AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೂ ಮತದಾನ; ಚುನಾವಣಾ ಆಯುಕ್ತ ಘೋಷಣೆ

2026, April 9-29th polling in five states and union territory: ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಮ್ ರಾಜ್ಯಗಳು ಹಾಗೂ ಪುದುಚೆರಿ ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಅಸ್ಸಾಮ್, ಕೇರಳ, ಪುದುಚೆರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ.

ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೂ ಮತದಾನ; ಚುನಾವಣಾ ಆಯುಕ್ತ ಘೋಷಣೆ
ಗ್ಯಾನೇಶ್ ಕುಮಾರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 15, 2026 | 5:28 PM

Share

ನವದೆಹಲಿ, ಮಾರ್ಚ್ 15: ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣಾ ದಿನಾಂಕಗಳನ್ನು (Eection Dates) ಪ್ರಕಟಿಸಲಾಗಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಮ್ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಿಂದ 29ರವರೆಗೂ ಮತದಾನ ನಡೆಯಲಿದೆ. ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಉಳಿದ ನಾಲ್ಕು ಕಡೆ ಒಂದೇ ಹಂತದಲ್ಲಿ ಮತದಾನವಾಗಲಿದೆ. ಚುನಾವಣೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ (Gyanesh Kumar) ಅವರು ಪತ್ರಿಕಾಗೋಷ್ಠಿಯಲ್ಲಿ ದಿನಾಂಕಗಳನ್ನು ಪ್ರಕಟಿಸಿದರು. ಇದರೊಂದಿಗೆ ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬರುತ್ತದೆ.

ಅಸ್ಸಾಮ್, ಕೇರಳ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ತಮಿಳುನಾಡಿನಲ್ಲೂ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಬಹಳಷ್ಟು ಜಾಗಗಳು ಹಿಂಸಾಚಾರಗಳಿಗೆ ಸೂಕ್ಷ್ಮವಾಗಿರುವುದರಿಂದ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತದೆ. ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ. ಈ ಮೇಲಿನ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಯಲ್ಲಿ ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ತಿರುಪತಿಯಲ್ಲಿ ಬೃಹತ್ ಹೈಟೆಕ್ ಅನ್ನಪ್ರಸಾದ ಕೇಂದ್ರ ನಿರ್ಮಾಣ; ರಿಲಯನ್ಸ್ ಸಂಸ್ಥೆಯಿಂದ 120 ಕೋಟಿ ರೂ. ದೇಣಿಗೆ

ಐದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 824 ಕ್ಷೇತ್ರಗಳಲ್ಲಿ 17.4 ಕೋಟಿ ಮತದಾರರಿದ್ದಾರೆ. 2.19 ಲಕ್ಷ ಪೋಲಿಂಗ್ ಸ್ಟೇಷನ್​ಗಳಿವೆ. 25 ಲಕ್ಷ ಮತದಾನ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದಾರೆ.

ಚುನಾವಣೆ ನಡೆಯುವ ರಾಜ್ಯಗಳು ಮತ್ತು ಕ್ಷೇತ್ರಗಳ ಸಂಖ್ಯೆ

  1. ಪಶ್ಚಿಮ ಬಂಗಾಳ: 294 ಕ್ಷೇತ್ರ – ಮತದಾನ ಏಪ್ರಿಲ್ 23 ಮತ್ತು 29
  2. ತಮಿಳುನಾಡು: 234 ಕ್ಷೇತ್ರ – ಮತದಾನ ಏಪ್ರಿಲ್ 23
  3. ಅಸ್ಸಾಂ: 126 ಕ್ಷೇತ್ರ – ಮತದಾನ ಏಪ್ರಿಲ್ 9
  4. ಕೇರಳ: 140 ಕ್ಷೇತ್ರ – ಮತದಾನ ಏಪ್ರಿಲ್ 9
  5. ಪುದುಚೆರಿ: 30 ಕ್ಷೇತ್ರ – ಮತದಾನ ಏಪ್ರಿಲ್ 9

ಇದನ್ನೂ ಓದಿ: ನೇಪಾಳ: ಇಳಿಜಾರಿನ ಪ್ರದೇಶಕ್ಕೆ ಉರುಳಿದ ಬಸ್, ಏಳು ಮಂದಿ ಭಾರತೀಯರು ಸಾವು

ಆರು ರಾಜ್ಯಗಳಲ್ಲಿ ಉಪಚುನಾವಣೆ

ಕರ್ನಾಟಕ ಸೇರಿ ಆರು ರಾಜ್ಯಗಳಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳೂ ನಡೆಯಲಿವೆ. ಕರ್ನಾಟಕ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಗೋವಾ ರಾಜ್ಯಗಳಲ್ಲಿನ ಐದು ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪಚುನಾವಣೆಯಾಗುತ್ತದೆ. ಉಳಿದ ರಾಜ್ಯಗಳಲ್ಲಿನ ಉಪಚುನಾವಣೆ ಏಪ್ರಿಲ್ 23ರಂದು ನಡೆಯಲಿದೆ.

ಮೇ 4ರಂದು ಎಲ್ಲಾ ವಿಧಾನಸಭಾ ಚುನಾವಣೆಗಳು ಮತ್ತು ಉಪಚುನಾವಣೆಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಅಂದೇ ಬಹುತೇಕ ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Sun, 15 March 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ