AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kuntal Ghsoh Arrest: ಶಿಕ್ಷಕರ ನೇಮಕಾತಿ ಹಗರಣ; ಟಿಎಂಸಿ ನಾಯಕ ಕುಂತಲ್ ಘೋಷ್ ಬಂಧಿಸಿ ಇ.ಡಿ

ಚಿನಾರ್ ಪಾರ್ಕ್‌ನಲ್ಲಿರುವ ಕುಂತಲ್ ಘೋಷ್ ಅವರ ಐಷಾರಾಮಿ ಫ್ಲ್ಯಾಟ್​​ಗೆ ಶುಕ್ರವಾರವೇ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದರು. ಕುಂತಲ್ ಅವರನ್ನು ಸುದೀರ್ಘ ವಿಚಾರಣೆಗೂ ಒಳಪಡಿಸಿದ್ದರು.

Kuntal Ghsoh Arrest: ಶಿಕ್ಷಕರ ನೇಮಕಾತಿ ಹಗರಣ; ಟಿಎಂಸಿ ನಾಯಕ ಕುಂತಲ್ ಘೋಷ್ ಬಂಧಿಸಿ ಇ.ಡಿ
ಕುಂತಲ್ ಘೋಷ್
ಗಣಪತಿ ಶರ್ಮಾ
|

Updated on:Jan 21, 2023 | 1:21 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳ (West Bengal) ಶಿಕ್ಷಕರ ನೇಮಕಾತಿ ಹಗರಣಕ್ಕೆ (Teachers’ Tecruitment Scam) ಸಂಬಂಧಿಸಿ ತೃಣಮೂಲ ಕಾಂಗ್ರೆಸ್ (TMC) ಯುವ ನಾಯಕ ಕುಂತಲ್ ಘೋಷ್ (Kuntal Ghsoh) ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ಬೆಳಿಗ್ಗೆ ಬಂಧಿಸಿದೆ. ಚಿನಾರ್ ಪಾರ್ಕ್‌ನಲ್ಲಿರುವ ಕುಂತಲ್ ಘೋಷ್ ಅವರ ಐಷಾರಾಮಿ ಫ್ಲ್ಯಾಟ್​​ಗೆ ಶುಕ್ರವಾರವೇ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದರು. ಕುಂತಲ್ ಅವರನ್ನು ಸುದೀರ್ಘ ವಿಚಾರಣೆಗೂ ಒಳಪಡಿಸಿದ್ದರು. ವಿಚಾರಣೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳು ಹಲವು ದಾಖಲೆಗಳನ್ನೂ ವಶಪಡಿಸಿದ್ದಾರೆ. ಆದರೆ, ಯಾವುದೇ ಹಣ ಸಿಕ್ಕಿಲ್ಲ ಎಂದು ಇ.ಡಿ ಮೂಲಗಳು ತಿಳಿಸಿವೆ.

ಕುಂತಲ್ ಘೋಷ್ ಅವರು ಬಳಗಢ ಬ್ಲಾಕ್‌ನ ಶ್ರೀಪುರ ಬಳಗಾರ ಪಂಚಾಯತ್‌ನ ಧವಾಪರ ನಿವಾಸಿಯಾಗಿದ್ದಾರೆ. 2016ರಲ್ಲಿ ರಾಜಕೀಯ ಆರಂಭಿಸಿದ ಅವರು, ಕ್ರಮೇಣ ರಾಜಕೀಯದಲ್ಲಿ ಔನ್ನತ್ಯಕ್ಕೇರಿದರು. ರಾಜಕೀಯದ ಹೊರತಾಗಿ ಎನ್‌ಜಿಒ ಒಂದನ್ನೂ ಅವರು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

2014ರಿಂದ 2021ರ ಅವಧಿಯಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿ ಸಂದರ್ಭ ಅಭ್ಯರ್ಥಿಗಳಿಂದ ಟಿಎಂಸಿ ನಾಯಕರು ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಈ ಕುರಿತು ಸಿಬಿಐ ಹಾಗೂ ಇ.ಡಿ ತನಿಖೆ ನಡೆಸುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು ಈ ಹಿಂದೆಯೇ ಇ.ಡಿ ಬಂಧಿಸಿದ್ದು, ಅಪಾರ ಪ್ರಮಾಣದ ನಗದು ವಶಪಡಿಸಿಕೊಂಡಿತ್ತು.

ಇದನ್ನೂ ಓದಿ: Big News: ಶಿಕ್ಷಕರ ನೇಮಕಾತಿ ಹಗರಣ: ಇಡಿ ಅಧಿಕಾರಿಗಳಿಂದ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಬಂಧನ

ಹಲವೆಡೆ ದಾಳಿ ನಡೆಸಿದ್ದ ಇ.ಡಿ

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಳಿಸಿರುವ ಇ.ಡಿ ಶುಕ್ರವಾರ ಪಶ್ಚಿಮ ಬಂಗಾಳದ ಹಲವೆಡೆ ದಾಳಿ ನಡೆಸಿತ್ತು. ಕುಂತಲ್ ಘೋಷ್ ಫ್ಲ್ಯಾಟ್ ಮಾತ್ರವಲ್ಲದೆ ಇನ್ನೂ ಕೆಲವು ನಾಯಕರ ನಿವಾಸಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿತ್ತು. ಟಿಎಂಸಿ ನಾಯಕ ಶಂತನು ಬ್ಯಾನರ್ಜಿ ಅವರ ಹೂಗ್ಲಿಯ ಬಲಗಢ್‌ನಲ್ಲಿರುವ ಮನೆ ಮೇಲೂ ಇ.ಡಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ. ಸುಮಾರು 12 ಗಂಟೆಗಳ ಕಾಲ ಶೋಧ ನಡೆಸಿದ್ದರು. ಶಿಕ್ಷಕರ ನೇಮಕಾತಿ ಅವ್ಯವಹಾರ ಪ್ರಕರಣದಲ್ಲಿ ಶಂತನು ಹೆಸರೂ ಕೇಳಿ ಬಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:17 am, Sat, 21 January 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ