West Bengal Elections 2021: ಮತದಾನ ಆರಂಭದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ 22 ಕಚ್ಚಾ ಬಾಂಬ್ ಪತ್ತೆ

ಚುನಾವಣೆಯ ಮೊದಲ ಹಂತದ ಬೆಳ್ಳಂಬೆಳಗ್ಗೆ ಅಪಾರ ಪ್ರಮಾಣದ ಕಚ್ಚಾ ಬಾಂಬ್​ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

West Bengal Elections 2021: ಮತದಾನ ಆರಂಭದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ 22 ಕಚ್ಚಾ ಬಾಂಬ್ ಪತ್ತೆ
ಮೊದಲ ಹಂತದ ಚುನಾವಣೆಯಲ್ಲಿ ತಾಪಮಾನ ಪರೀಕ್ಷೆ ಮಾಡಲಾಗುತ್ತಿದೆ.
Follow us
guruganesh bhat
|

Updated on: Mar 27, 2021 | 9:40 AM

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ಆರಂಭವಾಗಿದೆ. ಈ ಬೆನ್ನಲ್ಲೇ ಕೊಲ್ಕತ್ತಾ ಪೊಲೀಸರು 22 ಕಚ್ಚಾ ಬಾಂಬ್​ಗಳನ್ನು ವಶಪಸಿಕೊಂಡಿದ್ದಾರೆ. ಚುನಾವಣೆಯ ಮೊದಲ ಹಂತದ ಬೆಳ್ಳಂಬೆಳಗ್ಗೆ ಅಪಾರ ಪ್ರಮಾಣದ ಕಚ್ಚಾ ಬಾಂಬ್​ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಪಶ್ಚಿಮಬಂಗಾಳದ 30 ವಿಧಾನಸಭಾ ಕ್ಷೇತ್ರಗಳ 191 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ಬರೆಯಲಿದ್ದಾರೆ. ಬಂಕುರಾ, ಪುರುಲಿಯಾ, ಜಾರ್ಗ್ರಾಮ್, ಪೂರ್ವ ಮಿಡ್ನಾಪುರ ಮತ್ತು ಪಶ್ಚಿಮ ಮೆಡ್ನಾಪುರ ಕ್ಷೇತ್ರಗಳು ಇಂದು ಮತದಾನ ನಡೆಯುವ ಮಹತ್ವದ ಕ್ಷೇತ್ರಗಳಾಗಿವೆ.‌ ಇಂದು ನಡೆಯಲಿರುವ ಕ್ಷೇತ್ರಗಳಲ್ಲಿ 2016 ರಲ್ಲಿ ಟಿಎಂಸಿ 30 ಸ್ಥಾನಗಳಲ್ಲಿ 27 ಸ್ಥಾನಗಳನ್ನು ಗೆದ್ದಿತ್ತು ಕಾಂಗ್ರೆಸ್ ಕೇವಲ ಎರಡು ಸ್ಥಾನಗಳಲ್ಲಿ ಗೆದ್ದಿತ್ತು. ಇಂದು ಚುನಾವಣೆ ನಡೆಯುವ 30 ಕ್ಷೇತ್ರಗಳಲ್ಲಿ ಬಿಜೆಪಿ 29 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಬಿಜೆಪಿ ಮಿತ್ರಪಕ್ಷ ಎಜೆಎಸ್‌ಯು ಒಂದು ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಿದೆ. ಟಿಎಂಸಿ ಕೂಡ 29 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಟಿಎಂಸಿ ಬೆಂಬಲ ಘೋಷಿಸಿದೆ. ಬೆಳಗ್ಗೆ 8ರಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6ಕ್ಕೆ ಮುಕ್ತಾಯವಾಗಲಿದೆ. ( West Bengal phase 1 elections started early morning 22 crude bombs recovered from Kolkata)

ಪಶ್ಚಿಮ ಬಂಗಾಳದಲ್ಲಿ ಬಂಗಾಳದ ಕುವರಿ ಮಮತಾ ಬ್ಯಾನರ್ಜಿ ಅವರಿಗೆ ಖಂಡಿತವಾಗಿಯೂ ಜಯ ದೊರಕಲಿದೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಓ‘ಬ್ರೆಯಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಮೊದಲ ಹಂತದ ಮತದಾನ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್