕೂಡ ಸೇರಿದ್ದಾರೆ. ಬಸಂತಿಯಲ್ಲಿ ನಡೆದ ಘರ್ಷಣೆಯಲ್ಲಿ ಗಾಯಗೊಂಡರು ಮತ್ತು ನಿನ್ನೆ ತಡರಾತ್ರಿ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ಗಾಯಗೊಂಡಿದ್ದಾರೆ. ಕ್ಷಿಣ 24 ಪರಗಣದ ಬಸಂತಿಯಲ್ಲಿ ಟಿಎಂಸಿ ಮತ್ತು ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್‌ಎಸ್‌ಪಿ) ನಡುವೆ ಘರ್ಷಣೆ ನಡೆದಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಲಷ್ಕರ್ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು, ಮತ್ತೋರ್ವನಿಗೆ ಗಾಯ

ಶನಿವಾರ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಬಂಗಾಳದ ಗ್ರಾಮೀಣ ಚುನಾವಣೆಯಲ್ಲಿ ಹಿಂಸಾಚಾರ ಸಂಭವಿಸಿದೆ. ಅನೇಕ ಸ್ಥಳಗಳಲ್ಲಿ, ಮತಪೆಟ್ಟಿಗೆಗಳನ್ನು ಧ್ವಂಸಗೊಳಿಸಲಾಯಿತು ಮತ್ತು ಹಲವಾರು ಹಳ್ಳಿಗಳಲ್ಲಿ ಪ್ರತಿಸ್ಪರ್ಧಿಗಳ ಮೇಲೆ ಬಾಂಬ್ ಎಸೆಯಲಾಯಿತು.

ಕಳೆದ ತಿಂಗಳ ಆರಂಭದಲ್ಲಿ ಚುನಾವಣೆಗಳನ್ನು ಘೋಷಿಸಿದಾಗಿನಿಂದ ಇಲ್ಲಿಯವರೆಗೆ 30 ಮಂದಿ ಸಾವನ್ನಪ್ಪಿದ್ದಾರೆ, 2018ರ ಪಂಚಾಯತ್ ಚುನಾವಣೆ ಸಂದರ್ಭದಲ್ಲೂ ಇದೇ ರೀತಿ ರಕ್ತದೋಕುಳಿ ಹರಿದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ