Bengal Panchayat Poll Counting: ಮತ ಎಣಿಕೆ ಕೇಂದ್ರದ ಹೊರಗೆ ಬಾಂಬ್ ಸ್ಫೋಟ

|

Updated on: Jul 11, 2023 | 2:16 PM

ಹಿಂಸಾಚಾರದ ನಡುವೆ ಅಂತೂ ಚುನಾವಣೆ(Election) ಮುಗಿಯಿತಲ್ಲ ಇನ್ನು ಮತ ಎಣಿಕೆಯೊಂದಾದರೆ ಸಾಕಪ್ಪಾ ಎನ್ನುತ್ತಿರುವಾಗಲೇ ಪಶ್ಚಿಮ ಬಂಗಾಳ(West Bengal)ದಲ್ಲಿ ಮತಎಣಿಕೆ ಕೇಂದ್ರದ ಹೊರಗೆ ಬಾಂಬ್ ಸ್ಫೋಟಗೊಂಡಿದೆ.

Bengal Panchayat Poll Counting: ಮತ ಎಣಿಕೆ ಕೇಂದ್ರದ ಹೊರಗೆ ಬಾಂಬ್ ಸ್ಫೋಟ
ಬಾಂಬ್ ಸ್ಫೋಟ
Image Credit source: Jagaran.com
Follow us on

ಹಿಂಸಾಚಾರದ ನಡುವೆ ಅಂತೂ ಚುನಾವಣೆ(Election) ಮುಗಿಯಿತಲ್ಲ ಇನ್ನು ಮತ ಎಣಿಕೆಯೊಂದಾದರೆ ಸಾಕಪ್ಪಾ ಎನ್ನುತ್ತಿರುವಾಗಲೇ ಪಶ್ಚಿಮ ಬಂಗಾಳ(West Bengal)ದಲ್ಲಿ ಮತಎಣಿಕೆ ಕೇಂದ್ರದ ಹೊರಗೆ ಬಾಂಬ್ ಸ್ಫೋಟಗೊಂಡಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿರುವ ಡೈಮಂಡ್ ಹಾರ್ಬರ್ ಪಟ್ಟಣದಲ್ಲಿ ಪಂಚಾಯತ್ ಚುನಾವಣಾ ಮತ ಎಣಿಕೆ ಕೇಂದ್ರದ ಬಳಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಜನರು ಭಯದಿಂದ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಹಿಂಸಾಚಾರ ನಡೆದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಮತ ಎಣಿಕೆ ಕೇಂದ್ರದ ಹೊರಗೆ ದೇಶಬಾಂಬ್‌ ಎಸೆಯಲಾಗಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

8ರಂದು ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ನಡೆದಿತ್ತು, 22 ಜಿಲ್ಲೆಗಳ 73,887 ಸ್ಥಾನಗಳಿಗೆ ಪಂಚಾಯತ್ ಸಮಿತಿಗಳು ಮತ್ತು ಗ್ರಾಮ ಪಂಚಾಯಿತಿಗಳ ಸದಸ್ಯರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಸುಮಾರು 2 ಲಕ್ಷ ಮಂದಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದ್ದು, ಪ್ರಸ್ತುತ ಸ್ಥಳೀಯ ಚುನಾವಣೆಗಳು ಎಲ್ಲ ಪಕ್ಷಗಳಿಗೂ ನಿರ್ಣಾಯಕವೆನಿಸಿದೆ.

ಮತ್ತಷ್ಟು ಓದಿ: West Bengal Panchayat Election: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ; 18 ಸಾವು

ಆದರೆ ಅಂದು ಉದ್ವಿಗ್ನತೆ ಸೃಷ್ಟಿಯಾಗಿದ್ದರಿಂದಾಗಿ ಜುಲೈ 10 ರಂದು 696 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು.
ಳೀಯ ಸಂಸ್ಥೆ ಚುನಾವಣೆಯಾಗಿದ್ದರೂ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿತ್ತು. ಈ ಪರಿಸ್ಥಿತಿಯಲ್ಲಿ ಇಂದು ಬೆಳಗ್ಗೆ 8 ಗಂಟೆಯಿಂದ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕೇಂದ್ರ ಪಡೆ ಭದ್ರತೆಯಲ್ಲಿ ಮತ ಎಣಿಕೆ ನಡೆಯುತ್ತಿದೆ.

ಮತ ಎಣಿಕೆ ವೇಳೆ ಹಿಂಸಾಚಾರದಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯಪಾಲ ಆನಂದ ಬೋಸ್ ಕಠಿಣ ಎಚ್ಚರಿಕೆ ನೀಡಿದ್ದರು. ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ನಿಯಂತ್ರಣ ಕೊಠಡಿಗಳಲ್ಲಿ ಮತ ಎಣಿಕೆ ಮೇಲೆ ನಿಗಾ ಇಡಲಾಗಿದೆ.

ರೋಚಕತೆಯ ಉತ್ತುಂಗದ ನಡುವೆಯೇ ನಡೆಯುತ್ತಿರುವ ಬಹುತೇಕ ಸಮೀಕ್ಷೆಗಳಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ