Breaking News: ಶಿಕ್ಷಕರ ನೇಮಕಾತಿ ಹಗರಣ; ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಬಂಧನ

ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿಯವರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ

Breaking News: ಶಿಕ್ಷಕರ ನೇಮಕಾತಿ ಹಗರಣ; ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಬಂಧನ
Partha Chatterjee Image Credit source: NDTV
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 23, 2022 | 10:39 AM

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ (Trinamool Congress – TMC) ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯವು (Enforcement Directorate – ED) ಬಂಧಿಸಿದೆ. ಇದಕ್ಕೂ ಮೊದಲು ಅವರನ್ನು ಇಡಿ ಅಧಿಕಾರಿಗಳು ಸುಮಾರು 26 ಗಂಟೆಗಳ ವಿಚಾರಣೆಗೆ ಒಳಪಡಿಸಿದ್ದರು. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ವೇಳೆ ನಡೆದಿದ್ದ ಹಗರಣದಲ್ಲಿ ಪಾರ್ಥ ಚಟರ್ಜಿ ಅವರ ಹೆಸರು ಕೇಳಿಬಂದಿತ್ತು.

ಪ್ರಸ್ತುತ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯದ ಕಚೇರಿಗೆ ಕೊಂಡೊಯ್ಯಲಾಗಿದೆ. ಅವರನ್ನು ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಚಟರ್ಜಿ ಅವರನ್ನು ಅವರ ಮನೆಯಲ್ಲಿಯೇ ನಿನ್ನೆ ಬೆಳಿಗ್ಗೆ 8 ಗಂಟೆಯಿಂದ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು. ದಕ್ಷಿಣ ಕೊಲ್ಕತ್ತಾದಲ್ಲಿರುವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರಿಗೆ ಸೇರಿದ ಕಟ್ಟಡದಲ್ಲಿ ಇಡಿ ಅಧಿಕಾರಿಗಳಿಗೆ ₹ 20 ಕೋಟಿ ನಗದು ಸಿಕ್ಕಿದೆ. ಈ ಹಣವನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಮುಟ್ಟುಗೋಲು ಹಾಕಿಕೊಂಡಿರುವ ಹಣವು ಹಗರಣಕ್ಕೆ ಸಂಬಂಧಿಸಿದ್ದೇ ಆಗಿದೆ ಎಂದು ಇಡಿ ಶಂಕೆ ವ್ಯಕ್ತಪಡಿಸಿದೆ. ಹಣವನ್ನು ಎಣಿಸಲು ಬ್ಯಾಂಕ್​ ನೌಕರರ ನೆರವನ್ನು ಇಡಿ ಪಡೆದುಕೊಳ್ಳುತ್ತಿದೆ. ಅರ್ಪಿತಾ ಮುಖರ್ಜಿ ಅವರ ಮನೆಯ ಆವರಣದಲ್ಲಿ 20ಕ್ಕೂ ಹೆಚ್ಚು ಮೊಬೈಲ್ ಫೋನ್​ಗಳು ಸಿಕ್ಕಿದ್ದವು. ಇಷ್ಟೊಂದು ಮೊಬೈಲ್ ಫೋನ್ ಏಕೆ ಹೊಂದಿದ್ದರು? ಯಾವ ಉದ್ದೇಶಕ್ಕೆ ಬಳಸುತ್ತಿದ್ದರು ಎನ್ನುವ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ಮತ್ತು ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ, ಮಂಡಳಿಯ ಕಾರ್ಯದರ್ಶಿ ರತ್ನಾ ಚಕ್ರವರ್ತಿ ಬಾಗ್​ಚಿ, ಶಾಲಾ ಸೇವಾ ಆಯೋಗದ ಮಾಜಿ ಸಲಹೆಗಾರ ಎಸ್​.ಪಿ.ಸಿನ್ಹಾ ಮತ್ತು ಪಶ್ಚಿಮ ಬಂಗಾಳ ಪ್ರೌಢಶಾಲಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಕಲ್ಯಾಣ್​ಮಯಿ ಗಂಗೂಲಿ ಅವರಿಗೆ ಸೇರಿದ ವಿವಿಧ ಮನೆ ಮತ್ತು ಆಸ್ತಿಗಳ ಮೇಲೆಯೂ ಇಡಿ ದಾಳಿ ನಡೆದಿದೆ.

Published On - 10:17 am, Sat, 23 July 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ