AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದ ಬಾಂಗ್ಲಾ ಮಹಿಳೆ, ನಿಲ್ದಾಣದಲ್ಲಿ ಗಂಟೆಗಟ್ಟಲೆ ನಿಂತ ರೈಲು

ಬಾಂಗ್ಲಾದೇಶದ ಮಹಿಳೆಯೊಬ್ಬರು ರೈಲಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ನಿಲ್ದಾಣದ ಬಳಿ ನಿಲ್ಲಿಸಲಾಗಿದ್ದು, ಮಹಿಳೆಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

West Bengal: ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದ ಬಾಂಗ್ಲಾ ಮಹಿಳೆ, ನಿಲ್ದಾಣದಲ್ಲಿ ಗಂಟೆಗಟ್ಟಲೆ ನಿಂತ ರೈಲು
ಮಗು
ನಯನಾ ರಾಜೀವ್
|

Updated on: Jul 24, 2023 | 11:07 AM

Share

ಬಾಂಗ್ಲಾದೇಶದ ಮಹಿಳೆಯೊಬ್ಬರು ರೈಲಿನಲ್ಲೇ ಮಗು(Bay)ವಿಗೆ ಜನ್ಮ ನೀಡಿರುವ ಘಟನೆ ಪಶ್ಚಿಮ ಬಂಗಾಳ(West Bengal)ದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ನಿಲ್ದಾಣದ ಬಳಿ ನಿಲ್ಲಿಸಲಾಗಿದ್ದು, ಮಹಿಳೆಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ನಿರ್ದೇಶನದ ಮೇರೆಗೆ ಮುಂಬೈ-ಹೌರಾ  ರೈಲನ್ನು  ಆಗ್ನೇಯ ರೈಲ್ವೆಯ ಬಗ್ನಾನ್ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ರೈಲ್ವೆ ಅಧಿಕಾರಿಗಳು ನಿಲ್ದಾಣದ ಬಳಿ ಆ್ಯಂಬುಲೆನ್ಸ್​ ವ್ಯವಸ್ಥೆ ಮಾಡಿದ್ದರು, ರೈಲು ಬಗ್ನಾನ್ ತಲುಪಿದ ತಕ್ಷಣ, ಮಹಿಳೆ ಮತ್ತು ನವಜಾತ ಶಿಶುವನ್ನು ಸ್ಥಳೀಯ ನರ್ಸಿಂಗ್ ಹೋಮ್‌ಗೆ ಕರೆದೊಯ್ಯಲಾಯಿತು ಎಂದು ಆರ್‌ಪಿಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಬಾಂಗ್ಲಾದೇಶದ ಸತ್ಖಿರಾ ಜಿಲ್ಲೆಯವರಾದ ಮಂಜಿಲಾ ಖಾತುನ್ ಮತ್ತು ಅವರ ಪತಿ ರೆಜೌಲ್ ಗಾಜಿ ವೈದ್ಯಕೀಯ ಉದ್ದೇಶಗಳಿಗಾಗಿ ಮುಂಬೈಗೆ ಹೋಗಿದ್ದರು ಮತ್ತು ಅಲ್ಲಿಂದ ಬರುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ ಜಿಲ್ಲೆಯ ಖರಗ್‌ಪುರ ನಿಲ್ದಾಣದಿಂದ ರೈಲು ಹೊರಟ ಬಳಿಕ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.

ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿರುವುದು ರೈಲಿನಲ್ಲಿದ್ದ ಪ್ರಯಾಣಿಕರಿಂದ ತಿಳಿದ ಟಿಟಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಮಹಿಳೆ ಮತ್ತು ಆಕೆಯ ಮಗುವಿನ ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ, ಮಗುವನ್ನು ಉತ್ತಮ ಚಿಕಿತ್ಸೆಗಾಗಿ ಕೋಲ್ಕತ್ತಾದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ನರ್ಸಿಂಗ್ ಹೋಮ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲನ್ನು ನಿಲ್ದಾಣದಲ್ಲಿ ನಿಲ್ಲಿಸುವ ನಿರ್ಧಾರವನ್ನು ಮಾನವೀಯ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಬಗ್ನಾನ್ ನಿಲ್ದಾಣದ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!