AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿ ರಾಜ್ಯಸಭಾ ಸದಸ್ಯೆ ಅರ್ಪಿತಾ ಘೋಷ್​ ರಾಜೀನಾಮೆ; ಹೆಚ್ಚೇನೂ ಪ್ರತಿಕ್ರಿಯೆ ನೀಡದ ಪಕ್ಷ

Arpita Ghosh: ರಾಜ್ಯಸಭೆಯಲ್ಲಿ ನಡೆಯುವ ಪ್ರತಿಭಟನೆಗಳಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದ ಅರ್ಪಿತಾ ಘೋಷ್​​ರನ್ನು ಇತ್ತೀಚೆಗೆ ಆಕೆಯ ಮೂವರು ಸಹೋದ್ಯೋಗಿಗಳೊಂದಿಗೆ ಅಮಾನತುಗೊಳಿಸಲಾಗಿತ್ತು.

ಟಿಎಂಸಿ ರಾಜ್ಯಸಭಾ ಸದಸ್ಯೆ ಅರ್ಪಿತಾ ಘೋಷ್​ ರಾಜೀನಾಮೆ; ಹೆಚ್ಚೇನೂ ಪ್ರತಿಕ್ರಿಯೆ ನೀಡದ ಪಕ್ಷ
ಅರ್ಪಿತಾ ಘೋಷ್​
TV9 Web
| Edited By: |

Updated on: Sep 16, 2021 | 1:35 PM

Share

ತೃಣಮೂಲ ಕಾಂಗ್ರೆಸ್​ ರಾಜ್ಯಸಭೆ ಸಂಸದೆ ಅರ್ಪಿತಾ ಘೋಷ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅರ್ಪಿತಾ ಘೋಷ್​ ನಿನ್ನೆ  ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಅವರು ಅದನ್ನು ಅಂಗೀಕಾರ ಮಾಡಿದ್ದಾರೆ.  2020ರ ಏಪ್ರಿಲ್​ 3ರಂದು ಅವರು ರಾಜ್ಯಸಭೆಗೆ ಚುನಾಯಿತರಾಗಿದ್ದು, ಇನ್ನೂ 5ವರ್ಷಗಳ ಕಾಲ ಅಧಿಕಾರದ ಅವಧಿ ಬಾಕಿ ಇತ್ತು. ಆದರೆ ಅದಕ್ಕೂ ಮೊದಲೇ ರಾಜೀನಾಮೆ ಸಲ್ಲಿಸಿದ್ದಾರೆ. ಅದಕ್ಕೂ ಮೊದಲು 2014ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಬಾಲುರ್​ಘಾಟ್​​ ಕ್ಷೇತ್ರದಿಂದ ಗೆದ್ದು ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಅದರೊಂದಿಗೆ ಅವರು ಥಿಯೇಟರ್​ ಆರ್ಟಿಸ್ಟ್​. ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ.  

ಇನ್ನು ಅರ್ಪಿತಾ ಘೋಷ್​ ಪಕ್ಷದ ಇಚ್ಛೆಗೆ ಅನುಗುಣವಾಗಿಯೇ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳಿಂತ ತಿಳಿದುಬಂದಿದೆ. ಹಾಗಂತ ಅವರ ರಾಜೀನಾಮೆಗೆ ಕಾರಣವೇನು ಎಂಬುದಿನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಕಾರ್ಯಕಾರಿ ಅಧಿಕಾರಿಯೊಬ್ಬರು, ಬೇರೆ ಹೊಸಬರಿಗಾಗಿ ಯಾರಾದರೂ ಜಾಗ ಬಿಟ್ಟುಕೊಡಲೇಬೇಕಾಗಿತ್ತು ಎಂದು ಹೇಳಿದ್ದಾರೆ.

ಇತ್ತೀಚೆಗೆ ಅಮಾನತಾಗಿದ್ದರು  ರಾಜ್ಯಸಭೆಯಲ್ಲಿ ನಡೆಯುವ ಪ್ರತಿಭಟನೆಗಳಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದ ಅರ್ಪಿತಾ ಘೋಷ್​​ರನ್ನು ಇತ್ತೀಚೆಗೆ ಆಕೆಯ ಮೂವರು ಸಹೋದ್ಯೋಗಿಗಳೊಂದಿಗೆ ಅಮಾನತುಗೊಳಿಸಲಾಗಿತ್ತು. ಅದಾದ ಮೇಲೆ ಕೂಡ ಅವರೆಲ್ಲ ಸದನದ ಹೊರಗೆ ಪ್ರತಿಭಟನೆ ನಡೆಸಿದ್ದರು. ಅಂದು ಸದನದ ಕೊನೆಯಲ್ಲಿ, ತಮ್ಮ ತಮ್ಮ ಬ್ಯಾಗ್​ಗಳನ್ನು ತೆಗೆದುಕೊಳ್ಳಲು ಒಳಗೆ ಬಂದಾಗಲೂ ಕೂಡ ಭದ್ರತಾ ಸಿಬ್ಬಂದಿಯೊಂದಿಗೆ ಜಗಳ ಮಾಡಿದ್ದರು. ಟೇಬಲ್​ಗೆ ಹಾಕಿದ್ದ ಗಾಜಿನ ಹಲಗೆಗಳನ್ನು ಮುರಿದು ಹಾಕಿದ್ದರು. ಈ ಗಲಾಟೆಯಲ್ಲಿ ಮಹಿಳಾ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ದೂರು ನೀಡಿದ್ದರು.

ಇದನ್ನೂ ಓದಿ: ಹೈದರಾಬಾದ್: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದ ಆರೋಪಿಯ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ

‘ಬೂಸ್ಟರ್ ಡೋಸ್​​ನಿಂದ ರೋಗ ನಿರೋಧಕ ಪ್ರತಿಕ್ರಿಯೆ ಹೆಚ್ಚಾಗಿ ನಂತರ ಸಂಕುಚಿತವಾಗುತ್ತದೆ’; ಕೊವಿಡ್ 3ನೇ ಡೋಸ್ ಎಷ್ಟು ಪರಿಣಾಮಕಾರಿ?

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ