ಪಶ್ಚಿಮ ಬಂಗಾಳ(West Bengal)ದಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಂಟು ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು.
ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ರಕ್ಷಣಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ಬರೆದಿದ್ದಾರೆ.
ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಕಾರ್ಯಾಚರಣೆಯ ಮೇಲ್ವಿಚಾರಣೆಗೆ ಸ್ಥಳಕ್ಕೆ ಧಾವಿಸುತ್ತಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟಿರುವವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತನಾಡಿದ್ದೇವೆ, ರಕ್ಷಣಾಕಾರ್ಯ ಮುಂದುವರೆದಿದೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
PM @narendramodi has announced that an ex-gratia of Rs. 2 lakh from PMNRF would be given to the next of kin of each deceased in the railway mishap in West Bengal. The injured would be given Rs. 50,000. https://t.co/2zsG6XJsGx
— PMO India (@PMOIndia) June 17, 2024
ಅಷ್ಟೇ ಅಲ್ಲದೆ, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ, ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ನೆರವು ನೀಡುವುದಾಗಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:10 am, Mon, 17 June 24