AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಆಂಬ್ಯುಲೆನ್ಸ್​ಗೆ ಕೊಡಲು ಹಣವಿಲ್ಲದೆ ಮಗನ ಶವವನ್ನು ಚೀಲದೊಳಗೆ ಹೊತ್ತು 200 ಕಿ.ಮೀ ಪ್ರಯಾಣಿಸಿದ ವ್ಯಕ್ತಿ

ವಲಸೆ ಕಾರ್ಮಿಕರೊಬ್ಬರು ಆಂಬ್ಯುಲೆನ್ಸ್​ಗೆ ಕೊಡಲು ಹಣವಿಲ್ಲದೆ ಮಗನ ಶವವನ್ನು ಚೀಲದೊಳಗೆ ಹಾಕಿ 200 ಕಿ.ಮೀಗಳಷ್ಟು ದೂರ ಪ್ರಯಾಣಿಸಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

West Bengal: ಆಂಬ್ಯುಲೆನ್ಸ್​ಗೆ ಕೊಡಲು ಹಣವಿಲ್ಲದೆ ಮಗನ ಶವವನ್ನು ಚೀಲದೊಳಗೆ ಹೊತ್ತು 200 ಕಿ.ಮೀ ಪ್ರಯಾಣಿಸಿದ ವ್ಯಕ್ತಿ
ಮಗು
ನಯನಾ ರಾಜೀವ್
|

Updated on: May 15, 2023 | 8:38 AM

Share

ವಲಸೆ ಕಾರ್ಮಿಕರೊಬ್ಬರು ಆಂಬ್ಯುಲೆನ್ಸ್​ಗೆ ಕೊಡಲು ಹಣವಿಲ್ಲದೆ ಮಗನ ಶವವನ್ನು ಚೀಲದೊಳಗೆ ಹಾಕಿ 200 ಕಿ.ಮೀಗಳಷ್ಟು ದೂರ ಪ್ರಯಾಣಿಸಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮುಸ್ತಫಾನಗರ ಗ್ರಾಮಪಂಚಾಯತ್​ನ ಡಂಗಿಪಾರಾ ಗ್ರಾಮದ ವಲಸೆ ಕಾರ್ಮಿಕ ಅಸೀಂ ದೇವಶರ್ಮಾ, ಆಂಬ್ಯುಲೆನ್ಸ್​ ಚಾಲಕ ಕೇಳಿದ ಶುಲ್ಕವನ್ನು ಭರಿಸಲು ಸಾಧ್ಯವಾಗದ ಕಾರಣ ಶವವನ್ನು ಹೊತ್ತುಕೊಂಡು 200 ಕಿ.ಮೀ ದೂರ ಸಾಗಿದ್ದಾರೆ. ಕಣ್ಣೀರು ತಡೆದುಕೊಂಡು ಬಸ್ ಹತ್ತಿದ್ದರು, ಬಸ್​ನಲ್ಲಿ ಯಾರಿಗೂ ತಿಳಿಯದಂತೆ ಎಚ್ಚರವಹಿಸಿದ್ದರು, ಒಂದೊಮ್ಮೆ ಹೇಳಿಬಿಟ್ಟರೆ ತಮ್ಮನ್ನು ಬಸ್ಸಿನಿಂದ ಇಳಿಸಬಹುದು ಎನ್ನುವ ಭಯವಿತ್ತು ಎಂದು ಹೇಳಿಕೊಂಡಿದ್ದಾರೆ.

ಅಸೀಂ ದೇವಶರ್ಮಾ ಅವರ ಅವಳಿ ಮಕ್ಕಳಿಬ್ಬರೂ ತೀವ್ರ ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ. ಅವರನ್ನು ಆರಂಭದಲ್ಲಿ ಕಲಿಯಗಂಜ್​ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ನಂತರ ಮಕ್ಕಳ ಸ್ಥಿತಿ ಹದಗೆಟ್ಟ ಪರಿಣಾಮ ರಾಯ್​ಗಂಜ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಯಿತು.

ಮೂಲಗಳ ಪ್ರಕಾರ, ಇವರ ಇಬ್ಬರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಉತ್ತರ ಬಂಗಾಳ ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಕ್ಕಳ ಆರೋಗ್ಯ ಹದಗೆಡುತ್ತಲೇ ಇದ್ದ ಹಿನ್ನೆಲೆಯಲ್ಲಿ ಅಸೀಂ ದೇವಶರ್ಮಾ ಅವರ ಪತ್ನಿ ಮಕ್ಕಳೊಂದಿಗೆ ಮನೆಗೆ ತೆರಳಿದ್ದರು, ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನೊಂದು ಮಗು ಶನಿವಾರ ರಾತ್ರಿ ಮೃತಪಟ್ಟಿದೆ.

ಮೃತ ಮಗನ ಶವವನ್ನು ತನ್ನ ಮನೆಗೆ ಕರೆ ತರಲು ವೈದ್ಯಕೀಯ ಕಾಲೇಜು ಆಸ್ಪತ್ರೆಯನ್ನು ಸಂಪರ್ಕಿಸಿದ್ದರು, ಆದರೆ ಆಂಬ್ಯುಲೆನ್ಸ್​ ಚಾಲಕ 8 ಸಾವಿರ ರೂ ಕೊಡುವಂತೆ ಹೇಳಿದ್ದರು.

ಮತ್ತಷ್ಟು ಓದಿ:ಹಾಡುಹಗಲೇ ಸಾರಿಗೆ ಸಂಸ್ಥೆಯ ಚಾಲಕನ ಬರ್ಬರ ಹತ್ಯೆ; ಜನನಿಬಿಡ ಪ್ರದೇಶದಲ್ಲೆ ಚಾಲಕನನ್ನ ಅಟ್ಟಾಡಿಸಿಕೊಂಡು ಕೊಚ್ಚಿ ಕೊಂದ ಹಂತಕರು

ಅಸೀಮ್ ದೇವಶರ್ಮಾ ಅವರು ಬಂಗಾಳದ ಸಿಲಿಗುರಿಯಿಂದ ರಾಯ್‌ಗಂಜ್‌ಗೆ ಖಾಸಗಿ ಬಸ್‌ ಹತ್ತಿದರು ಮತ್ತು ನಂತರ ಅವರ ಹುಟ್ಟೂರಾದ ಕಲಿಯಗಂಜ್‌ಗೆ ಹೋಗಲು ಮತ್ತೊಂದು ಬಸ್‌ನಲ್ಲಿ ಪ್ರಯಾಣಿಸಿದರು. ಕಲಿಯಾಗಂಜ್‌ನ ವಿವೇಕಾನಂದ ಛೇದಕವನ್ನು ತಲುಪಿದ ನಂತರ, ಅಸಿಮ್ ದೇವಶರ್ಮಾ ಸಹಾಯವನ್ನು ಕೋರಿದರು ಮತ್ತು ಆಂಬ್ಯುಲೆನ್ಸ್‌ಗೆ ವ್ಯವಸ್ಥೆ ಮಾಡಿದರು.

ಆರು ದಿನಗಳ ಕಾಲ ಸಿಲಿಗುರಿಯ ಉತ್ತರ ಬಂಗಾಳ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ನಂತರ ನನ್ನ ಐದು ತಿಂಗಳ ಮಗು ಕಳೆದ ರಾತ್ರಿ ಸಾವನ್ನಪ್ಪಿದ್ದಾನೆ, ಈ ಸಮಯದಲ್ಲಿ 16,000 ರೂ. ಖರ್ಚು ಮಾಡಿದ್ದಾಗಿ ತಿಳಿಸಿದ್ದಾರೆ.

ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯಿಂದ ಸುಮಾರು 200 ಕಿಮೀ ದೂರದಲ್ಲಿರುವ ಉತ್ತರ ದಿನಾಜ್‌ಪುರ ಜಿಲ್ಲೆಯ ಕಲಿಯಗಂಜ್‌ಗೆ ಯಾರಿಗೂ ತಿಳಿಸದೆ ಬಸ್‌ನಲ್ಲಿ ಪ್ರಯಾಣಿಸಿದ್ದೇನೆ, ಸಿಬ್ಬಂದಿ, ಸಹ ಪ್ರಯಾಣಿಕರಿಗೆ ಇದರ ಬಗ್ಗೆ ತಿಳಿದರೆ ಅವರು ಬಸ್​ನಿಂದ ಇಳಿಸುತ್ತಾರೆ ಎನ್ನುವ ಭಯವಿತ್ತು ಎಂದು ಅಸೀಂ ಎಂದಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿಜೆಪಿಯ ಸುವೇಂದು ಅಧಿಕಾರಿ ತೃಣಮೂಲ ಕಾಂಗ್ರೆಸ್ ಸರ್ಕಾರದ ಸ್ವಾಸ್ಥ್ಯ ಸತಿ ಆರೋಗ್ಯ ವಿಮಾ ಯೋಜನೆಯ ಪರಿಣಾಮಕಾರಿತ್ವವನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ