Train Accident: ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, 8 ಮಂದಿ ಸಾವು, 30 ಜನರಿಗೆ ಗಾಯ

ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

Train Accident: ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, 8 ಮಂದಿ ಸಾವು, 30 ಜನರಿಗೆ ಗಾಯ
ರೈಲು ಅಪಘಾತImage Credit source: Timesnow
Follow us
ನಯನಾ ರಾಜೀವ್
|

Updated on:Jun 17, 2024 | 12:54 PM

ಪಶ್ಚಿಮ ಬಂಗಾಳ(West Bengal)ದಲ್ಲಿ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಂಟು ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು.

ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ರಕ್ಷಣಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ಬರೆದಿದ್ದಾರೆ.

ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಕಾರ್ಯಾಚರಣೆಯ ಮೇಲ್ವಿಚಾರಣೆಗೆ ಸ್ಥಳಕ್ಕೆ ಧಾವಿಸುತ್ತಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟಿರುವವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತನಾಡಿದ್ದೇವೆ, ರಕ್ಷಣಾಕಾರ್ಯ ಮುಂದುವರೆದಿದೆ ಎಂದು ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ, ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ನೆರವು ನೀಡುವುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:10 am, Mon, 17 June 24

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ