AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಕತ್ತಾದಲ್ಲಿ ಮೆಸ್ಸಿ ಕಾರ್ಯಕ್ರಮದಲ್ಲಿ ನಡೆದ ಗಲಭೆಗೆ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಮೆಸ್ಸಿಯ ಕೊಲ್ಕತ್ತಾ ಕಾರ್ಯಕ್ರಮದಲ್ಲಿ ನಡೆದ ಅವ್ಯವಸ್ಥೆಗೆ ಸಂಬಂಧಿಸಿದಂತೆ ನೈತಿಕ ಜವಾಬ್ದಾರಿ ತೆಗೆದುಕೊಂಡು ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವೀಕರಿಸಿದ್ದಾರೆ. ಹೈದರಾಬಾದ್, ಮುಂಬೈ ಮತ್ತು ದೆಹಲಿಗೆ ಭೇಟಿ ನೀಡಿದ ನಂತರ ಮೆಸ್ಸಿ ತಮ್ಮ ಪ್ರವಾಸವನ್ನು ಕೊನೆಗೊಳಿಸಿದ್ದರು.

ಕೊಲ್ಕತ್ತಾದಲ್ಲಿ ಮೆಸ್ಸಿ ಕಾರ್ಯಕ್ರಮದಲ್ಲಿ ನಡೆದ ಗಲಭೆಗೆ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ
Minister Aroop Biswas With Messi
ಸುಷ್ಮಾ ಚಕ್ರೆ
|

Updated on: Dec 16, 2025 | 5:02 PM

Share

ಕೊಲ್ಕತ್ತಾ, ಡಿಸೆಂಬರ್ 16: ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದ ಫುಟ್​ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ (Messi Kolkata event) ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಡೆದ ಅವ್ಯವಸ್ಥೆಗೆ ಸಂಬಂಧಿಸಿದಂತೆ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರ ರಾಜೀನಾಮೆಯನ್ನು ಸಿಎಂ ಮಮತಾ ಬ್ಯಾನರ್ಜಿ ಅಂಗೀಕರಿಸಿದ್ದಾರೆ. ಲಿಯೋನೆಲ್ ಮೆಸ್ಸಿಯ GOAT ಇಂಡಿಯಾ ಪ್ರವಾಸದ ಸಂದರ್ಭದಲ್ಲಿ ಕೊಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಗದ್ದಲ ಭುಗಿಲೆದ್ದ ನಂತರ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕೊಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಲಿಯೋನೆಲ್ ಮೆಸ್ಸಿ ಅವರ GOAT ಟೂರ್ ಕಾರ್ಯಕ್ರಮದ ಸಂದರ್ಭದಲ್ಲಿ ನಡೆದ ಅವ್ಯವಸ್ಥೆಯ ಘಟನೆಗಳ ತನಿಖೆಗೆ ಸರ್ಕಾರ ಆದೇಶಿಸಿದ ನಂತರ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಇಂದು ರಾಜೀನಾಮೆ ನೀಡಿದ್ದಾರೆ. ಈ ಅವ್ಯವಸ್ಥೆಗೆ ಸಂಬಂಧಿಸಿದಂತೆ ಟೀಕೆಗಳನ್ನು ಎದುರಿಸುತ್ತಿರುವ ಸಚಿವ ಬಿಸ್ವಾಸ್ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬರೆದ ಪತ್ರದಲ್ಲಿ ಈ ಘಟನೆಯ ಬಗ್ಗೆ “ಮುಕ್ತ ಮತ್ತು ನ್ಯಾಯಯುತ ತನಿಖೆ”ಯನ್ನು ನಡೆಸಲು ಅನುಕೂಲವಾಗಲಿ ಎಂಬ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ಅವರ ರಾಜೀನಾಮೆಯನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಂಗೀಕರಿಸಿದ್ದಾರೆ.

ಇದನ್ನೂ ಓದಿ: ಮೆಸ್ಸಿಯ ಕಾರ್ಯಕ್ರಮದಲ್ಲಿ ನಡೆದ ಗಲಾಟೆಗೆ ಸಿಎಂ ಮಮತಾ ಬ್ಯಾನರ್ಜಿ ಕ್ಷಮೆ ಯಾಚನೆ

ಮೆಸ್ಸಿಯನ್ನು ಕೊಲ್ಕತ್ತಾದಲ್ಲಿ ರಾಜಕಾರಣಿಗಳು ಮತ್ತು ವಿಐಪಿಗಳು ಸುತ್ತುವರೆದಿದ್ದರು. ಇದರಿಂದಾಗಿ ಒಂದು ಟಿಕೆಟ್​​ಗೆ 5-10 ಸಾವಿರ ರೂ. ಕೊಟ್ಟರೂ ಅಭಿಮಾನಿಗಳು ಮೆಸ್ಸಿಯನ್ನು ನೋಡಲು ಸಾಧ್ಯವಾಗಲಿಲ್ಲ. ಇದರ ಪರಿಣಾಮವಾಗಿ ಅಭಿಮಾನಿಗಳು ಕೋಪಗೊಂಡು ಆ ಸ್ಥಳದಲ್ಲಿ ಗಲಾಟೆಯೆಬ್ಬಿಸಿದರು. ಬಾಟಲಿ, ಕುರ್ಚಿಗಳನ್ನು ಕ್ರೀಡಾಂಗಣದತ್ತ ಎಸೆದರು. ಇದರಿಂದ ಮೆಸ್ಸಿ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಕೊಲ್ಕತ್ತಾವನ್ನು ಬಿಟ್ಟು ಹೊರಟರು.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಎಸ್​ಐಆರ್​ ಕರಡಿನಲ್ಲಿ 58 ಲಕ್ಷ ಹೆಸರುಗಳು ಡಿಲೀಟ್

ಈ ಅವ್ಯವಸ್ಥೆಯ ನಂತರ ವಿರೋಧ ಪಕ್ಷಗಳು ಪಶ್ಚಿಮ ಬಂಗಾಳ ಸರ್ಕಾರವನ್ನು ಗುರಿಯಾಗಿಸಿಕೊಂಡರು ವಾಗ್ದಾಳಿ ನಡೆಸಿದ್ದವು. ಹೀಗಾಗಿ, ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪತ್ರ ಬರೆದು ರಾಜೀನಾಮೆ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಆ ರಾಜೀನಾಮೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವೀಕರಿಸಿದ್ದಾರೆ.

ಮೆಸ್ಸಿಯ ಕಾರ್ಯಕ್ರಮದಲ್ಲಿ ನಡೆದ ಅವ್ಯವಸ್ಥೆಯ ನಂತರ, ಪಶ್ಚಿಮ ಬಂಗಾಳ ಸರ್ಕಾರವು ಅನೇಕ ಕಠಿಣ ಕ್ರಮಗಳನ್ನು ತೆಗೆದುಕೊಂಡಿತ್ತು. ಕಾರ್ಯಕ್ರಮದ ಪ್ರಮುಖ ಆಯೋಜಕರಾದ ಸತಾದ್ರು ದತ್ತಾ ಅವರನ್ನು ಕೂಡ ಅಧಿಕಾರಿಗಳು ಬಂಧಿಸಿದರು. ಈ ಘಟನೆಯಿಂದಾಗಿ, ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕುಮಾರ್ ಅವರಿಗೂ ಸರ್ಕಾರವು ಶೋಕಾಸ್ ನೋಟಿಸ್ ನೀಡಿದೆ. ಇದರ ಜೊತೆಗೆ, ಕರ್ತವ್ಯ ನಿರ್ಲಕ್ಷ್ಯಕ್ಕಾಗಿ ಪೊಲೀಸ್ ಉಪ ಆಯುಕ್ತ ಅನೀಶ್ ಸರ್ಕಾರ್ (ಐಪಿಎಸ್) ವಿರುದ್ಧ ಇಲಾಖಾ ಕ್ರಮಗಳು ಸಹ ಪ್ರಾರಂಭವಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ