ಪಶ್ಚಿಮ ಬಂಗಾಳ: ಬೃಹತ್ ಚಿಮಣಿ ಕುಸಿದು ಮೂವರು ಸಾವು, 30ಕ್ಕೂ ಅಧಿಕ ಮಂದಿಗೆ ಗಾಯ

ಬೃಹತ್ ಚಿಮಣಿ(Chimney)ಯ ಒಂದು ಪಾರ್ಶ್ವದ ಇಟ್ಟಿಗೆಗಳು ಕುಸಿದುಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಘಟನೆಯಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ಪ್ರದೇಶದ ಧಲ್ತಿತಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಒಬ್ಬರು ಸಾವನ್ನಪ್ಪಿದ್ದಾರೆ, ಇಬ್ಬರ ದೇಹ ಅವಶೇಷಗಳಡಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚಿಮಣಿ-ಸಾಂದರ್ಭಿಕ ಚಿತ್ರImage Credit source: News 9
Follow us
ನಯನಾ ರಾಜೀವ್
|

Updated on: Dec 14, 2023 | 10:22 AM

ಬೃಹತ್ ಚಿಮಣಿ(Chimney)ಯ ಒಂದು ಪಾರ್ಶ್ವದ ಇಟ್ಟಿಗೆಗಳು ಕುಸಿದುಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಘಟನೆಯಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ಪ್ರದೇಶದ ಧಲ್ತಿತಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಒಬ್ಬರು ಸಾವನ್ನಪ್ಪಿದ್ದಾರೆ, ಇಬ್ಬರ ದೇಹ ಅವಶೇಷಗಳಡಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿ ಪ್ರಕಾರ, ಸುಮಾರು 20 ಜನರು ಬಸಿರ್ಹತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಗಾಯಾಳುಗಳನ್ನು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮೃತರ ಗುರುತು ಪತ್ತೆ ಮೃತಪಟ್ಟವರಲ್ಲಿ ಜೇತುರಾಮ್ ಮತ್ತು ರಾಕೇಶ್ ಕುಮಾರ್ ಉತ್ತರ ಪ್ರದೇಶದ ಫೈಜಾಬಾದ್ ಮೂಲದವರಾಗಿದ್ದಾರೆ. ಪಿಟಿಐ ವರದಿ ಮಾಡಿದಂತೆ ಮೂರನೇ ಮೃತ ಹಫೀಜೆಲ್ ಮೊಂಡಲ್ ಸ್ಥಳೀಯ ನಿವಾಸಿ. ಮಾಹಿತಿ ಪಡೆದ ಅಧಿಕಾರಿಗಳು ಅವಶೇಷಗಳಡಿ ಸಿಲುಕಿದ್ದವರ ರಕ್ಷಣೆಗೆ ಕಾರ್ಯಾಚರಣೆ ನಡೆಸಿದರು. ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳದಲ್ಲಿ ಭಾರೀ ಪೊಲೀಸ್ ತಂಡವನ್ನು ನಿಯೋಜಿಸಲಾಗಿತ್ತು.

ಮತ್ತಷ್ಟು ಓದಿ: Viral Video: ಫ್ಲಿಪ್​ಕಾರ್ಟ್​; ಮುರಿದ ಕಿಚನ್​ ಚಿಮಣಿ, ಕೊನೆಗೂ ಪರಿಹಾರ ಪಡೆದ ಗ್ರಾಹಕರು

ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಘಟನೆಗೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ